ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಾಲ್ಯದ ಗೆಳತಿ ವಂಶಿಕಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್‌ ಯಾದವ್‌!

Kuldeep Yadav Engagement: ಭಾರತ ತಂಡದ ಹಿರಿಯ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಅವರು ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರ ವಿವಾಹದ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಬಹುದು. ಅಂದ ಹಾಗೆ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕುಲ್ದೀಪ್‌ ಯಾದವ್‌ ಇತ್ತೀಚೆಗೆ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡಿದ್ದರು.

ಬಾಲ್ಯದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕುಲ್ದೀಪ್‌ ಯಾದವ್‌!

ಬಾಲ್ಯದ ಗೆಳತಿ ಜೊತೆ ಕುಲ್ದೀಪ್‌ ಯಾದವ್‌ ನಿಶ್ಚಿತಾರ್ಥ.

Profile Ramesh Kote Jun 4, 2025 7:25 PM

ನವದೆಹಲಿ: ಇಂಗ್ಲೆಂಡ್‌ (England) ಪ್ರವಾಸಕ್ಕೂ ಮುನ್ನ ಭಾರತ ತಂಡದ ಹಿರಿಯ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ (Kuldeep Yadav) ಅವರು ಜೂನ್‌ 4 ರಂದು ಲಖನೌದಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಿಂಕು ಸಿಂಗ್‌ (Rinku Singh) ಸೇರಿದಂತೆ ಹಲವು ಟೀಮ್‌ ಇಂಡಿಯಾದ ಕ್ರಿಕೆಟಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕುಲ್ದೀಪ್‌ ಯಾದವ್‌ ಅವರ ಕುಚಿಕು ಗೆಳೆಯ ಕುಲ್ದೀಪ್‌ ಯಾದವ್‌ ಕೂಡ ಅತಿ ಶೀಘ್ರದಲ್ಲಿಯೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಕುಲ್ದೀಪ್‌ ಯಾದವ್‌ ಆಡಿದ್ದರು. ಆದರೆ, ಅಕ್ಷರ್‌ ಪಟೇಲ್‌ ನಾಯಕತ್ವದ ಡೆಲ್ಲಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.

ಕುಲ್ದೀಪ್‌ ಯಾದವ್‌ ಹಾಗೂ ವಂಶಿಕಾ ಅವರು ಬಾಲ್ಯದ ಸ್ನೇಹಿತರು ಎಂದು ಜಾಗರಣ ವರದಿ ಮಾಡಿದೆ. ಈ ಜೋಡಿಯ ವಿವಾಹದ ದಿನಾಂಕ ಇನ್ನೂ ಬಹಿರಂಗವಾಗಿಲ್ಲ. ಜೂನ್‌ 20 ರಂದು ಇಂಗ್ಲೆಂಡ್‌ ವಿರುದ್ಧ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡದ ಪರ ಕುಲ್ದೀಪ್‌ ಯಾದವ್‌ ಆಡಲಿದ್ದಾರೆ.

ಜೂನ್‌ 20 ರಿಂದ ಆಗಸ್ಟ್‌ 4ರವರೆಗೆ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳು ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಕಾದಾಟ ನಡೆಸಲಿವೆ.

IPL 2025: ʻಕಪ್‌ ಗೆಲ್ಲುವುದು ಸುಲಭವಲ್ಲʼ-ಕಣ್ಣೀರಿಟ್ಟ ವಿರಾಟ್‌ ಕೊಹ್ಲಿ ಬಗ್ಗೆ ರಿಕಿ ಪಾಂಟಿಂಗ್‌ ಹೇಳಿದ್ದಿದು!

ಮುಂದಿನ ವಾರ ಭಾರತ ತಂಡದ ಆಟಗಾರರು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಇವರು 2018ರಲ್ಲಿ ಲಾರ್ಡ್ಸ್‌ನಲ್ಲಿ ಕುಲ್ದೀಪ್‌ ಯಾದವ್‌ ತಮ್ಮ ಕೊನೆಯ ಟೆಸ್ಟ್‌ ಪಂದ್ಯವನ್ನು ಆಡಿದ್ದರು. ಈ ಬಾರಿ ರವೀಂದ್ರ ಜಡೇಜಾ ಬಳಿಕ ಎರಡನೇ ಆಯ್ಕೆಯ ಸ್ಪಿನ್ನರ್‌ ಆಗಿ ಆಡಬಹುದು.

ಕುಲ್ದೀಪ್‌ ಯಾದವ್‌ 2025ರ ಐಪಿಎಲ್‌ ಪ್ರದರ್ಶನ

ಡೆಲ್ಲಿ ಕ್ಯಾಪಿಟಲ್ಸ್‌ ಪರ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಕುಲ್ದೀಪ್‌ ಯಾದವ್‌ ಆಡಿದ್ದ 14 ಪಂದ್ಯಗಳಿಂದ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವರು 7.07ರ ಎಕಾನಮಿಯಲ್ಲಿ ಬೌಲ್‌ ಮಾಡಿದ್ದಾರೆ ಹಾಗೂ ಇವರು ಡೆಲ್ಲಿ ಕ್ಯಾಪಿಟಲ್ಸ್‌ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಬೌಲರ್‌ ಎನಿಸಿಕೊಂಡಿದ್ದಾರೆ.



ಇನ್ನು ಕೆಎಲ್‌ ರಾಹುಲ್‌ ಈ ಸೀಸನ್‌ನಲ್ಲಿ 539 ರನ್‌ಗಳನ್ನು ಗಳಿಸಿದ್ದಾರೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ಪರ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ. ಇದರಲ್ಲಿ ಅವರು ಒಂದು ಶತಕ ಹಾಗೂ ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಡೆಲ್ಲಿ ತಂಡ ಆಡಿದ 14 ಪಂದ್ಯಗಳಲ್ಲಿ 7 ರಲ್ಲಿ ಗೆಲುವು ಪಡೆದಿದೆ. ಪಾಯಿಂಟ್ಸ್‌ ಟೇಬಲ್‌ನಲ್ಲಿ ಐದನೇ ಸ್ಥಾನದ ಮೂಲಕ ಟೂರ್ನಿಯಲ್ಲಿ ಅಭಿಯಾನವನ್ನು ಮುಗಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನಿಮಿತ್ತ ಹಲವು ಬದಲಾವಣೆಯನ್ನು ಮಾಡಿಕೊಳ್ಳಲಿದೆ. 2020ರ ಬಳಿಕ ಡೆಲ್ಲಿ ತಂಡ ಇಲ್ಲಿಯವರೆಗೂ ಫೈನಲ್‌ಗೆ ಪ್ರವೇಶ ಮಾಡಿಲ್ಲ. ಅಲ್ಲದೆ ಇನ್ನೂ ಒಮ್ಮೆಯೂ ಡೆಲ್ಲಿ ಕ್ಯಾಪಿಟಲ್ಸ್‌ ಐಪಿಎಲ್‌ ಟ್ರೋಫಿಯನ್ನು ಗೆದ್ದಿಲ್ಲ ಎಂಬುದು ಬೇಸರದ ವಿಷಯವಾಗಿದೆ.