ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

T20 World Cup 2026: ಯುಎಸ್‌ಎ ವಿರುದ್ಧ 49 ಎಸೆತಗಳಲ್ಲಿ ಶತಕ ಸಿಡಿಸಿದ ಎನ್‌ ಜಗದೀಶನ್‌!

Narayan Jagadeesan Century: 2026ರ ಟಿ20 ವಿಶ್ವಕಪ್‌ ಟೂರ್ನಿಯ ಎರಡನೇ ಅಭ್ಯಾಸ ಪಂದ್ಯ ಭಾರತ ಎ ಮತ್ತು ಅಮೆರಿಕ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ನಾರಾಯಣ್ ಜಗದೀಶನ್ ಭಾರತ ಎ ಪರ ಶತಕ ಗಳಿಸಿದರು. ಅವರು 49 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದಾರೆ.

ಯುಎಸ್‌ಎ ವಿರುದ್ಧ ಶತಕ ಬಾರಿಸಿದ ಎನ್‌ ಜಗದೀಸನ್‌.

ನವಿ ಮುಂಬೈ: ಟಿ20 ವಿಶ್ವಕಪ್ ಟೂರ್ನಿಯ (T20 World Cup 2026) ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ನಾರಾಯಣ್ ಜಗದೀಶನ್ (N Jagadeesan) ಶತಕ ಸಿಡಿಸಿದ್ದಾರೆ. ಭಾರತ ಎ ತಂಡ ಯುಎಸ್ಎ ವಿರುದ್ಧ ಅಭ್ಯಾಸ ಪಂದ್ಯದಲ್ಲಿ (IND A vs USA) ಕಾದಾಟ ನಡೆಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ನಾಯಕ ಮೋನಾಂಕ್ ಪಟೇಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಭಾರತ ಎ ಪರ ಇನಿಂಗ್ಸ್‌ ಆರಂಭಿಸಿದ ನಾರಾಯಣ್ ಜಗದೀಶನ್ 49 ಎಸೆತಗಳಲ್ಲಿ 11 ಬೌಂಡರಿ ಮತ್ತು 10 ಸಿಕ್ಸರ್‌ಗಳೊಂದಿಗೆ ಶತಕವನ್ನು ಪೂರ್ಣಗೊಳಿಸಿದರು. ಆ ಮೂಲಕ ಭಾರತ ಎ ತಂಡ ದೊಡ್ಡ ಮೊತ್ತವನ್ನು ಕಲೆ ಹಾಕಲು ನೆರವು ನೀಡಿದರು.

30ರ ವಯಸ್ಸಿನ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ನಾರಾಯಣ್ ಜಗದೀಶನ್ ಆರಂಭದಿಂದಲೇ ಯುಎಸ್ಎ ಬೌಲರ್‌ಗಳನ್ನು ಒತ್ತಡಕ್ಕೆ ಒಳಪಡಿಸಿದರು. ಅವರು ತಮ್ಮ ಮೊದಲ 6 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿದರು, ಆದರೆ ನಂತರ ಮೂರನೇ ಓವರ್‌ನಲ್ಲಿ ಮಿಲಿಂದ್ ಕುಮಾರ್ ಎಸೆತದಲ್ಲಿ ಎರಡು ಸತತ ಬೌಂಡರಿಗಳನ್ನು ಬಾರಿಸಿದರು. ಅವರು 8ನೇ ಓವರ್‌ನಲ್ಲಿ ಮಿಲಿಂದ್ ಕುಮಾರ್ ಓವರ್‌ನಲ್ಲಿ 20 ರನ್ ಗಳಿಸಿದರು, ಆ ಮೂಲಕ 27 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರ್ಣಗೊಳಿಸಿದರು. ಅವರು ಬಳಿಕ ಹಿಂತಿರುಗಿ ನೋಡಲಿಲ್ಲ, ಮುಂದಿನ 22 ಎಸೆತಗಳಲ್ಲಿ ಶತಕವನ್ನು ತಲುಪಿದರು. ಅವರು 55 ಎಸೆತಗಳಲ್ಲಿ 104 ರನ್ ಗಳಿಸಿ ಔಟಾದರು.

AUS vs PAK: ಅರ್ಧಶತಕ ಬಾರಿಸಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಬಾಬರ್‌ ಆಝಮ್‌!

ಆ ಮೂಲಕ ಮೊದಲು ಬ್ಯಾಟ್‌ ಮಾಡಿದ ಭಾರತ ಎ ತಂಡ 3 ವಿಕೆಟ್‌ಗೆ 238 ರನ್ ಗಳಿಸಿತು. ಆಯುಷ್ ಬದೋನಿ 26 ಎಸೆತಗಳಲ್ಲಿ 60 ರನ್ ಗಳಿಸಿದರೆ, ತಿಲಕ್ ವರ್ಮಾ 38 ರನ್ ಗಳಿಸಿದರು.

ಭಾರತ ತಂಡಕ್ಕೆ ಆಡಲು ಇನ್ನೂ ಅವಕಾಶ ಸಿಕ್ಕಿಲ್ಲ

ತಮಿಳುನಾಡಿನ ಪರ ದೇಶಿ ಕ್ರಿಕೆಟ್ ಆಡುವ ನಾರಾಯಣ್ ಜಗದೀಶನ್ ಅವರಿಗೆ ಇನ್ನೂ ಭಾರತ ತಂಡಕ್ಕಾಗಿ ಆಡಲು ಅವಕಾಶ ಸಿಕ್ಕಿಲ್ಲ. ಕಳೆದ ವರ್ಷ ರಿಷಭ್ ಪಂತ್ ಗಾಯಗೊಂಡ ನಂತರ ಅವರನ್ನು ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಟೆಸ್ಟ್ ತಂಡದಲ್ಲಿ ಸೇರಿಸಿಕೊಳ್ಳಲಾಗಿತ್ತು. ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಅವರನ್ನು ಭಾರತೀಯ ತಂಡದಲ್ಲಿ ಸೇರಿಸಿಕೊಳ್ಳಲಾಯಿತು, ಆದರೆ ಇನ್ನೂ ಪದಾರ್ಪಣೆ ಮಾಡಿಲ್ಲ.



ನಾರಾಯಣ್ ಜಗದೀಶನ್ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ 277 ರನ್ ಗಳಿಸಿದ ಅತ್ಯಧಿಕ ಇನಿಂಗ್ಸ್‌ಗಳ ದಾಖಲೆಯನ್ನು ಅವರು ಹೊಂದಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಅವರು ಏಳು ಪಂದ್ಯಗಳಲ್ಲಿ ನಾಲ್ಕು ಅರ್ಧಶತಕ ಮತ್ತು ಒಂದು ಶತಕ ಗಳಿಸಿದ್ದಾರೆ.