ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಯುಎಸ್‌ಎ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್‌ಎ ತಂಡದ ನಾಯಕ ಮೊನಾಂಕ್ ಪಟೇಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಈ ಪಂದ್ಯದ ಮೂಲಕ ಈ ಎರಡೂ ತಂಡಗಳು ಚುಟುಕು ವಿಶ್ವಕಪ್ ಟೂರ್ನಿಯ ಅಭಿಯಾನವನ್ನು ಆರಂಭಿಸಲಿವೆ.
ಭಾರತ ಹಾಗೂ ಯುಎಸ್‌ಎ ತಂಡಗಳು 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಮ್ಮೆ ಮುಖಾಮುಖಿಯಾಗಿದ್ದವು. ಈ ವೇಳೆ ಭಾರತ ತಂಡ ಗೆದ್ದು ಬೀಗಿತ್ತು. ಇದೀಗ ಎರಡನೇ ಬಾರಿ ಕಾದಾಟ ನಡೆಸುತ್ತಿವೆ. ಇದೀಗ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ವಾಷಿಂಗ್ಟನ್ ಸುಂದರ್ ಹಾಗೂ ಸಂಜು ಸ್ಯಾಮ್ಸನ್ ಅವರು ಈ ಪಂದ್ಯವನ್ನು ಕಳೆದುಕೊಂಡಿದ್ದಾರೆ. ಅನಿರೀಕ್ಷಿತವಾಗಿ ಜಸ್‌ಪ್ರೀತ್ ಬುಮ್ರಾ ಆಡುತ್ತಿಲ್ಲ. ಹಾಗಾಗಿ ಮೊಹಮ್ಮದ್ ಸಿರಾಜ್ ಕಣಕ್ಕೆ ಇಳಿದಿದ್ದಾರೆ ಎಂದು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.
T20 World Cup: ಭಾರತ ತಂಡದಲ್ಲಿ ಗಾಯಾಳು ಹರ್ಷಿತ್ ರಾಣಾ ಸ್ಥಾನಕ್ಕೆ ಮೊಹಮ್ಮದ್ ಸಿರಾಜ್!
ಇನ್ನು ಯುಎಸ್‌ಎ ತಂಡದ ನಾಯಕ ಮೊನಾಂಕ್ ಪಟೇಲ್ ಮಾತನಾಡಿ, ಈ ಪಂದ್ಯಕ್ಕೆ ನಾವು ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದೇವೆ. ನಮ್ಮ ಆಡುವ ಬಳಗದಲ್ಲಿ ಆರು ಮಂದಿ ಬ್ಯಾಟ್ಸ್‌ಮನ್‌ಗಳು, ಇಬ್ಬರು ಆಲ್‌ರೌಂಡರ್‌ಗಳು ಹಾಗೂ ಮೂವರು ಬೌಲರ್‌ಗಳು ಆಡುತ್ತಿದ್ದಾರೆಂದು ತಿಳಿಸಿದ್ದಾರೆ.
ಇಶಾನ್ ಕಿಶನ್‌ಗೆ ಅವಕಾಶ
ಇಶಾನ್ ಕಿಶನ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಎರಡನೇ ವಿಕೆಟ್ ಕೀಪರ್ ಆಗಿ ಅವಕಾಶವನ್ನು ನೀಡಲಾಗಿತ್ತು. ಆದರೆ, ಸಂಜು ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಸತತ ವೈಫಲ್ಯ ಅನುಭವಿಸಿದ ಕಾರಣ ಅವರನ್ನು ಪ್ಲೇಯಿಂಗ್ Xiನಿಂದ ಕೈ ಬಿಡಲಾಗಿದೆ. ಇವರ ಬದಲು ಭರ್ಜರಿ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್‌ಗೆ ಅವಕಾಶವನ್ನು ನೀಡಲಾಗಿದೆ.
ಇತ್ತಂಡಗಳ ಪ್ಲೇಯಿಂಗ್ XI
ಭಾರತ: ಇಶಾನ್ ಕಿಶನ್ ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ವರುಣ್ ಚಕ್ರವರ್ತಿ
ಯುಎಸ್‌ಎ: ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್), ಸಾಯ್ ತೇಜಾ ಮುಕ್ಕಮಲ್ಲ, ಮೊನಾಂಕ್ ಪಟೇಲ್ (ನಾಯಕ), ಮಿಲಿಂದ್ ಕುಮಾರ್, ಸಂಜಯ್ ಕೃಷ್ಣಮೂರ್ತಿ, ಶುಭಂ ರಂಜನೆ, ಹರ್ಮೀತ್ ಸಿಂಗ್, ಮೊಹಮ್ಮದ್ ಮೊಹ್ಸಿನ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಅಲಿ ಖಾನ್, ಸೌರಭ್ ನೇತ್ರವಳ್ಕರ್
ತಂಡಗಳು
ಭಾರತ: ಇಶಾನ್ ಕಿಶನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೆ, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್, ಸಂಜು ಸಂದರ್, ವಾಷಿಂಗ್ಟನ್, ವಾಷಿಂಗ್ಟನ್ ಸುಂದರ್
ಯುಎಸ್‌ಎ: ಮೊನಾಂಕ್ ಪಟೇಲ್ (ನಾಯಕ), ಆಂಡ್ರೀಸ್ ಗೌಸ್ (ವಿಕೆಟ್ ಕೀಪರ್), ಸಾಯ್‌ತೇಜ ಮುಕ್ಕಮಲ್ಲ, ಶಯನ್ ಜಹಾಂಗೀರ್, ಮಿಲಿಂದ್ ಕುಮಾರ್, ಶುಭಂ ರಂಜನೆ, ಹರ್ಮೀತ್ ಸಿಂಗ್, ಮೊಹಮ್ಮದ್ ಮೊಹ್ಸಿನ್, ಅಲಿ ಖಾನ್, ನೋಸ್ತೂಶ್ ಕೆಂಜಿಗೆ, ಸೌರಭ್ ನೇತ್ರವಾಳ್ಕರ್, ಶಾಡ್ಲಿ ವ್ಯಾನ್ ಸ್ಚಾಲ್ಕ್ವಿಕ್, ಶೆಹಾನ್ ಜಯಸೂರ್ಯ, ಸಂಜಯ್ ಕೃಷ್ಣಮೂರ್ತಿ