ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದ ಟೀಮ್ ಇಂಡಿಯಾ!
ICC Test rankings: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ಪ್ರಕಟಿಸಿದ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಕಳೆದ ಟೆಸ್ಟ್ ಸರೆಣಿಗಳಲ್ಲಿ ಸೋಲು ಅನುಭವಿಸಿದ ಕಾರಣ ಟೀಮ್ ಇಂಡಿಯಾ ಟೆಸ್ಟ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದ ಭಾರತ ತಂಡ.

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಸೋಮವಾರ (ಏಪ್ರಿಲ್ 5) ರಂದು ಪ್ರಕಟಿಸಿದ ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕದಲ್ಲಿ (ICC Test Rankings) ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ (Indian Cricket Team) ಹಿನ್ನಡೆಯಾಗಿದೆ. ಟೀಮ್ ಇಂಡಿಯಾ 105 ರೇಟಿಂಗ್ ಪಾಯಿಂಟ್ಸ್ ಮೂಲಕ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧ ಕಳೆದ ಎರಡು ಟೆಸ್ಟ್ ಸರಣಿಗಳಲ್ಲಿನ ಹೀನಾಯ ಸೋಲಿನ ಕಾರಣ ಟೀಮ್ ಇಂಡಿಯಾ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿಯಬೇಕಾಗಿದೆ.
ಕಳೆದ ವರ್ಷದ ಅಂತ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಭಾರತ ತಂಡ 0-3 ಅಂತರದಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ ತವರು ಅಂಗಣದಲ್ಲಿ ಇದೇ ಮೊದಲ ಬಾರಿ ಭಾರತ ತಂಡ ಸೋಲು ಅನುಭವಿಸಿದಂತಾಗಿತ್ತು. ಇದಾದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಟೀಮ್ ಇಂಡಿಯಾ, 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 1-3 ಅಂತರದಲ್ಲಿ ಸೋಲು ಒಪ್ಪಿಕೊಂಡಿತ್ತು. 2017ರ ಬಳಿಕ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿನ ಮೊದಲ ಸೋಲು ಇದಾಗಿತ್ತು.
IPL 2025: ಭಾರತ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಐಪಿಎಲ್ಗೆ ಎಂಟ್ರಿ ಕೊಟ್ಟ ಅಭಿಷೇಕ್ ನಾಯರ್
ಈ ಎರಡೂ ಟೆಸ್ಟ್ ಸರಣಿಯಲ್ಲಿನ ಸೋಲಿನ ಕಾರಣ ಭಾರತ ತಂಡ ಮೂರವ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಸತತ ಮೂರನೇ ಬಾರಿ ಅರ್ಹತೆ ಪಡೆಯಲು ವಿಫಲವಾಗಿತ್ತು. ಇಂಗ್ಲೆಂಡ್ ತಂಡ 113 ಅಂಕಗಳಿಂದ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಕಳೆದ ವರ್ಷ ವೆಸ್ಟ್ ಇಂಡೀಸ್, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಬೆನ್ ಸ್ಟೋಕ್ಸ್ ನಾಯಕತ್ವದ ಆಂಗ್ಲರು ಗೆದ್ದಿದ್ದರು.
ಅಗ್ರ ಸ್ಥಾನದಲ್ಲಿಯೇ ಉಳಿದ ಆಸ್ಟ್ರೇಲಿಯಾ
ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ಗೆ ಫೈನಲ್‌ಗೆ ಪ್ರವೇಶ ಮಾಡಿರುವ ಆಸ್ಟ್ರೇಲಿಯಾ ತಂಡ 126 ಅಂಕಗಳ ಮೂಲಕ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದೆ. ಆಸ್ಟ್ರೇಲಿಯಾ ಎದುರು ಫೈನಲ್‌ನಲ್ಲಿ ಕಾದಾಟ ನಡೆಸಲಿರುವ ದಕ್ಷಿಣ ಆಫ್ರಿಕಾ ತಂಡ 111 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಇಳಿದಿದೆ.
From Test dominance to ODI and T20I brilliance, the updated ICC Men’s Team Rankings showcase outstanding cricketing feats 🤩 https://t.co/IVTyPOyLyE
— ICC (@ICC) May 5, 2025
ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಭಾರತಕ್ಕೆ ಅಗ್ರ ಸ್ಥಾನ
ಟೆಸ್ಟ್ ಶ್ರೇಯಾಂಕದಲ್ಲಿ ಕುಸಿದರೂ ಭಾರತ ತಂಡ, ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮೆರೆದಿದೆ. ಏಕದಿನ ಹಾಗೂ ಟಿ20 ಕ್ರಿಕೆಟ್ ತಂಡಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಗಳನ್ನು ಕಾಯ್ದುಕೊಂಡಿದೆ. 124 ಅಂಕಗಳೊಂದಿಗೆ ಟೀಮ್ ಇಂಡಿಯಾ, ಏಕದಿನ ತಂಡಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಇತ್ತೀಚೆಗೆ ಭಾರತ ತಂಡ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತ್ತು.
ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಿ20 ಯುವ ತಂಡ ಐಸಿಸಿ ಟಿ20 ತಂಡಗಳ ಶ್ರೇಯಾಂಕದಲ್ಲಿಯೂ ಅಗ್ರ ಸ್ಥಾನದಲ್ಲಿದೆ. 2024 ರಿಂದ ಇಲ್ಲಿಯವರೆಗೂ ಭಾರತ ಟಿ20 ತಂಡ ಸೋಲಿಲ್ಲದೆ ಮುನ್ನುಗ್ಗುತ್ತಿದೆ.
IPL 2025: ಸನ್‌ರೈಸರ್ಸ್ ಹೈದರಾಬಾದ್‌ಗೆ ಸೇರ್ಪೆಡಯಾದ ಹರ್ಷ್ ದುಬೆ!
ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿದ ಆಫ್ಘನ್
ಐಸಿಸಿ ಚಾಂಪಿಯನ್ಸ್ ಟ್ರೋಫಿ ರನ್ನರ್ ಅಪ್ ನ್ಯೂಜಿಲೆಂಡ್ ತಂಡ 109 ಅಂಕಗಳೊಂದಿಗೆ, ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗಳ ಗೆಲುವಿನ ಬಳಿಕ ಶ್ರೀಲಂಕಾ ತಂಡ 104 ಅಂಕಗಳೊಂದಿಗೆ ಪಾಕಿಸ್ತಾನವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಪ್ರವೇಶ ಮಾಡಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಅಫ್ಘಾನಿಸ್ತಾನ ತಂಡ 4 ಅಂಕಗಳ ಏರಿಕೆಯ ಮೂಲಕ ಒಟ್ಟು 91 ಪಾಯಿಂಟ್ಸ್‌ನಿಂದ ಏಳನೇ ಸ್ಥಾನಕ್ಕೇರಿದೆ. ಆ ಮೂಲಕ ಇಂಗ್ಲೆಂಡ್ (84 ಅಂಕ) ಎಂಟನೇ ಸ್ಥಾನಕ್ಕೆ ಇಳಿದಿದೆ. ವೆಸ್ಟ್ ಇಂಡೀಸ್ 9ನೇ ಹಾಗೂ ಬಾಂಗ್ಲಾದೇಶ 10ನೇ ಸ್ಥಾನದಲ್ಲಿದೆ.