RR vs SRH: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್ ಹೈದರಾಬಾದ್!
RR vs SRH Match Toss: ಚಂಡೀಗಡದ ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್‌ಆರ್‌ಎಚ್ ಬೌಲಿಂಗ್ ಆಯ್ದುಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್-ರಾಜಸ್ಥಾನ್ ರಾಯಲ್ಸ್ ನಡುವಣ ಎಲಿಮಿನೇಟರ್ ಪಂದ್ಯ. -
ಚಂಡೀಗಢ: ಇಲ್ಲಿನ ಮುಲ್ಲಾನ್‌ಪುರ ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು (RR vs SRH) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್‌ಆರ್‌ಎಚ್ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದಾರೆ. ಹಾಗಾಗಿ ರಿಯಾನ್ ಪರಾಗ್‌ನಾಯಕತ್ವದ ಆರ್‌ಆರ್ ಮೊದಲು ಬ್ಯಾಟಿಂಗ್ ನಡೆಸಲಿದೆ. ಈ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಹಾಗಾಗಿ ಈ ಪಂದ್ಯ ಎರಡೂ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ ಲೀಗ್ ಹಂತದಲ್ಲಿ ಆಡಿದ್ದ 14 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಪಡೆಯುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸುವ ಮೂಲಕ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಿತು. ಅಂದ ಹಾಗೆ ರನ್‌ರೇಟ್ ಕಡಿಮೆ ಇಟ್ಟ ಕಾರಣ ಅಗ್ರ ಎರಡರಲ್ಲಿ ಸ್ಥಾನ ಪಡೆಯುವಲ್ಲಿ ಎಸ್‌ಆರ್‌ಎಚ್ ಕೂದಲೆಳೆಯ ಅಂತರದಲ್ಲಿ ವಿಫಲವಾಗಿತ್ತು. ಇನ್ನು ರಾಜಸ್ಥಾನ್ ರಾಯಲ್ಸ್ ತಂಡ ಆಡಿದ 14 ಪಂದ್ಯಗಳಿಗೆ 8 ರಲ್ಲಿ ಗೆಲುವು ಪಡೆಯುವ ಪ್ಲೇಆಫ್ಸ್‌ಗೆ ಅರ್ಹತೆ ಪಡೆಸಿತ್ತು.
ʻಭಾರತ ತಂಡದಲ್ಲಿ ರಜತ್ ಪಾಟಿದಾರ್‌ಗೆ ಸ್ಥಾನ ನೀಡಿʼ: ಬಿಸಿಸಿಐಗೆ ಆಕಾಶ್ ಚೋಪ್ರಾ ಆಗ್ರಹ!
ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರವೀಂದ್ರ ಜಡೇಜಾ ಪ್ಲೇಯಿಂಗ್ XIಗೆ ಮರಳಿದ್ದಾರೆ ಹಾಗೂ ಶುಭಮ್ ದುಬೇ ಇಂಪ್ಯಾಕ್ಟ್ ಸಬ್ ಆಗಿದ್ದಾರೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಡುವ ಬಳಗದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಪ್ರಫುಲ್ ಹಿಂಗೆ ತಂಡದ ಪ್ಲೇಯಿಂಗ್ ಇಲೆವೆನ್‌ಗೆ ಮರಳಿದ್ದಾರೆ.
The XI carrying the fire tonight 💪🔥 pic.twitter.com/bL5662M0fa
— SunRisers Hyderabad (@SunRisers) May 27, 2026
ಇತ್ತಂಡಗಳ ಪ್ಲೇಯಿಂಗ್ XI
ಸನ್‌ರೈಸರ್ಸ್ ಹೈದರಾಬಾದ್ : ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಾಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ
Same 15 that were named in Mumbai. Jaddu comes into the XI with Dubey moving to the impact list! pic.twitter.com/WJ1kTwvttm
— Rajasthan Royals (@rajasthanroyals) May 27, 2026
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ದಸೂನ್ ಶಣಕ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ