IND vs SA: ಭಾರತದ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ದಕ್ಷಿಣ ಆಫ್ರಿಕಾ!
IND vs SA Match Toss: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇದೀಗ ನಡಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆರಿಸಿಕೊಂಡಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ವಿಶ್ವಕಪ್ ಪಂದ್ಯ. -
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8ರ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಹರಿಣ ಪಡೆಯ ನಾಯಕ ಏಡೆನ್ ಮಾರ್ಕ್ರಮ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ್ದಾರೆ. ಆ ಮೂಲಕ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಚೇಸಿಂಗ್ ಮಾಡಲಿದೆ. ಅಂದ ಹಾಗೆ ಈ ಎರಡೂ ತಂಡಗಳ ಪಾಲಿಗೆ ಅಂತಿಮ ಎಂಟರ ಘಟ್ಟದಲ್ಲಿ ಮೊದಲನೇ ಪಂದ್ಯವಾಗಿದೆ.
ಭಾರತ ತಂಡ ʻಎʼ ಗುಂಪಿನಲ್ಲಿ ಆಡಿದ್ದ ನಾಲ್ಕೂ ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಪಡೆಯುವ ಮೂಲಕ ಸೂಪರ್-8ಕ್ಕೆ ಅರ್ಹತೆ ಪಡೆದಿತ್ತು. ಅದೇ ರೀತಿ ದಕ್ಷಿಣ ಆಫ್ರಿಕಾ ತಂಡ ಕೂಡ ಗ್ರೂಪ್ ʻಡಿʼನಲ್ಲಿ ಆಡಿದ್ದ ನಾಲ್ಕೂ ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಅಂತಿಮ ಎಂಟರ ಘಟ್ಟಕ್ಕೆ ಪ್ರವೇಶ ಮಾಡಿತ್ತು. ಇದೀಗ ಸೂಪರ್-8ರ ಹಂತದಲ್ಲಿ ಮೊದಲನೇ ಗುಂಪಿನಲ್ಲಿ ಈ ಎರಡೂ ತಂಡಗಳು ಸ್ಥಾನವನ್ನು ಪಡೆದಿವೆ.
ಭಾರತ-ಪಾಕ್ ಆಟಗಾರರು ಶೇಕ್ ಹ್ಯಾಂಡ್ ಮಾಡಬೇಕು, ಇದು ಕ್ರೀಡಾ ಮನೋಭಾವ: ದಿಗ್ವಿಜಯ ಸಿಂಗ್!
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತ ತಂಡ ಗೆಲುವು ಪಡೆಯುವ ಮೂಲಕ ಎರಡನೇ ಚಾಂಪಿಯನ್ ಆಗಿತ್ತು. ಇದೀಗ ಟೀಮ್ ಇಂಡಿಯಾ ವಿರುದ್ಧ ಸೇಡು ತೀರಿಸಿಕೊಳ್ಳಲು ಹರಿಣ ಪಡೆ ಎದುರು ನೋಡುತ್ತಿದೆ. ಆದರೆ, ಭಾರತ ತಂಡ ಕೂಡ ಅತ್ಯುತ್ತಮ ಗುಣಮಟ್ಟವನ್ನು ಹೊಂದಿದೆ.
Here is #TeamIndia's Playing 1️⃣1️⃣ for the Super 8 clash against South Africa! 🙌
— BCCI (@BCCI) February 22, 2026
Updates ▶️ https://t.co/ZE8J4fF18z #T20WorldCup | #MenInBlue | #INDvSA pic.twitter.com/F0DYleKAEU
ಭಾರತ ತಂಡದಲ್ಲಿ ಬದಲಾವಣೆ ಇಲ್ಲ
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ನೆದರ್ಲೆಂಡ್ಸ್ ವಿರುದ್ಧ ಆಡಿದ್ದ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ ಎಂದು ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದಾರೆ. ಸತತ ಮೂರೂ ಪಂದ್ಯಗಳಲ್ಲಿ ವಿಫಲರಾಗಿ ಇನ್ನೂ ಖಾತೆ ತೆರೆಯದ ಆರಂಭಿಕ ಅಭಿಷೇಕ್ ಶರ್ಮಾಗೆ ಮತ್ತೊಮ್ಮೆ ಟೀಮ್ ಮ್ಯಾನೇಜ್‌ಮೆಂಟ್ ಬೆಂಬಲವನ್ನು ನೀಡಿದೆ.
Toss Update 🪙
— Proteas Men (@ProteasMenCSA) February 22, 2026
🇿🇦 South Africa have won the toss and elected to Bat first.
We’re all set for a fiery contest between the #T20WorldCup 2024 Finalists in Ahmedabad! 🏏
Here’s how #TheProteas line up for this much anticipated battle. ⚔️#Unbreakable pic.twitter.com/sWwdLgZp3J
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ Xiನಲ್ಲಿ4 ಬದಲಾವಣೆ
ಇನ್ನು ಎದುರಾಳಿ ದಕ್ಷಿಣ ಆಫ್ರಿಕಾ ತಂಡದ ಪ್ಲೇಯಿಂಗ್ XIನಲ್ಲಿ 4 ಬದಲಾವಣೆಯನ್ನು ತರಲಾಗಿದೆ. ಕೇಶವ್ ಮಹರಾಜ್, ಲುಂಗಿ ಎನ್ಗಿಡಿ, ಮಾರ್ಕೊ ಯೆನ್ಸನ್ ಹಾಗೂ ಡೇವಿಡ್ ಮಿಲ್ಲರ್ ಅವರು ದಕ್ಷಿಣ ಆಫ್ರಿಕಾ ತಂಡದ ಆಡುವ ಬಳಗಕ್ಕೆ ಮರಳಿದ್ದಾರೆ. ಆ ಮೂಲಕ ಹರಿಣ ಪಡೆ ತನ್ನ ಪ್ಲೇಯಿಂಗ್ XI ಅನ್ನು ಬಲಿಷ್ಠಗೊಳಿಸಿಕೊಂಡಿದ್ದಾರೆ.
Aiden Markram wins the toss & South Africa choose to bat first in this much-awaited Super 8 clash. 🔥
— Star Sports (@StarSportsIndia) February 22, 2026
ICC Men's #T20WorldCup | SUPER 8 | #INDvSA | LIVE NOW 👉 https://t.co/dZWPZfqfbO pic.twitter.com/vmu1lSGFV5
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ದಕ್ಷಿಣ ಆಫ್ರಿಕಾ: ಏಡೆನ್ ಮಾರ್ಕ್ರಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಮಾರ್ಕೊ ಯೆನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ