ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸೂರ್ಯಕುಮಾರ್‌ ಯಾದವ್‌ರನ್ನು ಕೈಬಿಟ್ಟರೆ ನಿಮ್ಮಂಥ ದಡ್ಡರು ಯಾರೂ ಇಲ್ಲ: ಮೈಕಲ್‌ ವಾನ್‌!

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ನಡೆಯುತ್ತಿರುವ ವೇಳೆ ಭಾರತ ತಂಡಕ್ಕೆ ಇಂಗ್ಲೆಂಡ್‌ ಮಾಜಿ ನಾಯಕ ಮೈಕಲ್‌ ವಾನ್‌, ಮಹತ್ವದ ಸಲಹೆಯನ್ನು ನೀಡಿದ್ದಾರೆ. ಟಿ20 ವಿಶ್ವಕಪ್‌ ಬಳಿಕ ಸೂರ್ಯಕುಮಾರ್‌ ಯಾದವ್‌ ಅವರನ್ನು ಕೈ ಬಿಟ್ಟು ಬಿಸಿಸಿಐ ಏನು ಮಾಡಬಾರದು ಎಂದು ಅವರು ಹೇಳಿದ್ದಾರೆ.

ಸೂರ್ಯಕುಮಾರ್‌ ಯಾದವ್‌ ಭವಿಷ್ಯದ ಬಗ್ಗೆ ಮೈಕಲ್‌ ವಾನ್‌ ಹೇಳಿಕೆ.

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ (T20 World Cup 2026) ನಂತರ ಭಾರತ ತಂಡ, ಇಂದಿನ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಬಿಟ್ಟು ಟಿ20 ಯೋಜನೆಗಳನ್ನು ಮುಂದುವರಿಸಬಾರದು ಎಂದು ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್ (Michael Vaughan) ತಮ್ಮ ಮನದಾಳದ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. 2021ರಲ್ಲಿ ಟಿ20ಐಗೆ ಪದಾರ್ಪಣೆ ಮಾಡಿದ್ದ ಅವರು, ಅಂದಿನಿಂದ ಇಲ್ಲಿಯವರೆಗೂ ಭಾರತ ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಮುಂಬೈ ಮೂಲದ ಈ ಬ್ಯಾಟರ್, ತಮ್ಮ ಅದ್ಭುತ ಸ್ಥಿರತೆ ಮತ್ತು ಸ್ಫೋಟಕ ಶೈಲಿಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚುಟಕು ಸ್ವರೂಪದಲ್ಲಿ ಆಡುವ ರೀತಿ ಬದಲಿಸಿದವರಾಗಿ ಗುರುತಿಸಿಕೊಂಡಿದ್ದಾರೆ.

ಆದರೆ, ಸೂರ್ಯಕುಮಾರ್ ಯಾದವ್ ಅವರಿಗೆ ಈಗ 35 ವರ್ಷ ವಯಸ್ಸಾಗಿರುವುದು ಭವಿಷ್ಯದ ಯೋಜನೆಗಳ ದೃಷ್ಟಿಯಿಂದ ಚರ್ಚೆಗೆ ಗ್ರಾಸವಾಗಿದೆ. ಇದರಿಂದಾಗಿ, ಪ್ರಸ್ತುತ ನಡೆಯುತ್ತಿರುವ ಚುಟುಕು ವಿಶ್ವಕಪ್‌ ಟೂರ್ನಿಯ ನಂತರ ಅವರನ್ನು ನಾಯಕತ್ವ ಸ್ಥಾನದಿಂದ ಬದಲಾಯಿಸುವ ಬಗ್ಗೆ ಭಾರತ ತಂಡದ ಮ್ಯಾನೇಜ್‌ಮೆಂಟ್‌ ಚರ್ಚೆಗಳು ನಡೆಯುತ್ತಿರುವುದಾಗಿ ವರದಿಯಾಗಿದೆ.

IND vs ZIM: ಜಿಂಬಾಬ್ವೆ ಪಂದ್ಯಕ್ಕೂ ಮುನ್ನ ಗೌತಮ್‌ ಗಂಭೀರ್‌ಗೆ ರಿಕಿ ಪಾಂಟಿಂಗ್‌ ಮಹತ್ವದ ಸಲಹೆ!

ಈ ವಿಷಯದಲ್ಲಿ ತಮ್ಮ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತಪಡಿಸಿದ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್, ಮಾಜಿ ವಿಶ್ವ ನಂ.1 ಟಿ20ಐ ಬ್ಯಾಟರ್‌ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

“ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಯಾದವ್ ಅವರನ್ನು ಬಿಟ್ಟು ಮುಂದೆ ಯೋಜನೆ ರೂಪಿಸುವುದು ಅಥವಾ ಏನಾದರೂ ಮಾಡುವುದು ಭಾರತ ತಂಡಕ್ಕೆ ಮೂರ್ಖತನವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಅವರು ಒಬ್ಬ ಜೀನಿಯಸ್,” ಎಂದು ಅವರು ಕ್ರಿಕ್‌ಬಜ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸೋಲಿನ ಬಳಿಕ ಸಲ್ಮಾನ್‌ ಆಘಾ ಕುಟುಂಬವನ್ನು ನಿಂದಿಸಿದ ಫ್ಯಾನ್ಸ್‌!

ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಅಂಕಿ ಅಂಶ

2024ರ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಚುಟುಕು ಸ್ವರೂಪದ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ಟಿ20ಐ ತಂಡದ ನಾಯಕತ್ವವನ್ನು ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ನೀಡಲಾಗಿತ್ತು. ಟಿ20ಐ ನಾಯಕನಾಗಿ ಅವರ ದಾಖಲೆ ಗಮನಾರ್ಹವಾಗಿದೆ. ನಾಯಕನಾಗಿ ಆಡಿದ 49 ಪಂದ್ಯಗಳಲ್ಲಿ ಭಾರತ ತಂಡ 36 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಅಂಕಿಅಂಶಗಳು ಅವರು ತಂಡವನ್ನು ಎಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.