ʻ2027ರ ವಿಶ್ವಕಪ್ ಗೆಲ್ಲುವುದುʼ: ತಮ್ಮ ಮುಂದಿನ ಗುರಿ ಯಾವುದೆಂದು ತಿಳಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ ಮುಂದಿನ ದೊಡ್ಡ ಹೆಜ್ಜೆಯನ್ನು ಬಹಿರಂಗಪಡಿಸಿದ್ದಾರೆ ಮತ್ತು 2027 ರ ವಿಶ್ವಕಪ್ ಗೆಲ್ಲಲು ಪ್ರಯತ್ನಿಸುವುದಾಗಿ ಹೇಳಿಕೊಂಡಿದ್ದಾರೆ. ಆ ಮೂಲಕ ಅವರು ನಿವೃತ್ತಿಯ ಸಾಧ್ಯತೆಯನ್ನು ತಿರಸ್ಕರಿಸಿದ್ದಾರೆ. 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.

ವಿರಾಟ್ ಕೊಹ್ಲಿ

ನವದೆಹಲಿ: ಕಳೆದ 2013ರಿಂದ ಇಲ್ಲಿಯವರೆಗೂ ಭಾರತ ತಂಡಕ್ಕೆ (Indian Cricket Team) ಐಸಿಸಿ ಏಕದಿನ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ 2024ರಲ್ಲಿ ಟಿ20 ವಿಶ್ವಕಪ್ ಮತ್ತು 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. 2027ರಲ್ಲಿ ದಕ್ಷಿಣ ಆಫ್ರಿಕಾ, ನಮೀಬಿಯಾ ಮತ್ತು ಜಿಂಬಾಬ್ವೆ ಜಂಟಿ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡಕ್ಕೆ ಏಕದಿನ ವಿಶ್ವಕಪ್ ಗೆದ್ದು ಕೊಡುವುದು ನನ್ನ ಮುಖ್ಯ ಗುರಿ ಎಂದು ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಬಹಿರಂಗಪಡಿಸಿದ್ದಾರೆ.
ವಿರಾಟ್ ಕೊಹ್ಲಿಗೆ ತಮ್ಮ ವೃತ್ತಿಜೀವನದ ಮುಂದಿನ ದೊಡ್ಡ ಹೆಜ್ಜೆಯ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಆಸೆ ಇದೆ ಎಂದು ಹೇಳಿಕೊಂಡಿದ್ದರೆ. ವೈರಲ್ ಆಗಿರುವ ವಿಡಿಯೊದಲ್ಲಿ "ಮುಂದಿನ ದೊಡ್ಡ ಹೆಜ್ಜೆ? ನನಗೆ ಗೊತ್ತಿಲ್ಲ. ಬಹುಶಃ ನಾನು ಮುಂದಿನ ವಿಶ್ವಕಪ್ 2027 ಗೆಲ್ಲಲು ಪ್ರಯತ್ನಿಸುತ್ತೇನೆ," ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ. ಆ ಮೂಲಕ ಇನ್ನಷ್ಟು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತೇನೆಂಬುದನ್ನು ಅಭಿಮಾನಿಗಳ ಮುಂದೆ ಇಟ್ಟಿದ್ದಾರೆ.
IPL 2025: ʻನಾನು ಓಪನಿಂಗ್ ಮಾಡ್ಲಾ?ʼ- ಕೆಕೆಆರ್‌ಗೆ ರಮಣ್‌ದೀಪ್ ಸಿಂಗ್ ಮನವಿ!
ವಿರಾಟ್ ಕೊಹ್ಲಿ ತಮ್ಮ ಏಕೈಕ ಉತ್ತರದ ಮೂಲಕ ಹಲವು ಪ್ರಶ್ನೆಗಳಿಗೆ ಸ್ಪಷ್ಟತೆ ನೀಡಿದ್ದಾರೆ. ಅವರು ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿದ್ದಾರೆ. ಇದೀಗ ಅವರಿಗೆ 36 ವರ್ಷ ವಯಸ್ಸು. ಈ ಉತ್ತರದಿಂದ ವಿರಾಟ್ ನಿವೃತ್ತಿಯ ಉದ್ದೇಶ ಸದ್ಯಕ್ಕೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ವಿರಾಟ್ ಕೊಹ್ಲಿ 2008ರಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅವರು ಪ್ರಸ್ತುತ ವಿಶ್ವದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ, ಅವರು ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಮತ್ತು ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಎರಡೂ ಪಟ್ಟಿಗಳಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.
Question: Seeing In The Present, Any Hints About The Next Big Step?
— virat_kohli_18_club (@KohliSensation) April 1, 2025
Virat Kohli Said: The Next Big Step? I Don't Know. Maybe Try To Win The Next World Cup 2027.🏆🤞 pic.twitter.com/aq6V9Xb7uU
2023ರ ವಿಶ್ವಕಪ್ ಫೈನಲ್‌ನಲ್ಲಿ ಸೋತಿದ್ದ ಭಾರತ
ಭಾರತ ತಂಡ 2023ರ ಏಕದಿನ ವಿಶ್ವಕಪ್ ಗೆಲ್ಲಬೇಕಾಗಿತ್ತು. ಟೀಮ್ ಇಂಡಿಯಾ ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದದ ಫೈನಲ್ ಹಣಾಹಣಿಯಲ್ಲಿ ಭಾರತದ ವಿರುದ್ದ ಸೋಲು ಅನುಭವಿಸಿತ್ತು. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಆ ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಅವರು 11 ಪಂದ್ಯಗಳಲ್ಲಿ 765 ರನ್ ಗಳಿಸಿದ್ದಾರೆ. ಇದರಲ್ಲಿ ಅವರು 95.62ರ ಸರಾಸರಿಯಲ್ಲಿ ರನ್ ಗಳಿಸಿತ್ತು. ಮೂರು ಶತಕ ಮತ್ತು ಆರು ಅರ್ಧ ಶತಕಗಳನ್ನು ಸಿಡಿಸಿದ್ದರು. ವಿರಾಟ್ ಕೊಹ್ಲಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.