WI vs ZIM: 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ವಿಶೇಷ ದಾಖಲೆ ಬರೆದ ಶಿಮ್ರಾನ್ ಹೆಟ್ಮಾಯೆರ್!
ವೆಸ್ಟ್ ಇಂಡೀಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶಿಮ್ರಾನ್ ಹೆಟ್ಮಾಯೆರ್ ಅವರು ಜಿಂಬಾಬ್ವೆ ವಿರುದ್ಧದ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಅವರು ಕೇವಲ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಆ ಮೂಲಕ ವೆಸ್ಟ್ ಇಂಡೀಸ್ ಪರ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ವೆಸ್ಟ್ ಇಂಡೀಸ್ ಪರ ವೇಗದ ಅರ್ಧಶತಕ ಬಾರಿಸಿದ ಹೆಟ್ಮಾಯೆರ್. -
ಮುಂಬೈ: ಜಿಂಬಾಬ್ವೆ ವಿರುದ್ಧದ 2026ರ ಐಸಿಸಿ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯ ಸೂಪರ್-8ರ ಪಂದ್ಯದಲ್ಲಿ (WI vs ZIM) ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್‌ಮನ್ ಶಿಮ್ರಾನ್ ಹೆಟ್ಮಾಯೆರ್ (Shimron Hetmyer) ಅಬ್ಬರಿಸಿದ್ದಾರೆ. ಅವರು ಸ್ಪೋಟಕ ಅರ್ಧಶತಕವನ್ನು ಬಾರಿಸುವ ಮೂಲಕ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ಪರ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಇದರೊದಿಗೆ ವೆಸ್ಟ್ ಇಂಡೀಸ್ ತಂಡ ಈ ಪಂದ್ಯದಲ್ಲಿ ದೊಡ್ಡ ಮೊತ್ತವನ್ನು ದಾಖಲಿಸಲು ಹೆಟ್ಮಾಯೆರ್ ನೆರವು ನೀಡಿದ್ದಾರೆ.
ಸೋಮವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಆರಂಭಿಕರಾದ ಬ್ರೆಂಡನ್ ಕಿಂಗ್ ಹಾಗೂ ಶೇಯ್ ಹೋಪ್ ಬೇಗ ನಿರ್ಗಮಿಸಿದರು. ಆದರೆ, ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಶಿಮ್ರಾನ್ ಹೆಟ್ಮಾಯೆರ್, ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಜಿಂಬಾಬ್ವೆ ಬೌಲರ್‌ಗಳಿಗೆ ಬೆವರಿಳಿದರು. ಅವರು ಆಡಿದ ಕೇವಲ 19 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆ ಮೂಲಕ ಟಿ20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕವನ್ನು ಬಾರಿಸಿದ ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಎನಿಸಿಕೊಂಡರು.
IND vs SA: ಅಕ್ಷರ್ ಪಟೇಲ್‌ರನ್ನು ಹೇಗೆ ಮರೆತಿದ್ದೀರಿ?-ಭಾರತ ತಂಡವನ್ನು ಟೀಕಿಸಿದ ಆರ್ ಅಶ್ವಿನ್!
ಬಳಿಕ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿದ ಅವರು, ಜಿಂಬಾಬ್ವೆ ಬೌಲರ್‌ಗಳನ್ನು ಇನ್ನಷ್ಟು ಕಾಡಿದರು. ಅವರು ಈ ಇನಿಂಗ್ಸ್‌ನಲ್ಲಿ ಆಡಿದ 34 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 7 ಬೌಂಡರಿಗಳೊಂದಿಗೆ 85 ರನ್‌ಗಳನ್ನು ಬಾರಿಸಿದರು. ಅದರಲ್ಲಿಯೂ ವಿಶೇಷವಾಗಿ ಅವರು 250ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದ್ದು ಎಲ್ಲರ ಗಮನವನ್ನು ಸೆಳೆಯಿತು. ಇವರ ಜೊತೆ ಮತ್ತೊಂದು ತುದಿಯಲ್ಲಿ ಬ್ಯಾಟ್ ಮಾಡಿದ ರೊವ್ಮನ್ ಪೊವೆಲ್ ಅವರ ಜೊತೆಗೆ 52 ಎಸೆತಗಳಲ್ಲಿ 122 ರನ್‌ಗಳ ದೊಡ್ಡ ಜೊತೆಯಾಟವನ್ನು ಆಡಿದರು. ಆ ಮೂಲಕ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
The joint fastest half century in a T20 World Cup.🔥🔥
— Windies Cricket (@windiescricket) February 23, 2026
Hetmyer is putting on a show at Wandhede!💥#T20WorldCup | #MaroonSpirit | #WIvZIM pic.twitter.com/eCGXDwZC4w
1500 ಟಿ20 ರನ್ ಪೂರ್ಣಗೊಳಿಸಿದ ಹೆಟ್ಮಾಯೆರ್
ಜಿಂಬಾಬ್ವೆ ವಿರುದ್ಧ ಈ ಸ್ಪೋಟಕ ಇನಿಂಗ್ಸ್ ಮೂಲಕ ಶಿಮ್ರಾನ್ ಹೆಟ್ಮಾಯೆರ್ ಅವರು ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1500 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ತಮ್ಮ ಟಿ20ಐ ವೃತ್ತಿ ಜೀವನದಲ್ಲಿ ಎಡಗೈ ಬ್ಯಾಟ್ಸ್‌ಮನ್ ಮತ್ತೊಂದು ಮೈಲುಗಲ್ಲು ತಲುಪಿದರು.
1️⃣5️⃣0️⃣0️⃣ T20I runs and counting!🙌🏽#MaroonSpirit #T20WorldCup pic.twitter.com/0yJgcKyXDo
— Windies Cricket (@windiescricket) February 23, 2026
ರೊವ್ಮನ್ ಪೊವೆಲ್ ಅರ್ಧಶತಕ
ಇನ್ನು ಶಿಮ್ರಾನ್ ಹೆಟ್ಮಾಯೆರ್ ಅರ್ಧಶತಕ ಸಿಡಿಸಿದ ಬಳಿಕ ರೊವ್ಮನ್ ಪೊವೆಲ್ ಕೂಡ ಸ್ಪೋಟಕ ಅರ್ಧಶತಕವನ್ನು ಬಾರಿಸಿದರು. ಇವರು 35 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 168.57ರ ಸ್ಟ್ರೈಕ್ ರೇಟ್‌ನಲ್ಲಿ 59 ರನ್ ಬಾರಿಸಿದರು. ಆ ಮೂಲಕ ವೆಸ್ಟ್ ಇಂಡೀಸ್ ತಂಡದ ಮೊತ್ತವನ್ನು 200ರ ಸನಿಹ ತಂದು ಔಟ್ ಆದರು.