33 ಎಸೆತಗಳಲ್ಲಿ ಶತಕ ಬಾರಿಸಿ ವೈಭವ್ ಸೂರ್ಯವಂಶಿ ದಾಖಲೆ ಮುರಿದ ಇಶಾನ್ ಕಿಶನ್!
ಭಾರತ ಟಿ20 ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೆ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ದಾಖಲೆಯ ಶತಕವನ್ನು ಬಾರಿಸಿದ್ದಾರೆ. ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಅವರುಕ ಕೇವಲ 33 ಎಸೆತಗಳನ್ನು ಶತಕ ಸಿಡಿಸಿ, ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರ ದಾಖಲೆಯನ್ನು ಮುರಿದಿದ್ದಾರೆ.
ವೈಭವ್ ಸೂರ್ಯವಂಶಿ ದಾಖಲೆ ಮುರಿದ ಇಶಾನ್ ಕಿಶನ್. -
ಅಹಮದಾಬಾದ್: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ (ICC T20I World Cup 2206) ಭಾರತ ತಂಡದಲ್ಲಿ ಸ್ಥಾನ ಪಡೆದ ಬೆನ್ನಲ್ಲೆ ಜಾರ್ಖಂಡ್ ನಾಯಕ ಹಾಗೂ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ (Ishan Kishan) ವಿಜಯ್ ಹಝಾರೆ ಟ್ರೋಫಿ (Vijay Hazare Trophy 2026) ಟೂರ್ನಿಯ ಪಂದ್ಯದಲ್ಲಿ ದಾಖಲೆಯ ಶತಕವನ್ನು ಬಾರಿಸಿದ್ದಾರೆ. ಅವರು ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅಂತ್ಯದ ವೇಗದ ಶತಕ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊ೦ಡಿದ್ದಾರೆ. ಬಿಹಾರದ ನಾಯಕ ಸಕಿಬುಲ್ ಗನಿ ಅವರು 32 ಎಸೆತಗಳಲ್ಲಿ ಶತಕ ಸಿಡಿಸಿದ ಕೆಲವೇ ಗಂಟೆಗಳಲ್ಲಿ ಇಶಾನ್ ಕಿಶನ್ ಈ ದಾಖಲೆಯನ್ನು ಬರೆದಿದ್ದಾರೆ.
ಬುಧವಾರ ಇಶಾನ್ ಕಿಶನ್ ಮಾತ್ರವಲ್ಲ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೂಡ ಸ್ಪೋಟಕ ಶತಕವನ್ನು ಬಾರಿಸಿದ್ದಾರೆ. ಅವರು ಬಿಹಾರ ತಂಡದ ಪರ 36 ಎಸೆತಗಳಲ್ಲಿ ಶತಕವನ್ನು ಪೂರ್ಣಗೊಳಿಸಿದ್ದಾರೆ. ಅವರು ಅಂತಿಮವಾಗಿ 84 ಎಸೆತಗಳಲ್ಲಿ 190 ರನ್‌ಗಳನ್ನು ಬಾರಿಸಿದ್ದಾರೆ. ಸಕಿಬುಲ್ ಗನಿ ಅಗೂ ಆಯುಷ್ ಲೊಹರುಕ ಅವರ ಶತಕಗಳ ಬಲದಿಂದ ಬಿಹಾರ ತಂಡ ತನ್ನ ಪಾಲಿನ 50 ಓವರ್‌ಗಳಿಗೆ 574 ರನ್‌ಗಳನ್ನು ಬಾರಿಸಿತ್ತು. ಆ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೊತ್ತವನ್ನು ಕಲೆ ಹಾಕಿದ ತಂಡ ಎಂಬ ಕೀರ್ತಿಗೆ ಬಿಹಾರ ಭಾಜನವಾಗಿತ್ತು.
Vijay Hazare Trophy: 62 ಎಸೆತಗಳಲ್ಲಿ ಶತಕ ಬಾರಿಸಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ!
ಇಶಾನ್ ಕಿಶನ್ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಗನಿ ಅವರ ದಾಖಲೆಯ ಸನಿಹ ಬಂದರೂ ಸಾಧ್ಯವಾಗಲಿಲ್ಲ. ಆದರೆ, ಒಟ್ಟು 39 ಎಸೆತಗಳಲ್ಲಿ 125 ರನ್‌ಗಳನ್ನು ಕಲೆ ಹಾಕಿದರು. ಅಂತಿಮ ಜಾರ್ಖಂಡ್ ತಂಡ ತನ್ನ ಪಾಲಿನ 50 ಓವರ್‌ಗಳಿಗೆ 9 ವಿಕೆಟ್ ನಷ್ಟಕ್ಕೆ 412 ರನ್‌ಗಳನ್ನು ಕಲೆ ಹಾಕಿತ್ತು. ಅಂದ ಹಾಗೆ ಇದಕ್ಕೂ ಮುನ್ನ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿಯೂ ಇಶಾನ್ ಕಿಶನ್ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದರು ಆ ಮೂಲಕ ಜಾರ್ಖಂಡ್ ತಂಡಕ್ಕೆ ಚೊಚ್ಚಲ ಪ್ರಶಸ್ತಿ ತಂದುಕೊಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು.
ಸೈಯದ್ ಮುಷ್ತಾಲ್ ಅಲಿ ಟ್ರೋಫಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಇಶಾನ್ ಕಿಶನ್ ಅಗ್ರ ಸ್ಥಾನದಲ್ಲಿದ್ದಾರೆ. ಅವರು ಜಾರ್ಖಂಡ್ ಪರ 517 ರನ್‌ಗಳನ್ನು ಸಿಡಿಸಿದ್ದರು. ಫೈನಲ್ ಪಂದ್ಯದಲ್ಲಿ ಹರಿಯಾಣ ವಿರುದ್ಧ 45 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದರು. ಆ ಮೂಲಕ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಶತಕ ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದರು. ಈ ಟೂರ್ನಿಯಲ್ಲಿ ಇಶಾನ್ 5 ಶತಕಗಳನ್ನು ಬಾರಿಸಿದ್ದಾರೆ. ಆ ಮೂಲಕ ಇಷ್ಟೇ ಶತಕಗಳನ್ನು ಗಳಿಸಿದ್ದ ಅಭಿಷೇಕ್ ಶರ್ಮಾ ದಾಖಲೆಯನ್ನು ಸರಿಗಟ್ಟಿದ್ದರು.
ವಿಸ್ಫೋಟಕ ಬ್ಯಾಟಿಂಗ್; 36 ಎಸೆತಗಳಲ್ಲಿ ಶತಕ ಬಾರಿಸಿದ ಸೂರ್ಯವಂಶಿ
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿನ ಪ್ರದರ್ಶನದ ಆಧಾರದ ಮೇಲೆ ಇಶಾನ್ ಕಿಶನ್ ಅವರನ್ನು ಭಾರತ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದಕ್ಕೂ ಮುನ್ನ ಅವರು ನ್ಯೂಜಿಲೆಂಡ್ ವಿರುದ್ಧ ಟಿ20ಐ ಸರಣಿಯಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಇವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ ದ್ವಿಶತಕ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೂಡ ಇಶಾನ್ ಕಿಶನ್ ಅವರ ಹೆಸರಿನಲ್ಲಿದೆ.