ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SRH vs LSG: ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಲಖನೌ ಸೂಪರ್‌ ಜಯಂಟ್ಸ್‌!

SRH vs LSG: ಹೈದರಾಬಾದ್‌ನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಏಳನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಎಲ್‌ಎಸ್‌ಜಿ ನಾಯಕ ರಿಷಭ್‌ ಪಂತ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

SRH vs LSG: ಟಾಸ್‌ ಸೋತ ಎಸ್‌ಆರ್‌ಎಚ್‌ ಮೊದಲ ಬ್ಯಾಟಿಂಗ್‌!

ಸನ್‌ರೈಸರ್ಸ್‌ ಹೈದರಾಬಾದ್‌ vs ಲಖನೌ ಸೂಪರ್‌ ಜಯಂಟ್ಸ್‌

Profile Ramesh Kote Mar 27, 2025 7:21 PM

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಮಗಣದಲ್ಲಿಇದೀಗ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಏಳನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಲಖನೌ ಸೂಪರ್‌ ಜಯಂಟ್ಸ್‌ ತಂಡಗಳು (SRH vs LSG) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಎಲ್‌ಎಸ್‌ಜಿ ನಾಯಕ ರಿಷಭ್‌ ಪಂತ್‌ (Rishabh Pant) ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎಸ್‌ಆರ್‌ಎಚ್‌ ಮೊದಲು ಬ್ಯಾಟ್‌ ಮಾಡುತ್ತಿದೆ.

ಟಾಸ್‌ ಗೆದ್ದ ಲಖನೌ ಸೂಪರ್‌ ಜಯಂಟ್ಸ್‌ ತಂಡದ ನಾಯಕ ರಿಷಭ್‌ ಪಂತ್‌, ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಇದೇ ವೇಳೆ ತನ್ನ ಪ್ಲೇಯಿಂಗ್‌ XI ಬಗ್ಗೆ ಅಪ್‌ಡೇಟ್‌ ನೀಡಿದರು. ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯಕ್ಕೆ ಲಖನೌ ಸೂಪರ್‌ ಜಯಂಟ್ಸ್‌ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯವಾಗಿದ್ದ ಶಹಬಾಝ್‌ ಅಹ್ಮದ್‌ ಬದಲಿಗೆ ಆವೇಶ್‌ ಖಾನ್‌ಗೆ ಪ್ಲೇಯಿಂಗ್‌ Xiನಲ್ಲಿ ಸ್ಥಾನವನ್ನು ನೀಡಲಾಗಿದೆ. ಇನ್ನು ಸನ್‌ರೈಸರ್ಸ್‌ ಹೈದರಾಬಾದ್‌ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಜಸ್ಥಾನ್‌ ರಾಯಲ್ಸ್‌ ವಿರುದ್ದ ಅದೇ ಆಡುವ ಬಳಗವನ್ನು ಉಳಿಸಿಕೊಳ್ಳಲಾಗಿದೆ.

RCB vs CSK: ಭುವನೇಶ್ವರ್‌ ಕುಮಾರ್‌ ಇನ್‌? ಸಿಎಸ್‌ಕೆ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ಸಾಧ್ಯತೆ!

ಇತ್ತಂಡಗಳ ಪ್ಲೇಯಿಂಗ್‌ XI

ಸನ್‌ರೈಸರ್ಸ್‌ ಹೈದರಾಬಾದ್‌: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್‌, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಅನಿಕೇತ್ ವರ್ಮಾ, ಅಭಿನವ್ ಮನೋಹರ್, ಪ್ಯಾಟ್ ಕಮಿನ್ಸ್ (ನಾಯಕ), ಸಿಮರ್ಜೀತ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಶಮಿ



ಲಖನೌ ಸೂಪರ್‌ ಜಯಂಟ್ಸ್‌: ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ರಿಷಭ್ ಪಂತ್(ನಾಯಕ, ವಿ.ಕೀ), ಅಬ್ದುಲ್ ಸಮದ್, ಡೇವಿಡ್ ಮಿಲ್ಲರ್, ಆಯುಷ್ ಬದೋನಿ, ಶಾರ್ದುಲ್ ಠಾಕೂರ್, ರವಿ ಬಿಷ್ಣೋಯ್, ಆವೇಶ್ ಖಾನ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್



ಮೊದಲನೇ ಪಂದ್ಯದಲ್ಲಿ ಸೋತಿದ್ದ ಎಲ್‌ಎಸ್‌ಜಿ

ರಿಷಭ್‌ ಪಂತ್‌ ನಾಯಕತ್ವದ ಲಖನೌ ಸೂಪರ್‌ ಜಯಂಟ್ಸ್‌ ತಂಡ ತನ್ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆಲುವಿನ ಸನಿಹ ಬಂದು ಅಂತಿಮವಾಗಿ ಕೇವಲ ಒಂದು ವಿಕೆಟ್‌ನಿಂದ ಸೋಲು ಅನುಭವಿಸಿತ್ತು. ಲಖನೌ ನೀಡಿದ್ದ 210 ರನ್‌ಗಳ ಗುರಿಯನ್ನು ಹಿಂಬಾಲಿಸಿದ್ದ ಡೆಲ್ಲಿ, 65 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆ ಮೂಲಕ ಸೋಲಿನ ಸುಳಿಗೆ ಸಿಲುಕಿತ್ತು. ಆದರೆ, ವಿಪ್ರಾಜ್‌ ನಿಗಮ್‌ ಹಾಗೂ ಆಶುತೋಷ್‌ ಶರ್ಮಾ ಅವರ ನಿರ್ಣಾಯಕ ಬ್ಯಾಟಿಂಗ್‌ ಬಲದಿಂದ ಅಕ್ಷರ್‌ ಪಟೇಲ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಇನ್ನೂ ಮೂರು ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತ್ತು.



ಶುಭಾರಂಭ ಕಂಡಿರುವ ಎಸ್‌ಆರ್‌ಎಚ್‌

ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 2025ರ ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಎದುರು 44 ರನ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಹೈದರಾಬಾದ್‌ ತಂಡ, ಇಶಾನ್‌ ಕಿಶನ್‌ ಶತಕದ ಬಲದಿಂದ 286 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಆರ್‌ಆರ್‌, ಕಠಿಣ ಹೋರಾಟ ನಡೆಸಿದ ಹೊರತಾಗಿಯೂ 242 ರನ್‌ಗಳಿಗೆ ಸೀಮಿತವಬಾಗಿತ್ತು.