ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸ್ಟೀವನ್‌ ಸ್ಮಿತ್‌, ಗ್ಲೆನ್‌ ಫಿಲಿಪ್ಸ್‌ರನ್ನು ಹಿಂದಿಕ್ಕಿ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌!

Shubman Gill wins Player of the Month award: ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶುಭಮನ್‌ ಗಿಲ್‌ ಅವರು ಫೆಬ್ರವರಿ ತಿಂಗಳ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಶುಭಮನ್‌ ಗಿಲ್‌ ಜೊತೆಗೆ ನ್ಯೂಜಿಲೆಂಡ್‌ ಆಲ್‌ರೌಂಡರ್‌ ಗ್ಲೆನ್‌ ಫಿಲಿಪ್ಸ್‌ ಹಾಗೂ ಆಸ್ಟ್ರೇಲಿಯಾ ಆಟಗಾರ ಸ್ಟೀವನ್‌ ಸ್ಮಿತ್‌ ಕೂಡ ಇದ್ದರು. ಆದರೆ, ಅಂತಿಮವಾಗಿ ಗಿಲ್‌ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಐಸಿಸಿಯ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌!

ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಶುಭಮನ್‌ ಗಿಲ್‌.

Profile Ramesh Kote Mar 12, 2025 6:27 PM

ನವದೆಹಲಿ: ಭಾರತದ ಸ್ಟಾರ್ ಓಪನಿಂಗ್ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರನ್ನು ಫೆಬ್ರವರಿ ತಿಂಗಳ ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಪುರುಷರ ಆಟಗಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ತವರು ಸರಣಿಯಲ್ಲಿ ಸ್ಮರಣೀಯ ಬ್ಯಾಟಿಂಗ್ ಪ್ರದರ್ಶನ ನೀಡಿದ್ ಗಿಲ್, ಬುಧವಾರ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮತ್ತು ನ್ಯೂಜಿಲೆಂಡ್‌ನ ಗ್ಲೆನ್ ಫಿಲಿಪ್ಸ್ ಅವರನ್ನು ಹಿಂದಿಕ್ಕಿ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಫೆಬ್ರವರಿಯಲ್ಲಿ ನಡೆದಿದ್ದ ಐದು ಏಕದಿನ ಪಂದ್ಯಗಳಲ್ಲಿ ಶುಭಮನ್ ಗಿಲ್ 101.50ರ ಸರಾಸರಿ ಮತ್ತು 94.19ರ ಸ್ಟ್ರೈಕ್ ರೇಟ್‌ನಲ್ಲಿ 406 ರನ್ ಗಳಿಸಿದ್ದರು. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 3-0 ಅಂತರದ ಗೆಲುವಿನಲ್ಲಿ ಅವರು ಎರಡು ಅರ್ಧಶತಕ ಮತ್ತು ಒಂದು ಶತಕ ಗಳಿಸುವ ಮೂಲಕ ಪ್ರಮುಖ ಪಾತ್ರ ವಹಿಸಿದ್ದರು. ಅವರು ನಾಗ್ಪುರದಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ 87, ಕಟಕ್‌ನಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ 60 ಮತ್ತು ನಂತರ ಅಹಮದಾಬಾದ್‌ನಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ 112 ರನ್‌ಗಳನ್ನು ದಾಖಲಿಸಿದ್ದರು.

IND vs NZ: ರೋಹಿತ್‌ ಶರ್ಮಾರ ಒಡಿಐ ನಿವೃತ್ತಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಶುಭಮನ್‌ ಗಿಲ್‌!

ಅಹಮದಾಬಾದ್‌ನಲ್ಲಿ 102 ಎಸೆತಗಳ ಇನಿಂಗ್ಸ್‌ನಲ್ಲಿ 14 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ, ಅವರ ಪಂದ್ಯ ಶ್ರೇಷ್ಠ ಪ್ರಶಸ್ತಿಯ ಜೊತೆಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದರು. ಇಂಗ್ಲೆಂಡ್‌ ವಿರುದ್ದದ ಏಕದಿನ ಸರಣಿಯಲ್ಲಿ ತೋರಿದ್ದ ಅದೇ ಲಯವನ್ನು ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿಯೂ ಮುಂದುವರಿಸಿದ್ದರು. ದುಬೈನಲ್ಲಿ ನಡೆದಿದ್ದ ಭಾರತ ತಂಡದ ಮೊದಲನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 101 ರನ್ ಗಳಿಸಿದ ನಂತರ, ಅವರು ಪಾಕಿಸ್ತಾನದ ವಿರುದ್ಧ 46 ರನ್ ಗಳಿಸಿದ್ದರು. ಈ ಎರಡೂ ಪಂದ್ಯಗಳನ್ನು ಭಾರತ ತಂಡ ಸುಲಭವಾಗಿ ಗೆದ್ದುಕೊಂಡಿತ್ತು.

ಇದು ಗಿಲ್ ಅವರ ಮೂರನೇ ಐಸಿಸಿ ತಿಂಗಳ ಆಟಗಾರ ಗೌರವವಾಗಿದೆ. ಅವರು ಇದಕ್ಕೂ ಮುನ್ನ 2023ರಲ್ಲಿ (ಜನವರಿ ಮತ್ತು ಸೆಪ್ಟೆಂಬರ್) ಎರಡು ಬಾರಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು.



ಭಾರತ ತಂಡದ ಪರ ಇನ್ನಚ್ಟು ಪಂದ್ಯಗಳನ್ನು ಗೆಲ್ಲಲು ಎದುರು ನೋಡುತ್ತಿದ್ದೇನೆ: ಗಿಲ್‌

ತಮ್ಮ ಅದ್ಭುತ ಸಾಧನೆಯ ಬಳಿಕ ಶುಭಮನ್‌ ಗಿಲ್ ಈ ಗೌರವ ಪಡೆದಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು ಮತ್ತು ಮುಂಬರುವ ಕ್ರಿಕೆಟ್ ಋತುವನ್ನು ಆಡಲು ಎದುರು ನೋಡುತ್ತಿದ್ದೇನೆ ಮತ್ತು ಭಾರತಕ್ಕಾಗಿ ಇನ್ನೂ ಅನೇಕ ಪಂದ್ಯಗಳನ್ನು ಗೆಲ್ಲುವ ಭರವಸೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.

"ಫೆಬ್ರವರಿ ತಿಂಗಳ ಐಸಿಸಿ ಪುರುಷರ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ನನ್ನ ದೇಶಕ್ಕಾಗಿ ಪಂದ್ಯಗಳನ್ನು ಗೆಲ್ಲುವುದಕ್ಕಿಂತ ಹೆಚ್ಚಿನ ಪ್ರೇರಣೆ ಬೇರೇನೂ ನನಗೆ ನೀಡುವುದಿಲ್ಲ. 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುನ್ನಡೆ ಪಡೆಯುವುದು ಬಹಳ ನಿರ್ಣಾಯಕವಾಗಿತ್ತು ಮತ್ತು ಅದರಿಂದ ಹೆಚ್ಚಿನದನ್ನು ಪಡೆಯಲು ಸಾಧ್ಯವಾಯಿತು ಎಂಬ ಬಗ್ಗೆ ನನಗೆ ಸಂತೋಷವಾಗಿದೆ. ಇದು ವೈಯಕ್ತಿಕವಾಗಿ ಮತ್ತು ನಮಗೆ ಕ್ರಿಕೆಟ್‌ ಋತುವಿನ ಅದ್ಭುತ ಆರಂಭವಾಗಿದೆ. ಮುಂಬರುವ ಕ್ರಿಕೆಟ್ ವರ್ಷವನ್ನು ನಾನು ಎದುರು ನೋಡುತ್ತಿದ್ದೇನೆ ಮತ್ತು ಭಾರತಕ್ಕಾಗಿ ಇನ್ನೂ ಅನೇಕ ಪಂದ್ಯಗಳನ್ನು ಗೆಲ್ಲುವ ಭರವಸೆ ಹೊಂದಿದ್ದೇನೆ," ಎಂದು ಶುಭಮನ್‌ ಗಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.