IPL 2025: ಫೈನಲ್ ತಲುಪಬಲ್ಲ ಎರಡು ತಂಡಗಳನ್ನು ಆರಿಸಿದ ಆಕಾಶ್ ಚೋಪ್ರಾ!
Akash shopra on Top 2 Teams: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದೆ. ಇದೀಗ ನಾಲ್ಕು ತಂಡಗಳು ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿವೆ. ಇದರಲ್ಲಿ ಯಾವ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ ಎಂದು ಈಗಲೇ ಅಂದಾಜಿಸುವುದು ಕಷ್ಟ. ಆದರೆ, ಭಾರತ ಟೆಸ್ಟ್ ತಂಡದ ಮಾಜಿ ಆರಂಭಿಕ ಆಕಾಶ್ ಚೋಪ್ರಾ, ಫೈನಲ್‌ನಗೆ ತಲುಪಲಿರುವ ಎರಡು ತಂಡಗಳನ್ನು ಆರಿಸಿದ್ದಾರೆ.

ಫೈನಲ್ ತಲುಪಬಲ್ಲ ಎರಡು ತಂಡಗಳನ್ನು ಆರಿಸಿದ ಆಕಾಶ್ ಚೋಪ್ರಾ.

ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯು ನಿರ್ಣಾಯಕ ಹಂತವನ್ನು ತಲುಪಿದೆ. ಗುಜರಾತ್ ಟೈಟನ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಟೂರ್ನಿಯ ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿವೆ. ಈ ತಂಡಗಳ ಪೈಕಿ ಯಾವ ತಂಡಗಳು ಫೈನಲ್‌ಗೆ ಪ್ರವೇಶ ಮಾಡಲಿವೆ ಎಂದು ಈಗಲೇ ಅಂದಾಜಿಸುವುದು ಕಷ್ಟ. ಆದರೆ, ಭಾರತ ಟೆಸ್ಟ್ ತಂಡದ ಮಾಜಿ ಆರಂಭಿಕ ಆಕಾಶ್ ಚೋಪ್ರಾ (Aakash chopra), ಫೈನಲ್‌ಗೆ ಪ್ರವೇಶ ಮಾಡಬಲ್ಲ ಎರಡು ತಂಡಗಳನ್ನು ಆಯ್ಕೆ ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಫೈನಲ್‌ನಲ್ಲಿ ಕಾದಾಟ ನಡೆಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಸೋಮವಾರ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಣ ಕೊನೆಯ ಲೀಗ್ ಪಂದ್ಯದ ನಿಮಿತ್ತ ಮಾತನಾಡಿದ ಆಕಾಶ್ ಚೋಪ್ರಾ, ಈ ಸೀಸನ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಎರಡು ತಂಡಗಳನ್ನು ಫೈನಲ್‌ಗೆ ಆರಿಸಿದ್ದಾರೆ. ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್‌ನಲ್ಲಿ ಮುಖಾಮಖಿ ಕಾದಾಟ ನಡೆಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
IPL 2025: ಲಖನೌ ಎದುರು ಆರ್‌ಸಿಬಿ ಸೋತರೆ ಏನು ಕಥೆ? 4 ತಂಡಗಳ ಅಗ್ರ 2ರ ಲೆಕ್ಕಾಚಾರ!
"ಮುಂಬೈ ಇಂಡಿಯನ್ಸ್ ತಂಡವನ್ನು ಸಾಕಷ್ಟು ಅಂದಾಜಿಸಲಗುತ್ತಿದೆ. ಏಕೆಂದರೆ ಆ ತಂಡ ಉತ್ತಮವಾಗಿ ಕಾಣುತ್ತಿದೆ. ಅವರು ವೇಗವಾಗಿ ಚಲಿಸುತ್ತಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಅವರನ್ನು ನಿಲ್ಲಿಸುವುದು ಕಷ್ಟದ ಸಂಗತಿ. ನನಗೆ ಅನಿಸಿದ ಹಾಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಅಗ್ರ ಎರಡು ಸ್ಥಾನಗಳಲ್ಲಿ ಅಲಂಕರಿಸಲಿವೆ. ಅದರಂತೆ ಫೈನಲ್‌ನಲ್ಲಿಯೂ ಈ ಎರಡು ತಂಡಗಳು ಕಾಣಿಸಿಕೊಳ್ಳಲಿವೆ," ಎಂದು ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತನ್ನ ಆರಂಭಿಕ ಐದು ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಕೂಡ ಗೆದ್ದಿರಲಿಲ್ಲ. ತದ ನಂತರ ಅವರು ಸತತವಾಗಿ ಆರು ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿದೆ.
RCB vs LSG: ಲಖನೌ ಕದನಕ್ಕೆ ಆರ್‌ಸಿಬಿ ಪ್ಲೇಯಿಂಗ್‌ನಲ್ಲಿ 2 ಬದಲಾವಣೆ ಸಾಧ್ಯತೆ!
ಸೋಮವಾರ ಜೈಪುರದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಪಡೆದರೆ ಮುಂಬೈ ಇಂಡಿಯನ್ಸ್ ತಂಡ ಅಗ್ರ ಸ್ಥಾನವನ್ನು ಅಲಂಕರಿಸಬಹುದು. ಈ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕಠಿಣ ಹೋರಾಟ ನಡೆಸಲಿದೆ. ಹಾಗೆಯೇ ಫೈನಲ್‌ಗೆ ಪ್ರವೇಶ ಮಾಡಬಹುದು.
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಂಗಳವಾರ ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಗೆದ್ದರೆ ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಲಿದೆ. ಪಾಯಿಂಟ್ಸ್ ಟೇಬಲ್‌ನಲ್ಲಿ ಯಾವ ಎರಡು ತಂಡಗಳು ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಲಿವೆ, ಆ ತಂಡಗಳು ಮೇ 29 ರಂದು ಚಂಡೀಗಢ ಮಹಾರಾಜ ಯದವೀಂದ್ರ ಸಿಂಗ್ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ಮೊದಲನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸಲಿವೆ.