ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತದ ಪ್ಲೇಯಿಂಗ್‌ XI ಆರಿಸಿದ ವಸೀಮ್‌ ಜಾಫರ್‌!

2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ತಮ್ಮ ನೆಚ್ಚಿನ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ ಅನ್ನು ಮಾಜಿ ಟೆಸ್ಟ್‌ ಆರಂಭಿಕ ವಸೀಮ್‌ ಜಾಫರ್‌ ಆಯ್ಕೆ ಮಾಡಿದ್ದಾರೆ. ಈ ತಂಡದಲ್ಲಿ ಅವರು ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರಿಗೆ ಕೂಡ ಸ್ಥಾನ ನೀಡಿದ್ದಾರೆ. ಪ್ರಸ್ತುತ ಭಾರತ ಏಕದಿನ ತಂಡದಲ್ಲಿ ಈ ಇಬ್ಬರೂ ಆಟಗಾರರು ಆಡುತ್ತಿಲ್ಲ.

2027ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಆರಿಸಿದ ವಸೀಮ್‌ ಜಾಫರ್‌!

ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಆರಿಸಿದ ವಸೀಮ್‌ ಜಾಫರ್‌. -

Profile
Ramesh Kote Jul 28, 2026 3:12 PM

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಂದಿನ ದೊಡ್ಡ ಗುರಿ 2027ರ ಏಕದಿನ ವಿಶ್ವಕಪ್ (ODI World Cup 2027) ಗೆಲ್ಲುವುದಾಗಿದೆ. ಕಳೆದ ಮೂರು ಪುರುಷರ ಐಸಿಸಿ ಟೂರ್ನಿಗಳನ್ನು ಭಾರತ ತಂಡವೇ ಗೆದ್ದಿದ್ದು, ಮುಂದಿನ ವರ್ಷವೂ ಅದೇ ಯಶಸ್ಸಿನ ಸರಪಳಿಯನ್ನು ಮುಂದುವರಿಸುವ ನಿಟ್ಟಿನಲ್ಲಿ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇದರ ನಡುವೆ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಯಾವ ಪ್ಲೇಯಿಂಗ್ ಇಲೆವೆನ್‌ನೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಈಗ ಪ್ರಮುಖ ಚರ್ಚೆಯ ವಿಷಯವಾಗಿದೆ. ಇದೀಗ ಮಾಜಿ ಕ್ರಿಕೆಟಿಗ ವಸೀಮ್‌ ಜಾಫರ್‌ (Waseem Jaffer) ಅವರು ಕೂಡ ತಮ್ಮ ನೆಚ್ಚಿನ ಭಾರತ ತಂಡದ ಪ್ಲೇಯಿಂಗ್‌ XI ಅನ್ನು ಆರಿಸಿದ್ದಾರೆ.

ಭಾರತದ ಮಾಜಿ ಆರಂಭಿಕ ಬ್ಯಾಟರ್ ವಸೀಮ್ ಜಾಫರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ 2027ರ ವಿಶ್ವಕಪ್‌ ಟೂರ್ನಿಗಾಗಿ ತಮ್ಮ ನೆಚ್ಚಿನ 12 ಆಟಗಾರರ ತಂಡವನ್ನು ಪ್ರಕಟಿಸಿದ್ದಾರೆ. ಈ ತಂಡದಲ್ಲಿ ಇಶಾನ್ ಕಿಶನ್ ಅವರನ್ನು 12ನೇ ಆಟಗಾರನಾಗಿ ಆಯ್ಕೆ ಮಾಡಿದ್ದು, ಪ್ರಸ್ತುತ ಭಾರತದ ಏಕದಿನ ತಂಡದಲ್ಲಿ ಸ್ಥಾನ ಪಡೆಯದಿರುವ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಅವರಿಗೂ ಅವಕಾಶ ನೀಡಿದ್ದಾರೆ.

PAK vs WI: ರನ್‌ ನೀಡದೆ 5 ವಿಕೆಟ್‌ ಸಾಧನೆ ಮಾಡಿ ವಿಶೇಷ ದಾಖಲೆ ಬರೆದ ಜಸ್ಟಿನ್‌ ಗ್ರೀವ್ಸ್‌!

ರೋಹಿತ್ ಶರ್ಮಾಗೆ ಸ್ಥಾನ

ಜಾಫರ್ ತಮ್ಮ ಆಯ್ಕೆಯಲ್ಲಿ ಬ್ಯಾಟಿಂಗ್ ಕ್ರಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿದ್ದಾರೆ. ಮೂರನೇ, ನಾಲ್ಕನೇ ಮತ್ತು ಐದನೇ ಕ್ರಮಾಂಕಗಳಲ್ಲಿ ಕ್ರಮವಾಗಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರಿಗೆ ಸ್ಥಾನ ನೀಡಿದ್ದಾರೆ.

ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಿ ತಂಡಕ್ಕೆ ಸಮತೋಲನ ಒದಗಿಸಿದ್ದಾರೆ. ಆದರೆ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ತಂಡದಿಂದ ಹೊರಗಿಟ್ಟಿರುವುದು ಅಚ್ಚರಿಯಾಗಿದೆ. ಜೊತೆಗೆ ಎರಡನೇ ವಿಕೆಟ್‌ಕೀಪರ್ ಆಯ್ಕೆಯಾಗಿ ಇಶಾನ್ ಕಿಶನ್ ಅವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ಟೆಸ್ಟ್ ತಂಡಕ್ಕೆ ಚೊಚ್ಚಲ ಕರೆ ಪಡೆದ 33 ವರ್ಷದ ಸರನ್ಶ್ ಜೈನ್ ಯಾರು?

ಬೌಲಿಂಗ್ ವಿಭಾಗದಲ್ಲಿ ಮಹತ್ವದ ಬದಲಾವಣೆ

ವಸೀಮ್‌ ಜಾಫರ್ ಅವರ ಆಯ್ಕೆಯ ತಂಡದಲ್ಲಿ ಬೌಲಿಂಗ್ ವಿಭಾಗದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ಪ್ರಮುಖ ಸ್ಪಿನ್ನರ್ ಆಗಿ ಅವರು ಕುಲ್‌ದೀಪ್ ಯಾದವ್ ಅವರನ್ನು ಆಯ್ಕೆ ಮಾಡಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ಕುಲ್‌ದೀಪ್‌ಗೆ ಒಂದೇ ಒಂದು ಪಂದ್ಯದಲ್ಲೂ ಆಡುವ ಅವಕಾಶ ಸಿಕ್ಕಿರಲಿಲ್ಲ.

ಇದರ ಜೊತೆಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರಿಗೂ ಸ್ಥಾನ ನೀಡಿದ್ದಾರೆ. ಶಮಿ ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಯಾವುದೇ ಏಕದಿನ ಪಂದ್ಯ ಆಡಿಲ್ಲ. ಅಲ್ಲದೆ, ಮೊಹಮ್ಮದ್ ಸಿರಾಜ್ ಅವರನ್ನೂ ಜಾಫರ್ ತಮ್ಮ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸಿದ್ದಾರೆ. ಅಫ್ಘಾನಿಸ್ತಾನ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಳಿಗೆ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ.

IND vs ZIM: ಭಾರತ ಟಿ20ಐ ತಂಡದಿಂದ ಅಭಿಷೇಕ್‌ ಶರ್ಮಾರನ್ನು ಕೈಬಿಡಿ ಎಂದ ಕೆ ಶ್ರೀಕಾಂತ್‌!

2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ವಸೀಮ್‌ ಜಾಫರ್ ಆಯ್ಕೆ ಮಾಡಿದ ಪ್ಲೇಯಿಂಗ್ ಇಲೆವೆನ್

  1. ರೋಹಿತ್ ಶರ್ಮಾ
  2. ಶುಭಮನ್ ಗಿಲ್ (ನಾಯಕ)
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ವಿಕೆಟ್‌ಕೀಪರ್)
  6. ಹಾರ್ದಿಕ್ ಪಾಂಡ್ಯ
  7. ಅಕ್ಷರ್ ಪಟೇಲ್
  8. ಕುಲದೀಪ್ ಯಾದವ್
  9. ಜಸ್ಪ್ರೀತ್ ಬುಮ್ರಾ
  10. ಮೊಹಮ್ಮದ್ ಶಮಿ
  11. ಮೊಹಮ್ಮದ್ ಸಿರಾಜ್

12ನೇ ಆಟಗಾರ: ಇಶಾನ್ ಕಿಶನ್