ʻಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿಯ ಅಗತ್ಯವಿದೆʼ-ಆಧುನಿಕ ದಿಗ್ಗಜನಿಗೆ ಬ್ರಿಯಾನ್ ಲಾರಾ ಸಂದೇಶ!
Brian Lara special message to virat Kohli: ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಲು ಬಯಸುತ್ತಿದ್ದಾರೆಂಬ ವರದಿಯ ಬಗ್ಗೆ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಪ್ರತಿಕ್ರಿಯೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಬಾರದು ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿಗೆ ಬ್ರಿಯಾನ್ ಲಾರಾ ವಿಶೇಷ ಸಂದೇಶ.

ನವದೆಹಲಿ: ಭಾರತ ಕಿಕೆಟ್ ತಂಡದ (Indian Cricket team) ಮಾಜಿ ನಾಯಕ ಹಾಗೂ ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿಯ (Virat Kohli) ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿದ್ದರೆಂಬ ವಿಷಯದ ಬಗ್ಗೆ ಶನಿವಾರ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುವ ಜೊತೆಗೆ ಕೆಲ ಮಾಜಿ ಕ್ರಿಕೆಟಿಗರು ಕೂಡ ಇದಕೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ (Brian Lara), ವಿರಾಟ್ ಕೊಹ್ಲಿಗೆ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿಯ ಅಗತ್ಯವಿದೆ ಎಂದು ಹೇಳಿದ ಲಾರಾ, ಭಾರತೀಯ ದಿಗ್ಗಜ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಬಾರದು ಎಂದು ಮನವಿ ಮಾಡಿದ್ದಾರೆ.
ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಕೆಲವೇ ದಿನಗಳ ಬೆನ್ನಲ್ಲೆ ವಿರಾಟ್ ಕೊಹ್ಲಿ ಶನಿವಾರ, ತಾವು ಕೂಡ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ಬಿಸಿಸಿಐಗೆ ತಿಳಿಸಿದ್ದರು ಎಂದು ವರದಿಯಾಗಿದೆ. ಆದರೆ, ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡಲಿಲ್ಲ ಹಾಗೂ ಇಂಗ್ಲೆಂಡ್ ವಿರುದ್ಧ ಮುಂಬರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುವಂತೆ ಕೊಹ್ಲಿಗೆ ಮನವಿ ಮಾಡಿತ್ತು. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರಿಯಬೇಕೆಂದು ಬಯಸುತ್ತಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾಗೂ ಕೂಡ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ದೂರ ಉಳಿಯುವುದು ಇಷ್ಟವಿಲ್ಲ.
IPL 2025: ಬೆಂಗಳೂರಿಗೆ ಸುರಕ್ಷಿತವಾಗಿ ಆಗಮಿಸಿದ ಆರ್‌ಸಿಬಿ ಆಟಗಾರರು!
ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿಯ ಅಗತ್ಯವಿದೆ
"ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿಯ ಅಗತ್ಯವಿದೆ!! ಅವರನ್ನು ಮನವೋಲಿಸಲಾಗುವುದು. ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದಿಲ್ಲ. ತಮ್ಮ ಟೆಸ್ಟ್ ವೃತ್ತಿ ಜೀವನದ ಇನ್ನುಳಿದ ಅವಧಿಯಲ್ಲಿ ವಿರಾಟ್ ಕೊಹ್ಲಿ 60ರ ಸರಾಸರಿಯಲ್ಲಿ ರನ್‌ಗಳನ್ನು ಕಲೆ ಹಾಕಲಿದ್ದಾರೆ," ಎಂದು ಬ್ರಿಯಾನ್ ಲಾರಾ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿಯನ್ನು ಮನವೋಲಿಸಲಿರುವ ಬಿಸಿಸಿಐ
ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ನಿಮಿತ್ತ ಬಿಸಿಸಿಐ ವಿರಾಟ್ ಕೊಹ್ಲಿ ಜೊತೆ ಮಾತುಕತೆ ನಡೆಸಲಿದೆ. ಆ ಮೂಲಕ ಅವರನ್ನು ಟೆಸ್ಟ್ ಕ್ರಿಕೆಟ್ ಆಡುವಂತೆ ಮನವೋಲಿಸಬಹುದು. ಸದ್ಯ ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಅನುಭವಿ ಬ್ಯಾಟ್ಸ್‌ಮನ್‌ಗಳ ಕೊರತೆ ಇದೆ. ಆಸ್ಟ್ರೇಲಿಯಾ ವಿರುದ್ಧ ಕಳೆದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರ. ಆದರೆ, ಅವರು ಟೆಸ್ಟ್ ಕ್ರಿಕೆಟ್‌ಗೆ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ.
ಒಂದು ವೇಳೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದರೆ, ಅವರು ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿಯಬಹುದು. ಅಂದ ಹಾಗೆ 2024ರ ಐಸಿಸಿ ಟಿ20 ವಿಶ್ವಕಪ್ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.
IPL 2025: ʻಇನ್ನುಳಿದ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಡಿಸಿʼ-ಬಿಸಿಸಿಐಗೆ ಮೈಕಲ್ ವಾನ್ ಸಲಹೆ!
ವಿರಾಟ್ ಕೊಹ್ಲಿಯ ಟೆಸ್ಟ್ ವೃತ್ತಿ ಜೀವನ
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆದರೆ, ಅವರು ತಮ್ಮ ವೃತ್ತಿ ಜೀವನದ ಆರಂಭಿಕ ದಿನಗಳಲ್ಲಿಯೇ ವೈಫಲ್ಯ ಅನುಭವಿಸಿದ್ದರು. ನಂತರ 2011/12ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದರು.
ವಿರಾಟ್ ಕೊಹ್ಲಿಯ ಭಾರತ ಟೆಸ್ಟ್ ನಾಯಕತ್ವದ ಬೇಡಿಕೆಯನ್ನು ತಿರಸ್ಕರಿಸಿದ ಬಿಸಿಸಿಐ! ವರದಿ
2014ರಲ್ಲಿ ಅವರು ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ಸ್ವೀಕರಿಸಿದ್ದರು. ಅಂದಿನಿಂದ 2022ರವರೆಗೂ ಅಂದರೆ 8 ವರ್ಷಗಳ ಕಾಲ ಟೀಮ್ ಇಂಡಿಯಾವನ್ನು ಟಸ್ಟ್ ಕ್ರಿಕೆಟ್‌ನಲ್ಲಿ ಮುನ್ನಡೆಸಿದ್ದರು. ಇವರ ನಾಯಕತ್ವದಲ್ಲಿ ಭಾರತ ಆಡಿದ 68 ಟೆಸ್ಟ್ ಪಂದ್ಯಗಳಲ್ಲಿ 40ರಲ್ಲಿ ಗೆಲುವು ಪಡೆದಿದೆ. ಆ ಮೂಲಕ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎಂಬ ದಾಖಲೆಯನ್ನು ಕೂಡ ಬರೆದಿದ್ದಾರೆ. ಅವರು 123 ಟೆಸ್ಟ್ ಪಂದ್ಯಗಳಿಂದ 9230 ರನ್‌ಗಳನ್ನು ಗಳಿಸಿದ್ದಾರೆ.