RCB vs PBKS: ಆರ್‌ಸಿಬಿ-ಪಂಜಾಬ್ ಪಂದ್ಯಕ್ಕೆ ಮಳೆ ಅಡ್ಡಿ; ಟಾಸ್ ವಿಳಂಬ
ಆರ್‌ಸಿಬಿ ಮತ್ತು ಪಂಜಾಬ್ ತಂಡಗಳು ಇದುವರೆಗೆ ಆಡಿದ 6 ಪಂದ್ಯಗಳಲ್ಲಿ ತಲಾ 4 ಜಯ, 2 ಸೋಲಿನೊಂದಿಗೆ 8 ಅಂಕ ಕಲೆಹಾಕಿವೆ. ರನ್ರೇಟ್ ಲೆಕ್ಕಾಚಾರದಲ್ಲಿ ಆರ್‌ಸಿಬಿ ತುಸು ಮೇಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವೂ ಒಲಿಯಬಹುದು


ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಆರ್‌ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ವಿಳಂಬವಾಗಿದೆ. ಪಂದ್ಯಕ್ಕೆ ಮಳೆ ಅಡಿಯಾಗುವ ಎಲ್ಲ ಸಾಧ್ಯತೆಗಳು ಕಂಡುಬಂದಿದೆ. ಸದ್ಯ ಮೈದಾನಕ್ಕೆ ಕವರ್‌ಗಳನ್ನು ಹೊದಿಸಲಾಗಿದೆ. ಮಳೆಯಿಂದ ಪಂದ್ಯ ರದ್ದಾಗುವ ಸಾಧ್ಯತೆ ವಿರಳ. ಏಕೆಂದರೆ ಎಷ್ಟೇ ಜೋರಾಗಿ ಮಳೆ ಬಂದರೂ ಮಳೆ ನಿಂತ 15 ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸಬ್ ಏರ್ ಸಿಸ್ಟಂ ತಂತ್ರಜ್ಞಾನ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ. ಹೀಗಾಗಿ ಅಭಿಮಾನಿಗಳು ಹೆಚ್ಚು ಚಿಂತಿಸುವ ಅಗತ್ಯವಿಲ್ಲ.
ಆರ್‌ಸಿಬಿ ಮತ್ತು ಪಂಜಾಬ್ ತಂಡಗಳು ಇದುವರೆಗೆ ಆಡಿದ 6 ಪಂದ್ಯಗಳಲ್ಲಿ ತಲಾ 4 ಜಯ, 2 ಸೋಲಿನೊಂದಿಗೆ 8 ಅಂಕ ಕಲೆಹಾಕಿವೆ. ರನ್ರೇಟ್ ಲೆಕ್ಕಾಚಾರದಲ್ಲಿ ಆರ್‌ಸಿಬಿ ತುಸು ಮೇಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವೂ ಒಲಿಯಬಹುದು. ಕರ್ನಾಟಕದ ವೇಗಿ ವೈಶಾಕ್ ವಿಜಯ್ಕುಮಾರ್ ಈ ಬಾರಿ ಪಂಜಾಬ್ ತಂಡದಲ್ಲಿದ್ದು, ತವರಿನ ಅಂಗಣದಲ್ಲಿ ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ಕಳೆದ ಬಾರಿ ಆರ್‌ಸಿಬಿ ಪರ ಆಡಿದ್ದರು.
ಸಂಭಾವ್ಯ ತಂಡಗಳು
ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ಸಿ), ನೆಹಾಲ್ ವಧೇರಾ, ಜೋಶ್ ಇಂಗ್ಲಿಸ್ (ವಿ. ಕೀ), ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಷ್‌ದೀಪ್ ಸಿಂಗ್, ಯಜುವೇಂದ್ರ ಚಾಹಲ್.