ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್ (T20 World Cup 2026) ಟೂರ್ನಿಯ ಸೂಪರ್-8ರ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ (IND vs ZIM) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ನಾಯಕ ಸಿಕಂದರ್ ರಾಜಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಮ್ ಇಂಡಿಯಾ (India) ಮೊದಲು ಬ್ಯಾಟ್ ಮಾಡಲಿದೆ. ಟೂರ್ನಿಯ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ.
ಗುರುವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಜಾ, ತಾವು ಮೊದಲು ಬೌಲ್ ಮಾಡುತ್ತೇವೆಂದು ನಿರ್ಧರಿಸಿದರು. ಆ ಮೂಲಕ ಎದುರಾಳಿ ಭಾರತ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಅಂದ ಹಾಗೆ ಸೂಪರ್-8 ರ ಮೊದಲನೇ ಪಂದ್ಯದಲ್ಲಿ ಜಿಂಬಾಬ್ವೆ, ವೆಸ್ಟ್ ಇಂಡೀಸ್ ವಿರುದ್ಧ ಸೋಲು ಅನುಭವಿಸಿತ್ತು. ಇದೀಗ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ಭಾರತದ ಎದುರು ಗೆಲ್ಲಲೇಬೇಕಾಗಿದೆ. ಅಂದ ಹಾಗೆ ಪ್ರವಾಸಿ ತಂಡ ತನ್ನ ಪ್ಲೇಯಿಂಗ್ Xiನಲ್ಲಿ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ. ಟಿನೊಟೆಂಡಾ ಮಾಪೋಸಾ ಅವರು ಜಿಂಬಾಬ್ವೆ ಪ್ಲೇಯಿಂಗ್ XIಗೆ ಬಂದಿದ್ದಾರೆ.
IND vs ZIM: ʻಶಿವಂ ದುಬೆ ಆಲ್‌ರೌಂಡರ್ ಅಲ್ಲ, ಬ್ಯಾಟ್ಸ್‌ಮನ್ʼ-ಮೊಹಮ್ಮದ್ ಕೈಫ್ ಅಚ್ಚರಿ ಹೇಳಿಕೆ!
ಭಾರತ ತಂಡದಲ್ಲಿ ಎರಡು ಬದಲಾವಣೆ
ಇನ್ನು ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಎರಡು ಬದಲಾವಣೆಯನ್ನು ತರಲಾಗಿದೆ ಎಂದು ನಾಯಕ ಸೂರ್ಯಕುಮಾರ್ ಯಾದವ ಟಾಸ್ ವೇಳೆ ಬಹಿರಂಗಪಡಿಸಿದ್ದಾರೆ. ರಿಂಕು ಸಿಂಗ್ ಬದಲು ಸಂಜು ಸ್ಯಾಮ್ಸನ್ ಬಂದಿದ್ದರೆ, ವಾಷಿಂಗ್ಟನ್ ಸುಂದರ್ ಜಾಗಕ್ಕೆ ಉಪ ನಾಯಕ ಅಕ್ಷರ್ ಪಟೇಲ್ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ. ತನ್ನ ಮೊದಲನೇ ಪಂದ್ಯದಲ್ಲಿ ದಕ್ಷಿಣ ಆಫಿಕಾ ಎದುರು ಹೀನಾಯ ಸೋಲು ಅನುಭವಿಸಿದ್ದ ಭಾರತಕ್ಕೆ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ, ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ
ಜಿಂಬಾಬ್ವೆ: ತಡಿವಾನಾಶೆ ಮರುಮಾನಿ(ವಿಕೀ) ಬ್ರಿಯಾನ್ ಬೆನೆಟ್, ಡಿಯೋನ್ ಮೇಯರ್ಸ್, ರಿಯಾನ್ ಬರ್ಲ್, ಸಿಕಂದರ್ ರಾಜಾ (ನಾಯಕ), ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ರಾಡ್ ಇವಾನ್ಸ್, ಟಿನೊಟೆಂಡಾ ಮಾಪೋಸಾ, ಬ್ಲೆಸಿಂಗ್ ಮುಜರಾಬಾನಿ, ರಿಚರ್ಡ್ ಎನ್‌ಗರವಾ
ತಂಡಗಳು
ಭಾರತ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್
ಜಿಂಬಾಬ್ವೆ: ತಡಿವಾನಾಶೆ ಮರುಮಾನಿ(ವಿಕೀ) ಬ್ರಿಯಾನ್ ಬೆನೆಟ್, ಡಿಯೋನ್ ಮೇಯರ್ಸ್, ರಿಯಾನ್ ಬರ್ಲ್, ಸಿಕಂದರ್ ರಾಜಾ (ನಾಯಕ), ಟೋನಿ ಮುನ್ಯೊಂಗಾ, ತಶಿಂಗಾ ಮುಸೆಕಿವಾ, ಬ್ರಾಡ್ ಇವಾನ್ಸ್, ಟಿನೊಟೆಂಡಾ ಮಾಪೋಸಾ, ಬ್ಲೆಸಿಂಗ್ ಮುಜರಾಬಾನಿ, ರಿಚರ್ಡ್ ಎನ್‌ಗರವಾ, ಬೆನ್ ಕರನ್, ಕ್ಲೈವ್ ಮಡಾಂಡೆ, ವೆಲ್ಲಿಂಗ್ಟನ್ ಮಸಕಡ್ಜಾ, ಗ್ರೇಮ್ ಕ್ರೇಮರ್