ನವದೆಹಲಿ: ಕಳೆದ ಏಷ್ಯಾ ಕಪ್ ಟೂರ್ನಿಯಲ್ಲಿ (Asia Cup 2025) ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ್ದ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಅವರು 7 ಪಂದ್ಯಗಳಿಂದ 200ರ ಸ್ಟ್ರೈಕ್ ರೇಟ್‌ನಲ್ಲಿ ಮೂರು ಅರ್ಧಶತಕಗಳ ಮೂಲಕ 314 ರನ್‌ಗಳನ್ನು ಕಲೆ ಹಾಕಿದ್ದರು. ಇದರೊಂದಿಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅವರು ಟೂರ್ನಿ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಐಸಿಸಿ ಟಿ20ಐ ಬ್ಯಾಟ್‌ಮನ್‌ಗಳ ಶ್ರೇಯಾಂಕದಲ್ಲಿ (ICC T20I Ranking) ಅಭಿಷೇಕ್ ಶರ್ಮಾ ವಿಶೇಷ ದಾಖಲೆಯನ್ನು ಬರೆದಿದ್ದಾರೆ.
ಅಭಿಷೇಕ್ ಶರ್ಮಾ ಅವರು 2024ರ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಅವರು ಭಾರತ ಟಿ20ಐ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಟಿ20ಐ ಶ್ರೇಯಾಂಕದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಇಲ್ಲಿಯವರೆಗೂ ಆಡಿದ 24 ಪಂದ್ಯಗಳಿಂದ ಎರಡು ಶತಕಗಳು ಹಾಗೂ ಐದು ಅರ್ಧಶತಕಗಳ ಮೂಲಕ 849 ರನ್‌ಗಳನ್ನು ಬಾರಿಸಿದ್ದಾರೆ.
IND vs PAK: ಐಸಿಸಿ ಟೂರ್ನಿಗಳಿಂದ ಬ್ಯಾನ್ ಮಾಡಬೇಕೆಂದ ಪಾಕ್ ಮಾಜಿ ನಾಯಕ ರಶೀದ್ ಲತಿಫ್!
ಟಿ20ಐ ಶ್ರೇಯಾಂಕದಲ್ಲಿ ದೊಡ್ಡ ದಾಖಲೆ ಬರೆದ ಅಭಿಷೇಕ್
ಅಕ್ಟೋಬರ್ 1 ರಂದು ಬುಧವಾರ ಅವರು ಐಸಿಸಿ ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಅವರು ಟಿ20ಐ ಶ್ರೇಯಾಂಕದಲ್ಲಿ 931 ರೇಟಿಂಗ್ ಪಾಯಿಂಟ್ಸ್ ಹೊಂದಿದ್ದಾರೆ. ಆ ಮೂಲಕ ಟಿ20ಐ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್ಸ್ ಪಡೆದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ಬರೆದಿದ್ದಾರೆ. ಇದರ ಜೊತೆಗೆ ಅವರು ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್ ಡಾವಿಡ್ ಮಲಾನ್ ಅವರ ದಾಖಲೆಯನ್ನು ಮುರಿದಿದ್ದಾರೆ. 2020ರಲ್ಲಿ ಡಾವಿಡ್ ಮಲಾನ್ ಅವರು 919 ರೇಟಿಂಗ್ ಪಾಯಿಂಟ್ಸ್ ಹೊಂದಿದ್ದರು.
ಅತಿ ಹೆಚ್ಚು ಐಸಿಸಿ ರೇಟಿಂಗ್ ಪಾಯಿಂಟ್ಸ್ ಹೊಂದಿರ ಟಿ20ಐ ಬ್ಯಾಟ್ಸ್‌ಮನ್‌ಗಳು
ಅಭಿಷೇಕ್ ಶರ್ಮಾ: 931 (2025)
ಡಾವಿಡ್ ಮಲಾನ್: 919 (2020)
ಸೂರ್ಯಕುಮಾರ್ ಯಾದವ್: 912 (2022)
ವಿರಾಟ್ ಕೊಹ್ಲಿ: 909 (2014)
ಆರೋನ್ ಫಿಂಚ್: 904 (2014)
ಏಷ್ಯಾ ಕಪ್ ಟೂರ್ನಿಯಲ್ಲಿ ಮೊಹಮ್ಮದ್ ರಿಝ್ವಾನ್, ವಿರಾಟ್ ಕೊಹ್ಲಿ ದಾಖಲೆ ಮುರಿದ ಅಭಿಷೇಕ್ ಶರ್ಮಾ!
ಏಕದಿನ ತಂಡದಲ್ಲಿಯೂ ಸ್ಥಾನ ಪಡೆಯಲಿರುವ ಅಭಿಷೇಕ್ ಶರ್ಮಾ
ಏಷ್ಯಾ ಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸುವ ಮೂಲಕ ಅಭಿಷೇಕ್ ಶರ್ಮಾ ಅವರು ಭಾರತ ಟಿ20ಐ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ ಹಾಗೂ ಅವರು ದೀರ್ಘಾವಧಿ ಭಾರತದ ಪರ ಆಡಲಿದ್ದಾರೆ. ಇದೀಗ ತಮ್ಮ ಟಿ20ಐ ನಲ್ಲಿನ ಪ್ರದರ್ಶನದಿಂದ ಅವರು ಏಕದಿನ ತಂಡದಲ್ಲಿಯೂ ಸ್ಥಾನ ಪಡೆಯುವ ಸಾಧ್ಯತೆ ಇದೆ ಹೇಳಲಾಗುತ್ತಿದೆ. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ಅಭಿಷೇಕ್‌ಗೆ ಅವಕಾಶ ನೀಡಬಹುದು ಎಂದು ವರದಿಯಾಗಿದೆ.
ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ. ಅವರು ಆಡಿದ 61 ಪಂದ್ಯಗಳಿಂದ 2014 ರನ್‌ಗಳನ್ನು ಬಾರಿಸಿದ್ದಾರೆ. ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲಿ ಅವರು 38 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪ್ರಸ್ತುತ ಏಕದಿನ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಆರಂಭಿಕರಾಗಿದ್ದಾರೆ. ರೋಹಿತ್ ಶರ್ಮಾ ಅವರು 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಹಾಗಾಗಿ ಅಭಿಷೇಕ್‌ಗೆ ಅವಕಾಶ ನೀಡಿದರೂ ಅಚ್ಚರಿ ಇಲ್ಲ.