ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shreyas Iyer: ʻಐಸಿಸಿ ಮಾರ್ಚ್‌ ತಿಂಗಳ ಆಟಗಾರʼ ಪ್ರಶಸ್ತಿಗೆ ಭಾಜನರಾದ ಶ್ರೇಯಸ್‌ ಅಯ್ಯರ್‌!

Shreyas Iyer won the ICC men's Player of Month: ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಲಿರುವ ಶ್ರೇಯಸ್ ಅಯ್ಯರ್ ಅವರಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಸಿಕ್ಕಿದೆ. ಶ್ರೇಯಸ್ ಅಯ್ಯರ್ ಐಸಿಸಿ ಮಾರ್ಚ್ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಐಸಿಸಿ ಮಾರ್ಚ್‌ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶ್ರೇಯಸ್‌ ಅಯ್ಯರ್‌!

ಐಸಿಸಿ ಮಾರ್ಚ್‌ ತಿಂಗಳ ಪ್ರಶಸ್ತಿಗೆ ಭಾಜನರಾದ ಶ್ರೇಯಸ್‌ ಅಯ್ಯರ್‌!

Profile Ramesh Kote Apr 15, 2025 4:46 PM

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್(IPL 2025) ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ (Shreyas Iyer) ಅವರಿಗೆ ಐಸಿಸಿ ಕಡೆಯಿಂದ ದೊಡ್ಡ ಬಹುಮಾನ ಲಭಿಸಿದೆ. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರ ಫಲವಾಗಿ ಶ್ರೇಯಸ್‌ ಅಯ್ಯರ್ ಅವರಿಗೆ ಮಾರ್ಚ್ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಯನ್ನು (Player of the Month for March 2025) ನೀಡಲಾಗಿದೆ. ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನ್ಯೂಜಿಲೆಂಡ್‌ನ ಜ್ಯಾಕ್ ಡಫಿ ಮತ್ತು ರಚಿನ್ ರವೀಂದ್ರ ಕೂಡ ರೇಸ್‌ನಲ್ಲಿದ್ದರು. ಆದರೆ, ಅಂತಿಮವಾಗಿ ಇವರನ್ನು ಹಿಂದಿಕ್ಕಿ ಭಾರತ ತಂಡದ ಬ್ಯಾಟ್ಸ್‌ಮನ್‌ ಮಾರ್ಷ್‌ ತಿಂಗಳ ಆಟಗಾರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಬಲಗೈ ಬ್ಯಾಟ್ಸ್‌ಮನ್‌ ಭಾರತ ತಂಡದ ಪರ ಒಟ್ಟು 243 ರನ್ ಗಳಿಸಿದ್ದರು. ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಪಡೆದ ಎರಡನೇ ಭಾರತೀಯ ಆಟಗಾರ ಎಂಬ ಕೀರ್ತಿಗೆ ಶ್ರೇಯಸ್‌ ಅಯ್ಯರ್‌ ಭಾಜನರಾಗಿದ್ದಾರೆ. ಇದಕ್ಕೂ ಮುನ್ನ ಶುಭಮನ್ ಗಿಲ್ ಫೆಬ್ರವರಿ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದರು. ಇದೀಗ ಸತತ ಎರಡನೇ ಬಾರಿ ಭಾರತ ತಂಡದ ಆಟಗಾರ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

IPL 2025: ಜಂಪಾ ಬದಲಿಗೆ ಸನ್​ರೈಸರ್ಸ್​ ತಂಡ ಸೇರಿದ ಕನ್ನಡಿಗ ಆರ್​. ಸ್ಮರಣ್

ಪಾಕಿಸ್ತಾನ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಈ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿದ್ದರು. ಅಯ್ಯರ್ ಅವರ ಅದ್ಭುತ ಪ್ರದರ್ಶನದಿಂದಾಗಿ ಭಾರತ ತಂಡ ಈ ಟೂರ್ನಿಯಲ್ಲಿ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿತ್ತು. ಮಾರ್ಚ್ ತಿಂಗಳ ಐಸಿಸಿ ಪುರುಷರ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಕ್ಕಾಗಿ ಶ್ರೇಯಸ್ ಅಯ್ಯರ್ ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಯಶಸ್ಸಿಗೆ ತಂಡದ ಸದಸ್ಯರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಯ ಕೊಡುಗೆಯನ್ನು ಅವರು ಸ್ಮರಿಸಿಕೊಂಡಿದ್ದಾರೆ.



ಶ್ರೇಯಸ್ ಅಯ್ಯರ್ ಹೇಳಿದ್ದೇನು?

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಭಾಜನರಾದ ನಂತರ ಮಾತನಾಡಿದ ಶ್ರೇಯಸ್ ಅಯ್ಯರ್, "ಮಾರ್ಚ್ ತಿಂಗಳ ಐಸಿಸಿ ಪುರುಷರ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ಗೌರವ ತಂದಿದೆ. ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ತಿಂಗಳಲ್ಲಿ ಇದು ನಂಬಲಸಾಧ್ಯ. ಇದು ನಾನು ಯಾವಾಗಲೂ ಪಾಲಿಸುವ ವಿಷಯ. ಇಷ್ಟು ದೊಡ್ಡ ವೇದಿಕೆಯಲ್ಲಿ ಭಾರತದ ಯಶಸ್ಸಿಗೆ ಕೊಡುಗೆ ನೀಡುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅವರ ಅಚಲ ಬೆಂಬಲ ಮತ್ತು ನನ್ನ ಮೇಲಿನ ನಂಬಿಕೆಗಾಗಿ ನಾನು ಕೃತಜ್ಞನಾಗಿದ್ದೇನೆ," ಎಂದು ಹೇಳಿದ್ದಾರೆ.



ಇಂಗ್ಲೆಂಡ್‌ ಸರಣಿಯಲ್ಲಿ ಆಡಿದ್ದ ಶ್ರೇಯಸ್‌ ಅಯ್ಯರ್‌

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮುನ್ನ ಶ್ರೇಯಸ್ ಅಯ್ಯರ್ ಭಾರತ ಕ್ರಿಕೆಟ್ ತಂಡಕ್ಕೆ ಮರಳಿದ್ದರು. ಅವರ ಇಂಗ್ಲೆಂಡ್‌ ವಿರುದ್ದದ ತವರು ಸರಣಿಯ ಭಾರತ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್‌ ಅಯ್ಯರ್‌ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದರು. ನಂತರ ಚಾಂಪಿಯನ್ಸ್‌ ಟ್ರೋಫಿಗೂ ಬಂದಿದ್ದ ಅವರು ಅದ್ಭುತ ಪ್ರದರ್ಶನವನ್ನು ತೋರಿದ್ದರು. ಅವರು ಇದೀಗ ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಪರ ಉತ್ತಮ ಪ್ರದರ್ಶನವನ್ನು ತೋರುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ಪರವೂ ಅಯ್ಯರ್ ಬ್ಯಾಟಿಂಗ್‌ ಹಾಗೂ ನಾಯಕತ್ವದಲ್ಲಿ ಮಿಂಚುತ್ತಿದ್ದಾರೆ. ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ನಾಯಕನಿಗೆ ಒಂದು ಒಳ್ಳೆಯ ಸುದ್ದಿ.