IND vs AUS: ಯಶಸ್ವಿ ಜೈಸ್ವಾಲ್ ಔಟ್, ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತದ ಬಲಿಷ್ಠ ಪ್ಲೇಯಿಂಗ್ XI
India's Strongest Playing XI: ಆಸ್ಟ್ರೇಲಿಯಾ ವಿರುದ್ದದ ವೈಟ್‌ಬಾಲ್ ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಏಕದಿನ ಸರಣಿ ಅಕ್ಟೊಬರ್ 19 ರಂದು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್ XI ಅನ್ನು ಇಲ್ಲಿ ವಿವರಿಸಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತಸ ಬಲಿಷ್ಠ ಪ್ಲೇಯಿಂಗ್ XI -

ನವದೆಹಲಿ: ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ (IND vs AUS) ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆ ಭಾರತ ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಅವರು ಮರಳಿದ್ದಾರೆ. ಆದರೆ, ಏಕದಿನ ತಂಡಕ್ಕೆ ಶುಭಮನ್ ಗಿಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಆ ಮೂಲಕ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸುವ ಮೂಲಕ ಬಿಸಿಸಿಐ ಅಚ್ಚರಿ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಹಿರಿಯ ಬ್ಯಾಟ್ಸ್‌ಮನ್ ಆಗಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದ್ದಾದೆ. ಮೊದಲನೇ ಏಕದಿನ ಪಂದ್ಯ ಅಕ್ಟೋಬರ್ 19 ರಂದು ನಡೆಯಲಿದೆ. ಈ ಪಂದ್ಯದ ಮೂಲಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಅಧಿಕೃತವಾಗಿ ಆರಂಭವಾಗಲಿದೆ.
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಳಿಕ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಈ ಇಬ್ಬರೂ ಟಿ20ಐ ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಇದೀಗ 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ. ಈ ಸರಣಿಯಲ್ಲಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಓಪನಿಂಗ್ ಬ್ಯಾಟ್ಸ್‌ಮನ್‌ಗಳಾಗಿ ಆಡಲಿದ್ದಾರೆ. ವಿರಾಟ್ ಕೊಹ್ಲಿ ಅವರು ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಆಡಿದರೆ, ಶ್ರೇಯಸ್ ಅಯ್ರ್ ಹಾಗೂ ಕೆಎಲ್ ರಾಹುಲ್ ಅವರು ಕ್ರಮವಾಗಿ 4 ಮತ್ತು 5ನೇ ಕ್ರಮಾಂಕಗಳಲ್ಲಿ ಆಡಲಿದ್ದಾರೆ.
IND vs AUS: ಆಸ್ಟ್ರೇಲಿಯಾ ವೈಟ್‌ಬಾಲ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಏಕದಿನ ತಂಡಕ್ಕೆ ಶುಭಮನ್ ಗಿಲ್ ನಾಯಕ!
ಗಾಯಾಳು ಹಾರ್ದಿಕ್ ಪಾಂಡ್ಯ ಬದಲು ಏಕದಿನ ತಂಡದಲ್ಲಿ ನಿತೀಶ್ ಕುಮಾರ್ ರೆಡ್ಡಿ ಸ್ಥಾನವನ್ನು ಪಡೆದಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದರ ಫಲವಾಗಿ ಅಕ್ಷರ್ ಪಟೇಲ್ ಅವರು ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಇನ್ನು ಮತ್ತೊರ್ವ ಸ್ಪಿನ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಏಕದಿನ ತಂಡದಿಂದ ಕೈ ಬಿಡಲಾಗಿದೆ. ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರು ಕ್ರಮವಾಗಿ 6 ಮತ್ತು 7ನೇ ಕ್ರಮಾಂಕಗಳಲ್ಲಿ ಆಡಲಿದ್ದಾರೆ.
ಏಕದಿನ ತಂಡದಲ್ಲಿ ವರುಣ್ ಚಕ್ರವರ್ತಿಗೆ ಸ್ಥಾನ ನೀಡಲಾಗಿಲ್ಲ. ಹಾಗಾಗಿ ಕುಲ್ದೀಪ್ ಯಾದವ್ ಅವರು ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಆಡಬಹುದು. ವೇಗದ ಬೌಲಿಂಗ್ ವಿಭಾಗವನ್ನು ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್ ಮುನ್ನಡೆಸಲಿದ್ದಾರೆ. ಪ್ರಸಿಧ್ ಕೃಷ್ಣ ಅವರ ಬದಲು ಹರ್ಷಿತ್ ರಾಣಾ ಮೂರನೇ ವೇಗಿಯಾಗಿ ಅವಕಾಶವನ್ನು ಪಡೆಯಬಹುದು. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅರ್ಷದೀಪ್ ಸಿಂಗ್ ಆಡಿದ್ದರು. ಆದರೆ, ಸಿರಾಜ್‌ಗೆ ಈ ಟೂರ್ನಿಯಲ್ಲಿ ಅವಕಾಶ ಸಿಕ್ಕಿರಲಿಲ್ಲ.
IND vs AUS: ರೋಹಿತ್ ಶರ್ಮಾರನ್ನು ಭಾರತ ಒಡಿಐ ನಾಯಕತ್ವದಿಂದ ತೆಗೆದಿದ್ದೇಕೆ? ಕಾರಣ ಇಲ್ಲಿದೆ!
ಆಸ್ಟ್ರೇಲಿಯಾ ಒಡಿಐ ಸರಣಿಗೆ ಭಾರತದ ಪ್ಲೇಯಿಂಗ್ XI
1.ಶುಭಮನ್ ಗಿಲ್(ನಾಯಕ, ಓಪನರ್)
2.ರೋಹಿತ್ ಶರ್ಮಾ (ಓಪನರ್)
3.ವಿರಾಟ್ ಕೊಹ್ಲಿ (ಬ್ಯಾಟ್ಸ್‌ಮನ್)
4.ಶ್ರೇಯಸ್ ಅಯ್ಯರ್ (ಬ್ಯಾಟ್ಸ್‌ಮನ್, ಉಪ ನಾಯಕ)
5.ಕೆಎಲ್ ರಾಹುಲ್ (ವಿಕೆಟ್ ಕೀಪರ್-ಬ್ಯಾಟ್ಸ್‌ಮನ್)
6.ಅಕ್ಷರ್ ಪಟೇಲ್ (ಸ್ಪಿನ್ ಆಲ್‌ರೌಂಡರ್)
7.ನಿತೀಶ್ ಕುಮಾರ್ ರೆಡ್ಡಿ (ಆಲ್‌ರೌಂಎಡರ್)
8.ಹರ್ಷಿತ್ ರಾಣಾ (ವೇಗದ ಬೌಲರ್)
9.ಕುಲ್ದೀಪ್ ಯಾದವ್ (ಸ್ಪಿನ್ನರ್)
10.ಮೊಹಮ್ಮದ್ ಸಿರಾಜ್ (ವೇಗದ ಬೌಲರ್)
11.ಅರ್ಷದೀಪ್ ಸಿಂಗ್ (ವೇಗದ ಬೌಲರ್)