IND vs ZIM: 15ನೇ ವಯಸ್ಸಿನ ಚೊಚ್ಚಲ ಅರ್ಧಶತಕ ಬಾರಿಸಿ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ!
ಭಾರತ ತಂಡದ ಉದಯೋನ್ಮುಖ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರಿಂದ ಕೊನೆಗೂ ಚೊಚ್ಚಲ ಅರ್ಧಶತಕ ಮೂಡಿಬಂದಿದೆ. ಜಿಂಬಾಬ್ವೆ ವಿರುದ್ಧ ಮೊದಲನೇ ಟಿ20ಐ ಪಂದ್ಯದಲ್ಲಿ ಭರ್ಜರಿ ಬ್ಯಾಟ್ ಮಾಡಿದ ವೈಭವ್18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಆ ಮೂಲಕ ಟಿ20ಐ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ.
ಅರ್ಧಶತಕ ಬಾರಿಸಿ ವೈಭವ್ ಸೂರ್ಯವಂಶಿ ವಿಶ್ವ ದಾಖಲೆ ಬರೆದಿದ್ದಾರೆ. -
ಹರಾರೆ: ಇಂಗ್ಲೆಂಡ್ ವಿರುದ್ಧ ತಮ್ಮ ಚೊಚ್ಚಲ ಟಿ20ಐ ಸರಣಿಯನ್ನು ಆಡಿ ವಿಫಲರಾಗಿದ್ದ 15ರ ವಯಸ್ಸಿನ ವೈಭವ್ ಸೂರ್ಯವಂಶಿ (vaibha Sooryavanshi) ಇದೀಗ ಜಿಂಬಾಬ್ವೆ ಎದುರು ಟಿ20ಐ ಸರಣಿಯ ಮೊದಲನೇ ಪಂದ್ಯದಲ್ಲಿ (IND vs ZIM) ಯಶಸ್ವಿಯಾಗಿದ್ದಾರೆ. ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಅಂಗಣದಲ್ಲಿ ನಡೆದಿದ್ದ ಮೊದಲನೇ ಟಿ20ಐ ಪಂದ್ಯದಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ವೈಬವ್ ತಮ್ಮ ಟಿ20ಐ ವೃತ್ತಿ ಜೀವನದಲ್ಲಿ ಚೊಚ್ಚಲ ಅರ್ಧಶತಕವನ್ನು ಬಾರಿಸಿದ್ದಾರೆ. ಇವರ ಅರ್ಧಶತಕದ ಬಲದಿಂದ ಭಾರತ ತಂಡ 126 ರನ್‌ಗಳ ಗುರಿಯನ್ನು 14ನೇ ಓವರ್‌ನಲ್ಲಿ ತಲುಪಿ 7 ವಿಕೆಟ್‌ಗಳಿಂದ ಗೆದ್ದು ಬೀಗಿತು ಹಾಗೂ ಟಿ20ಐ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಮುನ್ನಡೆ ಪಡೆಯಿತು.
ಅಭಿಷೇಕ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ 19 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 50 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ಪುರುಷರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅರ್ಧ ಶತಕ ಬಾರಿಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದಾರೆ. ಅವರು 15 ವರ್ಷ, 118 ದಿನಗಳಲ್ಲಿ ಈ ದಾಖಲೆಯನ್ನು ಬರೆದಿದ್ದಾರೆ. ಆ ಮೂಲಕ ನೇಪಾಳದ ಕುಶಾಲ್ ಮಲ್ಲಾ ಅವರ ಅವರ ದಾಖಲೆಯನ್ನು ಮುರಿದಿದ್ದಾರೆ. ಕುಶಾಲ್ ಮಲ್ಲಾ ಯುಎಸ್‌ಎ ಎದುರು 15 ವರ್ಷ, 340 ದಿನಗಳ ವಯಸ್ಸಿನಲ್ಲಿ ಅರ್ಧಶತಕವನ್ನು ಗಳಿಸಿದ್ದರು.
IND vs ZIM: ವೈಭವ್ ಚೊಚ್ಚಲ ಅರ್ಧಶತಕ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತಕ್ಕೆ ಮೊದಲ ಜಯ!
ಸಚಿನ್ ದಾಖಲೆ ಮುರಿದ ವೈಭವ್
ಪೂರ್ಣ ಸದಸ್ಯ ರಾಷ್ಟ್ರಗಳ ಆಟಗಾರರ ಪೈಕಿ ವೈಭವ್ ಸೂರ್ಯವಂಶಿ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಅರ್ಧಶತಕ ದಾಖಲಿಸಿದ ಭಾರತದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ಅವರು 16 ವರ್ಷ 213 ದಿನಗಳ ವಯಸ್ಸಿನಲ್ಲಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತಮ್ಮ ಮೊದಲ ಅಂತಾರಾಷ್ಟ್ರೀಯ ಅರ್ಧಶತಕ ದಾಖಲಿಸಿದ್ದರು.
Maiden international fifty 👏
— BCCI (@BCCI) July 23, 2026
Vaibhav Sooryavanshi becomes the youngest batter ever to score a T20I half-century 🫡
Follow the match ▶️ https://t.co/NKa0znQQ3H#TeamIndia | #ZIMvIND pic.twitter.com/aUWiBE9FLz
ಟಿ20ಐ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ
ಈ ಅರ್ಧಶತಕದೊಂದಿಗೆ ವೈಭವ್ ಸೂರ್ಯವಂಶಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಅರ್ಧಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜಿಬ್ರಾಲ್ಟರ್‌ನ ಲೂಯಿಸ್ ಬ್ರೂಸ್ ಹೆಸರಿನಲ್ಲಿತ್ತು. ಅವರು 2021ರಲ್ಲಿ ಮಾಲ್ಟಾ ವಿರುದ್ಧ 16 ವರ್ಷ 56 ದಿನಗಳ ವಯಸ್ಸಿನಲ್ಲಿ ಅರ್ಧಶತಕ ದಾಖಲಿಸಿ ಈ ಸಾಧನೆ ಮಾಡಿದ್ದರು. ವೈಭವ್ ಈಗ ಆ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
IND vs ZIM: ಭಾರತದ ಪರ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅಶೋಕ್ ಶರ್ಮಾ ಯಾರು?
ವೈಭವ್ ಸೂರ್ಯವಂಶಿ ಈ ಸಾಧನೆ ಮಾಡುವುದಕ್ಕೂ ಮುನ್ನ ಪೂರ್ಣ ಸದಸ್ಯ ರಾಷ್ಟ್ರಗಳ (Full Member Nations) ಪರ ಅತಿ ಕಿರಿಯ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ದಾಖಲಿಸಿದ ಆಟಗಾರ ಎಂಬ ದಾಖಲೆ ಅಫ್ಘಾನಿಸ್ತಾನದ ವಿಕೆಟ್‌ಕೀಪರ್-ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ಹೆಸರಿನಲ್ಲಿತ್ತು. ಗುರ್ಬಾಝ್ ಅವರು 2019ರಲ್ಲಿ ಜಿಂಬಾಬ್ವೆ ವಿರುದ್ಧ 17 ವರ್ಷ 96 ದಿನಗಳ ವಯಸ್ಸಿನಲ್ಲಿ ಅರ್ಧಶತಕ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ವೈಭವ್ ಸೂರ್ಯವಂಶಿ ಆ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆದಿದ್ದಾರೆ.