ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಭಾರತದ ಪರ ಇನಿಂಗ್ಸ್‌ ಆರಂಭಿಸಬಲ್ಲ ಮೂವರು ಆರಂಭಿಕ ಜೋಡಿಗಳು!

ಜೂನ್‌ 20 ರಂದು ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮೇ 24 ರಂದು ಪ್ರಕಟಿಸಿದೆ. ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ಕಾರಣ ಇವರ ಸ್ಥಾನದಲ್ಲಿ ಯಾರು ಆಡುತ್ತಾರೆಂಬ ಬಗ್ಗೆ ತೀವ್ರ ಕುತೂಹಲವಿದೆ.

ಭಾರತದ ಪರ ಇನಿಂಗ್ಸ್‌ ಆರಂಭಿಸಬಲ್ಲ ಮೂರು ಆರಂಭಿಕ ಜೋಡಿ!

ಭಾರತ ಟೆಸ್ಟ್‌ ತಂಡದ ಪರ ಇನಿಂಗ್ಸ್‌ ಆರಂಭಿಸಬಲ್ಲ ಮೂರು ಜೋಡಿಗಳು.

Profile Ramesh Kote May 24, 2025 10:47 PM

ನವದೆಹಲಿ: ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿಗೆ (IND vs ENG) 18 ಸದಸ್ಯರ ಭಾರತ ತಂಡವನ್ನು (Indai Test Squad) ಶನಿವಾರ ಪ್ರಕಟಿಸಲಾಗಿದೆ. ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ಕಾರಣ ಭಾರತ ತಂಡದ ಪ್ಲೇಯಿಂಗ್‌ xiನಲ್ಲಿ ಅವರ ಸ್ಥಾನದಲ್ಲಿ ಯಾರು ಆಡಲಿದ್ದಾರೆಂಬ ಬಗ್ಗೆ ತೀವ್ರ ಕುತೂಹಲವಿದೆ. ವಿರಾಟ್‌ ಕೊಹ್ಲಿಯ ನಾಲ್ಕನೇ ಕ್ರಮಾಂಕದಲ್ಲಿ ಆಡಲು ತಂಡಕ್ಕೆ ಸಾಕಷ್ಟು ಆಯ್ಕೆಗಳಿವೆ. ಆದರೆ, ಯಶಸ್ವಿ ಜೈಸ್ವಾಲ್‌ ಅವರ ಜೊತೆ ಇನಿಂಗ್ಸ್‌ ಆರಂಭಿಸಿ ರೋಹಿತ್‌ ಶರ್ಮಾ ಅವರ ಸ್ಥಾನವನ್ನು ಯಾರು ತುಂಬಲಿದ್ದಾರೆಂಬ ಬಗ್ಗೆ ತುಂಬಾ ಕುತೂಹಲವಿದೆ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್‌ ವಿರುದ್ದದ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡದ ಪರ ಯಾರು ಇನಿಂಗ್ಸ್‌ ಆರಂಭಿಸಲಿದ್ದಾರೆಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಬಿಸಿಸಿಐ ಪ್ರಕಟಿಸಿರುವ ಭಾರತ ಟೆಸ್ಟ್‌ ತಂಡದಲ್ಲಿ ಆರಂಭಿಕ ಸ್ಥಾನಕ್ಕೆ ಹಲವು ಆಟಗಾರರು ಇದ್ದಾರೆ. ಯಶಸ್ವಿ ಜೈಸ್ವಾಲ್‌ ಜೊತೆಗೆ ಇನಿಂಗ್ಸ್‌ ಆರಂಭಿಸಬಲ್ಲ ಸಾಮರ್ಥ್ಯವನ್ನು ಕೆಎಲ್‌ ರಾಹುಲ್‌ ಮತ್ತು ಶುಭಮನ್‌ ಗಿಲ್‌ ಇದ್ದಾರೆ. ಈ ಇಬ್ಬರೂ ಹಿಂದೆ ಭಾರತ ಟೆಸ್ಟ್‌ ತಂಡದಲ್ಲಿ ಇನಿಂಗ್ಸ್‌ ಆರಂಭಿಸಿದ ಅನುಭವವನ್ನು ಹೊಂದಿದ್ದಾರೆ. ಇದೀಗ ಮತ್ತೊಬ್ಬ ಆಟಗಾರ ಸಾಯಿ ಸುದರ್ಶನ್‌ ಟೆಸ್ಟ್‌ ತಂಡದಲ್ಲಿ ಚೊಚ್ಚಲ ಅವಕಾಶವನ್ನು ಪಡೆದಿದ್ದಾರೆ.

IND vs ENG: ಭಾರತ ಟೆಸ್ಟ್‌ ತಂಡದಲ್ಲಿ ಶಮಿಗೆ ಸ್ಥಾನ ನೀಡದೇ ಇರಲು ಕಾರಣ ತಿಳಿಸಿದ ಅಜಿತ್‌ ಅಗರ್ಕರ್‌!

ಭಾರತ ತಂಡದ ಪರ ಇನಿಂಗ್ಸ್‌ ಆರಂಭಿಸಲಿರುವ ಮೂರು ಸಂಭಾವ್ಯ ಆರಂಭಿಕ ಜೋಡಿಗಳು

ಯಶಸ್ವಿ ಜೈಸ್ವಾಲ್‌ ಮತ್ತು ಸಾಯಿ ಸುದರ್ಶನ್‌

ಯಶಸ್ವಿ ಜೈಸ್ವಾಲ್‌ 19 ವರ್ಷ ವಯಸ್ಸು. ಅವರು ಭಾರತ ತಂಡದಲ್ಲಿ ಉದಯೋನ್ಮುಖ ಬ್ಯಾಟ್ಸ್‌ಮನ್‌ ಆಗಿ ಭರವಸೆಯನ್ನು ಮೂಡಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ಇದೇ ಮೊದಲ ಬಾರಿ ಟೆಸ್ಟ್‌ ಕ್ರಿಕೆಟ್‌ ಆಡಲು ಯಶಸ್ವಿ ಜೈಸ್ವಾಲ್‌ ಸಜ್ಜಾಗುತ್ತಿದ್ದಾರೆ. ಇವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 52.88ರ ಸರಾಸರಿಯಲ್ಲಿ 1,798 ರನ್‌ಗಳನ್ನು ಕಲೆ ಹಾಕಿದ್ದಾರೆ. ಯಶಸ್ವಿ ಜೈಸ್ವಾಲ್‌ ಜೊತೆ ಸಾಯಿ ಸುದರ್ಶನ್‌ ಇನಿಂಗ್ಸ್‌ ಆರಂಭಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಸರ್ರೆ ತಂಡದ ಪರ ಸಾಯಿ ಸುದರ್ಶನ್‌ ಅವರು ಕೌಂಟಿ ಆಡಿದ ಅನುಭವವನ್ನು ಹೊಂದಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ ಅವರು ಅತ್ಯುತ್ತಮ ಕೌಶಲವನ್ನು ಕರಗತ ಮಾಡಿಕೊಂಡಿದ್ದಾರೆ.

India's Test Squad: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ, ಶುಭಮನ್‌ ಗಿಲ್‌ ನೂತನ ನಾಯಕ!

ಶುಭಮನ್‌ ಗಿಲ್‌ ಮತ್ತು ಯಶಸ್ವಿ ಜೈಸ್ವಾಲ್‌

ಶುಭಮನ್‌ ಗಿಲ್‌ ಅವರು ರೋಹಿತ್‌ ಶರ್ಮಾ ಜೊತೆ ಅತ್ಯುತ್ತಮ ಆರಂಭಿಕ ಬ್ಯಾಟ್ಸ್‌ಮನ್‌ ಆಗಿದ್ದಾರೆ. ತಮ್ಮ ವೃತ್ತಿ ಜೀವನದ 59 ಟೆಸ್ಟ್‌ ಇನಿಂಗ್ಸ್‌ಗಳಲ್ಲಿ 29 ಇನಿಂಗ್ಸ್‌ಗಳಲ್ಲಿ ಇನಿಂಗ್ಸ್‌ ಆರಂಭಿಸಿದ್ದಾರೆ. ಗಿಲ್‌ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ 32.37ರ ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. ಇದರಲ್ಲಿ ಅವರು ಎರಡು ಶತಕಗಳು ಹಾಗೂ ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ. ಯಶಸ್ವಿ ಜೈಸ್ವಾಲ್‌ ಎಡಗೈ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಡಗೈ ಹಾಗೂ ಬಲಗೈ ಬ್ಯಾಟ್ಸ್‌ಮನ್‌ಗಳ ಕಾಂಬಿನೇಷನ್‌ ಸಲುವಾಗಿ ಈ ಇಬ್ಬರಿಗೆ ಇನಿಂಗ್ಸ್‌ ಆರಂಭಿಸಲು ಅವಕಾಶ ನೀಡಬಹುದು.

Karun Nair: 8 ವರ್ಷಗಳ ಬಳಿಕ ಟೆಸ್ಟ್‌ ತಂಡಕ್ಕೆ ಗ್ರೇಟೆಸ್ಟ್‌ ಕಮ್‌ಬ್ಯಾಕ್‌ ಮಾಡಿದ ಕನ್ನಡಿಗ!

ಯಶಸ್ವಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌

ಯಶಸ್ವಿ ಜೈಸ್ವಾಲ್‌ ಹಾಗೂ ಕೆಎಲ್‌ ರಾಹುಲ್‌ ಅನುಭವಿ ಆತರಂಭಿಕ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. 2024-25ರ ಸಾಲಿನ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಆರಂಭಿಕ ಪಂದ್ಯದಲ್ಲಿ ಈ ಜೋಡಿ ಇನಿಂಗ್ಸ್‌ ಆರಂಭಿಸಿದ್ದರು. ಅದರಂತೆ ಈ ಜೋಡಿ ಮೊದಲನೇ ಟೆಸ್ಟ್‌ನಲ್ಲಿ ಯಶಸ್ವಿಯಾಗಿತ್ತು. ಪರ್ತ್‌ನಲ್ಲಿ ಈ ಇಬ್ಬರೂ ಮೊದಲನೇ ವಿಕೆಟ್‌ಗೆ 201 ರನ್‌ಗಳ ಜೊತೆಯಾಟವನ್ನು ಆಡಿದ್ದರು. ಪರ್ತ್‌ನಲ್ಲಿ ದ್ವಿಶತಕದ ಜೊತೆಯಾಟವಾಡಿದ್ದ ಮೊದಲ ಭಾರತೀಯ ಜೋಡಿ ಎಂಬ ದಾಖಲೆಗೆ ಇವರು ಪಾತ್ರರಾಗಿದ್ದರು. ಕೆಎಲ್‌ ರಾಹುಲ್‌ ಈ ಹಿಂದೆ ಭಾರತ ಟೆಸ್ಟ್‌ ತಂಡದಲ್ಲಿ ಸಾಕಷ್ಟು ಬಾರಿ ಇನಿಂಗ್ಸ್‌ ಆರಂಭಿಸಿದ್ದಾರೆ. ಹಾಗಾಗಿ ಅವರನ್ನು ಕೂಡ ಓಪನಿಂಗ್‌ ಬ್ಯಾಟ್ಸ್‌ಮನ್‌ ಆಗಿ ಆಡಿಸಬಹುದು.