ಆಷಸ್ ಟೆಸ್ಟ್ ಸರಣಿಯಲ್ಲಿ 500 ರನ್ ಕಲೆ ಹಾಕಿ ಯಶಸ್ವಿ ಜೈಸ್ವಾಲ್ ದಾಖಲೆ ಮುರಿದ ಟ್ರಾವಿಸ್ ಹೆಡ್!
Travis Head breaks Yashasvi Jaiswal Record: ಇಂಗ್ಲೆಂಡ್ ವಿರುದ್ಧ ಐದನೇ ಹಾಗೂ ಆಷಸ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಅಜೇಯ 91 ರನ್‌ಗಳನ್ನು ಗಳಿಸಿದ್ದಾರೆ. ಆ ಮೂಲಕ ಈ ಸರಣಿಯಲ್ಲಿ 500ಕ್ಕೂ ಅಧಿಕ ರನ್ ಗಳಿಸಿದ್ದಾರೆ. ಇದರೊಂದಿಗೆ ಯಶಸ್ವಿ ಜೈಸ್ವಾಲ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿ ಜೈಸ್ವಾಲ್ ದಾಖಲೆ ಮುರಿದ ಟ್ರಾವಿಸ್ ಹೆಡ್! -
ಸಿಡ್ನಿ: ಇಂಗ್ಲೆಂಡ್ ವಿರುದ್ಧ ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿರುವ ಐದನೇ ಹಾಗೂ ಆಷಸ್ ಟೆಸ್ಟ್ (Ashes) ಸರಣಿಯ ಕೊನೆಯ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಆರಂಭಿಕ ಯಶಸ್ವಿ ಜೈಸ್ವಾಲ್ ಮೂರನೇ ಶತಕದ ಸನಿಹದಲ್ಲಿದ್ದಾರೆ. ಇದರ ಜೊತೆಗೆ ಅವರು ಈ ಸರಣಿಯಲ್ಲಿ 500ಕ್ಕೂ ಅಧಿಕ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಇದರೊಂದಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರ ದಾಖಲೆಯೊಂದನ್ನು ಮುರಿದಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ತಂಡ, ಜೋ ರೂಟ್ ಅವರ ಶತಕದ ಬಲದಿಂದ ಪ್ರಥಮ ಇನಿಂಗ್ಸ್‌ನಲ್ಲಿ 384 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ ಪ್ರಥಮ ಇನಿಂಗ್ಸ್ ಶುರು ಮಾಡಿಕೊಂಡಿದ್ದ ಆಸ್ಟ್ರೇಲಿಯಾ ತಂಡ, ಎರಡನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 166 ರನ್‌ಗಳನ್ನು ಕಲೆ ಹಾಕಿದೆ. ಆ ಮೂಲಕ 218 ರನ್‌ಗಳ ಹಿನ್ನಡೆಯಲ್ಲಿದೆ. ಆಸ್ಟ್ರೇಲಿಯಾ ಪರ ಎರಡನೇ ದಿನ ಅತ್ಯುತ್ತಮ ಬ್ಯಾಟ್ ಮಾಡಿದ ಟ್ರಾವಿಸ್ ಹೆಡ್ ಆಡಿದ 87 ಎಸೆತಗಳಲ್ಲಿ ಅಜೇಯ 91 ರನ್‌ಗಳನ್ನು ಕಲೆ ಹಾಕಿದರು. ಮೂರನೇ ದಿನ ಅವರು ಈ ಸರಣಿಯಲ್ಲಿನ ಮೂರನೇ ಶತಕಬಾರಿಸುವ ಸನಿಹದಲ್ಲಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾ ತಂಡ ಈ ಟೆಸ್ಟ್ ಸರಣಿಯಲ್ಲಿ 4-1 ಅಂತರದಲ್ಲಿ ಮುನ್ನಡೆ ಪಡೆದಿದೆ.
AUS vs ENG: ಶತಕ ಬಾರಿಸಿ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ ಜೋ ರೂಟ್!
ವಿಶೇಷ ದಾಖಲೆ ಬರೆದ ಟ್ರಾವಿಸ್ ಹೆಡ್
ಈ ಸರಣಿಯಲ್ಲಿ ಟ್ರಾವಿಸ್ ಹೆಡ್ 500ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದಾರೆ. ಸ್ಟೀವನ್ ಸ್ಮಿತ್ ಬಳಿಕ ಆಷಸ್ ಟೆಸ್ಟ್ ಸರಣಿಯಲ್ಲಿ 500ಕ್ಕೂ ಅಧಿಕ ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. 2019ರಲ್ಲಿ ಸ್ಟೀವನ್ ಸ್ಮಿತ್ 500ಕ್ಕೂ ಅಧಿಕ ರನ್ ಗಳಿಸಿದ್ದರು. ಇದೀಗ ಎಡಗೈ ದಾಂಡಿಗ 9 ಇನಿಂಗ್ಸ್‌ಗಳಿಂದ 72.42ರ ಸರಾಸರಿ ಮತ್ತು 87.12ರ ಸ್ಟ್ರೈಕ್ ರೇಟ್‌ನಲ್ಲಿ 528 ರನ್‌ಗಳನ್ನು ಗಳಿಸಿದ್ದಾರೆ. ಈ ಇನಿಂಗ್ಸ್‌ಗೂ ಮುನ್ನ ಅವರು 8 ಇನಿಂಗ್ಸ್‌ಗಳಿಂದ 507 ರನ್ ಗಳಿಸಿದ್ದರು ಹಾಗೂ 88.79ರ ಸ್ಟ್ರೈಕ್ ರೇಟ್ ಅನ್ನು ಹೊಂದಿದ್ದರು.
143 ವರ್ಷಗಳ ಇತಿಹಾಸವಿರುವ ಆಷಸ್ ಟೆಸ್ಟ್ ಸರಣಿಯಲ್ಲಿ ಒಟ್ಟು 56 ಆಸೀಸ್ ಆಟಗಾರರು ಏಕೈಕ ಸರಣಿಯಲ್ಲಿ 500ಕ್ಕೂ ಅಧಿಕ ರನ್ ಗಳಿಸಿದ್ದಾರೆ. ಇವರ ಪೈಕಿ ಟ್ರಾವಿಸ್ ಹೆಡ್ ಅತಿ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 500ಕ್ಕೂ ಅಧಿಕ ರನ್‌ಗಳನ್ನು ಗಳಿಸಿದ್ದಾರೆ. ಇವರ ಹಿಂದೆ ಮಾಜಿ ಆರಂಭಿಕ ಡೇವಿಡ್ ವಾರ್ನರ್ ಇದ್ದಾರೆ. ಇವರು 2013-14ರ ಸಾಲಿನಲ್ಲಿ 523 ರನ್‌ಗಳನ್ನು 73.49ರ ಸ್ಟೈಕ್ ರೇಟ್‌ನಲ್ಲಿ ಗಳಿಸಿದ್ದರು.
'POWDER PUFF' POMS PUNISHED AS HEAD JOINS GREATS
— Fox Cricket (@FoxCricket) January 5, 2026
We've assumed for weeks that Mitchell Starc already had Player of the Series honours locked up.
But Travis Head is now within reach of one of the greatest #Ashes run hauls this century.
TALKING POINTS >> https://t.co/Vj1oD0YnuQ pic.twitter.com/L0p5rFYbbn
ಜೈಸ್ವಾಲ್ ದಾಖಲೆ ಮುರಿದ ಟ್ರಾವಿಸ್ ಹೆಡ್
ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಸರಣಿಯಲ್ಲಿ ವಿಶ್ವದ 78 ಆಟಗಾರರು 500ಕ್ಕೂ ಅಧಿಕ ರನ್‌ಗಳನ್ನು ಕಲೆ ಹಾಕಿದ್ದಾರೆ. ಇವರ ಪೈಕಿ ಟ್ರಾವಿಸ್ ಹೆಡ್ ಅವರು 80ಕ್ಕೂ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ ಈ ಮೊತ್ತವನ್ನು ಗಳಿಸಿದ್ದಾರೆ. ಈ ಹಿಂದೆ 2024ರಲ್ಲಿ ಇಂಗ್ಲೆಂಡ್ ವಿರುದ್ಧ ಯಶಸ್ವಿ ಜೈಸ್ವಾಲ್ ಅವರು 79.91ರ ಸ್ಟ್ರೈಕ್ ರೇಟ್‌ನಲ್ಲಿ 500ಕ್ಕೂ ಅಧಿಕ ರನ್ ಗಳಿಸಿದ್ದರು. ಇದೀಗ ಜೈಸ್ವಾಲ್ ದಾಖಲೆಯನ್ನು ಟ್ರಾವಿಸ್ ಹೆಡ್ ಮುರಿದಿದ್ದಾರೆ.