ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಸಂಬಂಧ ಸ್ಪಷ್ಟನೆ ನೀಡಿದ ರವೀಂದ್ರ ಜಡೇಜಾ!
Ravindra Jadeja on his Retirement Romuors 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದ ಸಮಯದಲ್ಲಿ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಪಂದ್ಯದ ಬಳಿಕ ಇದು ನಡೆಯಲಿಲ್ಲ. ಇದೀಗ ರವೀಂದ್ರ ಜಡೇಜಾ ಅವರೇ ಸ್ವತಃ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಿವೃತ್ತಿ ಬಗ್ಗೆ ರವೀಂದ್ರ ಜಡೇಜಾ ಸ್ಟಷ್ಟನೆ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಊಹಾಪೋಹಗಳ ಸಂಬಂಧ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ಬಳಿಕ ರವೀಂದ್ರ ಜಡೇಜಾ ನಿವೃತ್ತಿ ಘೋಷಿಸಬಹುದು ಎಂದು ಹೇಳಲಾಗುತ್ತಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಜಡೇಜಾ ಮಾತ್ರವಲ್ಲ, ನಾಯಕ ರೋಹಿತ್ ಶರ್ಮಾ ಅವರ ನಿವೃತ್ತಿಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆದಿತ್ತು. ಆದರೆ ಅವರು ಪತ್ರಿಕಾಗೋಷ್ಠಿಯಲ್ಲಿ ತಾನು ನಿವೃತ್ತಿ ಪಡೆಯುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದರು.
ಚಾಂಪಿಯನ್ಸ್ ಟ್ರೋಫಿ ಗೆದ್ದ ಒಂದು ದಿನದ ಬಳಿಕ ರವೀಂದ್ರ ಜಡೇಜಾ ಅವರು, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರಮುಖ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ ಮತ್ತು ತಮ್ಮ ನಿವೃತ್ತಿಗೆ ಸಂಬಂಧಿಸಿದ ದೊಡ್ಡ ಮಾಹಿತಿಯನ್ನು ನೀಡಿದ್ದಾರೆ. "ಅನಗತ್ಯವಾಗಿ ಯಾವುದೇ ರೀತಿಯ ವದಂತಿಗಳನ್ನು ಹರಡಬೇಡಿ, ಧನ್ಯವಾದಗಳು," ಎಂದು ರವೀಂದ್ರ ಜಡೇಜಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಿಂದ ಜಡೇಜಾ, ಸದ್ಯಕ್ಕೆ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳುವುದಿಲ್ಲ ಎಂಬುದು ಸ್ಟಷ್ಟವಾಗಿದೆ.
IND vs NZ: ರೋಹಿತ್ ಶರ್ಮಾ ಬ್ಯಾಟಿಂಗ್‌ನಿಂದ ಬೌಲರ್‌ಗಳು ಭಯ ಬಿದ್ದಿದ್ದರೆಂದ ಮಿಚೆಲ್ ಸ್ಯಾಂಟ್ನರ್!
2024ರಲ್ಲಿ ಟಿ20ಐ ಕ್ರಿಕೆಟ್‌ಗೆ ವಿದಾಯ
ಕಳೆದ ವರ್ಷ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಬಳಿಕ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಆ ಸಮಯದಲ್ಲಿಯೂ ಇದೇ ರೀತಿಯ ವಾತಾವರಣವಿತ್ತು. ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಆಗಿತ್ತು. ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ನಂತರ, ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಕ್ಷಣ ನಿವೃತ್ತಿ ಘೋಷಿಸಿದ್ದರು. ಇದರೊಂದಿಗೆ ರವೀಂದ್ರ ಜಡೇಜಾ ಕೂಡ ವಿದಾಯ ಹೇಳಿದ್ದರು. ಅದರಂತೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಅವರಂತಹ ಆಟಗಾರರು ಮತ್ತೊಮ್ಮೆ ನಿವೃತ್ತಿ ಘೋಷಿಸಬಹುದು ಎಂದು ನಂಬಲಾಗಿತ್ತು. ಆದರೆ, ಅಉ ನಡೆಯಲಿಲ್ಲ.

ರವೀಂದ್ರ ಜಡೇಜಾ ಅಂಕಿಅಂಶಗಳು
ರವೀಂದ್ರ ಜಡೇಜಾ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಅವರು ಇದುವರೆಗೆ ಟೀಮ್ ಇಂಡಿಯಾ ಪರ ಒಟ್ಟು 80 ಟೆಸ್ಟ್ ಮತ್ತು 204 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಜಡೇಜಾ 3370 ರನ್ ಗಳಿಸಿದ್ದಾರೆ ಮತ್ತು 323 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಅವರು ಏಕದಿನ ಕ್ರಿಕೆಟ್‌ನಲ್ಲಿ 2806 ರನ್ ಮತ್ತು 231 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ, ಟಿ20ಐ ಮಾದರಿಯಲ್ಲಿ ಜಡೇಜಾ, ಟೀಮ್ ಇಂಡಿಯಾ ಪರ 515 ರನ್ ಗಳಿಸಿದ್ದಾರೆ ಮತ್ತು 54 ವಿಕೆಟ್‌ಗಳನ್ನು ಪಡೆದಿದ್ದಾರೆ.