ನವದೆಹಲಿ: ಊಟದ ವೇಳೆ ಟೇಬಲ್ ಹತ್ತಿರ ಇದ್ದಕ್ಕಿದ್ದಂತೆ ಇಲಿಯನ್ನು ನೋಡಿದ ಆಸ್ಟ್ರೇಲಿಯಾ ಕ್ರಿಕೆಟ್ (Australia) ಆಟಗಾರ್ತಿಯರು ಬೆಕ್ಕಸ ಬೆರಗಾಗಿದ್ದಾರೆ. ಈ ಸನ್ನಿವೇಶದಿಂದ ಹೋಟೆಲ್‌ನಲ್ಲಿ ಕೆಲ ಹೊತ್ತು ಗೊಂದಲ ಸೃಷ್ಟಿಯಾಯಿತು. ಕೆಲವು ಆಟಗಾರ್ತಿಯರು ಕಿರುಚುತ್ತಾ ಕುರ್ಚಿಗಳ ಮೇಲೆ ಹಾರಿದ್ದಾರೆ. ಇದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಇಲಿ ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಬಳಿಕ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಈ ಕುರಿತು ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಆಟಗಾರ್ತಿಯರ ನಡೆದ ಘಟನೆಯನ್ನು ವಿವರಿಸಿದ್ದಾರೆ. ಅವರು ಊಟ ಮುಗಿಸಿ ಹೊರಡುವ ಹಂತದಲ್ಲಿದ್ದಾಗ ಇದ್ದಕ್ಕಿದ್ದಂತೆ ಇಲಿ ಕಾಣಿಸಿಕೊಂಡಿತು ಎಂದು ಅವರು ಉಲ್ಲೇಖಿಸಿದ್ದಾರೆ.
ವಿಡಿಯೊದಲ್ಲಿ ತಂಡವು ಅದನ್ನು ನೋಡಿ ಹಾಸ್ಯಸ್ಪದವಾಗಿ ವಿವರಿಸಿದ್ದರೂ, ಈ ಘಟನೆ ಟೂರ್ನಿಯ ಸಮಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಔತಣ ಕೂಟ ಆಯೋಜಿಸಿದ್ದ ಹೋಟೆಲ್‌ನ ಸ್ವಚ್ಛತೆ ಮತ್ತು ನೈರ್ಮಲ್ಯ ಮಾನದಂಡಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಪ್ರಸ್ತುತ ಟೂರ್ನಿಯಲ್ಲಿ ಆಸ್ಟ್ರೇಲಿಯನ್ನರು ಈಗಾಗಲೇ ವಿಶ್ವಕಪ್‌ನ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅವರು ಆಡಿರುವ ಆರು ಪಂದ್ಯಗಳಲ್ಲಿ ಐದರಲ್ಲಿ ಜಯಗಳಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
IND vs AUS: ಮೂರನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿತು. ಅವರ ಕೊನೆಯ ಗುಂಪು ಹಂತದ ಪಂದ್ಯವು ಅಕ್ಟೋಬರ್ 25 ರಂದು ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳೆಯರ ತಂಡದ ವಿರುದ್ಧ ನಡೆಯಲಿದೆ.ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಭಾರತ ಸೇರಿದಂತೆ ಇತರ ತಂಡಗಳು ನಾಕೌಟ್ ಸುತ್ತಿನಲ್ಲಿ ತಮ್ಮ ಸ್ಥಾನಗಳನ್ನು ಖಚಿತಪಡಿಸಿಕೊಂಡಿವೆ. ಗುಂಪು ಹಂತವು ಭಾನುವಾರ, ಅಕ್ಟೋಬರ್ 26 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದೊಂದಿಗೆ ಮುಕ್ತಾಯಗೊಂಡ ಬಳಿಕ ಸೆಮಿಫೈನಲ್ ಪಂದ್ಯಗಳು ನಡೆಯಲಿವೆ.
ಇನ್ನು ಮೊದಲ ಸೆಮಿಫೈನಲ್ ಪಂದ್ಯ ಅಕ್ಟೋಬರ್ 29 ರ ಬುಧವಾರ ಗುವಾಹಟಿಯಲ್ಲಿ ನಡೆಯಲಿದ್ದು, ನಂತರ ಎರಡನೇ ಸೆಮಿಫೈನಲ್ ಪಂದ್ಯ ಅಕ್ಟೋಬರ್ 30 ರ ಗುರುವಾರ ನವ ಮುಂಬೈನ ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯ ನವೆಂಬರ್ 2 ರ ಭಾನುವಾರ ನವ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹೋಟೆಲ್‌ನಲ್ಲಿ ಸಂಭವಿಸಿದ ಘಟನೆಯ ಭೀತಿಯ ಹೊರತಾಗಿಯೂ, ಆಸ್ಟ್ರೇಲಿಯಾ ತಂಡ, ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯವನ್ನು ಮುಂದುವರಿಸಲು ಎದುರು ನೋಡುತ್ತಿದೆ.