ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರೋಹಿತ್‌ ಶರ್ಮಾರ ಏಕದಿನ ವಿಶ್ವಕಪ್‌ ಟೂರ್ನಿಯ ಭವಿಷ್ಯವನ್ನು ನುಡಿದ ಇರ್ಫಾನ್‌ ಪಠಾಣ್‌!

ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರು ಆಡಬೇಕೆಂದು ಭಾರತದ ಮಾಜಿ ಆಲ್‌ರೌಂಡರ್‌ ಇರ್ಫಾನ್‌ ಪಠಾಣ್‌ ಆಗ್ರಹಿಸಿದ್ದಾರೆ. ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಗೇಮ್‌ ಟೈಮ್‌ ಕೊರತೆ ಇದ್ದರೂ ಅವರಿಗೆ ಏಕದಿನ ವಿಶ್ವಕಪ್‌ನಲ್ಲಿಆಡಲು ಅವಕಾಶ ಮಾಡಿಕೊಡಬೇಕೆಂದಿದ್ದಾರೆ.

ರೋಹಿತ್‌ ಶರ್ಮಾರ ಏಕದಿನ ವಿಶ್ವಕಪ್‌ ಭವಿಷ್ಯ ನುಡಿದ ಪಠಾಣ್‌!

ರೋಹಿತ್‌-ಕೊಹ್ಲಿಯ ಏಕದಿನ ವಿಶ್ವಕಪ್‌ ಭವಿಷ್ಯ ನುಡಿದ ಇರ್ಫಾನ್‌ ಪಠಾಣ್‌. -

Profile Ramesh Kote Sep 2, 2025 9:32 PM

ನವದೆಹಲಿ: ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ಭಾರತ ಏಕದಿನ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma) ಹಾಗೂ ವಿರಾಟ್‌ ಕೊಹ್ಲಿ (Virat Kohli) ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿದಿದ್ದಾರೆ. ಈ ಇಬ್ಬರೂ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡದ ಪರ ಆಡಲು ಎದುರು ನೋಡುತ್ತಿದ್ದಾರೆ. ಅಲ್ಲಿಯ ತನಕ ಇನ್ನೂ ಎರಡು ವರ್ಷಗಳು ಬಾಕಿ ಇವೆ. ಅಲ್ಲಿಯ ತನಕ ಅವರು ತಮ್ಮ ಫಿಟ್‌ನೆಸ್‌ ಕಾಯ್ದುಕೊಳ್ಳಲಿದ್ದಾರೆಯೇ ಎಂಬುದು ಪ್ರಶ್ನೆಯಾಗಿದೆ. ಆದರೆ, ಭಾರತ ತಂಡದ ಮಾಜಿ ಆಲ್‌ರೌಂಡರ್‌ ಇರ್ಫಾನ್‌ ಪಠಾಣ್‌ (Irfan Pathan) ಅವರು, ಈ ಇಬ್ಬರಿಗೂ ಗೇಮ್‌ ಟೈಮ್‌ ಇಲ್ಲದ ಹೊರತಾಗಿಯೂ ಅವರು 50 ಓವರ್‌ಗಳ ಏಕದಿನ ವಿಶ್ವಕಪ್‌ ಆಡಬೇಕೆಂದು ಆಗ್ರಹಿಸಿದ್ದಾರೆ.

2024ರ ಐಸಿಸಿ ಟ20 ವಿಶ್ವಕಪ್‌ ಟೂರ್ನಿಯನ್ನು ಗೆದ್ದ ಬಳಿಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಐ ಹೇಳಿದ್ದರು. ನಂತರ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ವೇಳೆ ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ನಿವೃತ್ತಿ ಘೋಷಿಸಿದ್ದರು. ಇದೀಗ ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಎದುರು ನೋಡುತ್ತಿದ್ದಾರೆ.

ಮುಂದಿನ 10 ವರ್ಷಗಳ ಕಾಲ ರೋಹಿತ್‌ ಶರ್ಮಾ ಐಪಿಎಲ್‌ ಆಡಬೇಕೆಂದ ಖಲೀಲ್‌ ಅಹ್ಮದ್‌!

ಸೋನಿ ಸ್ಪೋರ್ಟ್ಸ್‌ ಜೊತೆ ಮಾತನಾಡಿದ ಇರ್ಫಾನ್‌ ಪಠಾಣ್‌, "ರೋಹಿತ್‌ ಶರ್ಮಾ ಜತೆ ಅವರ ಭವಿಷ್ಯದ ಬಗ್ಗೆ ದೀರ್ಘಾವಧಿ ಸಂಭಾಷಣೆಯನ್ನು ನಡೆಸಿದ್ದೇನೆ. ಅವರು ಕ್ರಿಕೆಟ್‌ ಅನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ. ಅತ್ಯುತ್ತಮ ಸಾಧನೆ ಮಾಡಿದ ರೋಹಿತ್‌ ಶರ್ಮಾ ಅವರಂತೆಯೇ ಪ್ರತಿಯೊಬ್ಬ ಆಟಗಾರ ಕೂಡ ಇದನ್ನೇ ಹೊಂದಿದ್ದಾರೆ. ಅವರು ವೈಟ್‌ಬಾಲ್‌ ಕ್ರಿಕೆಟ್‌ನಲ್ಲಿ ಅದ್ಭುತ ಆಟಗಾರ. ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. 2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದ ಸೋಲಿನ ಬಳಿಕ ಅವರ ಹೃದಯ ಒಡೆದಿರುವುದನ್ನು ನಾವು ನೋಡಿದ್ದೇವೆ. ಇದು ಭಾವನೆಗಳ ವಿಷಯ. ಅವರು ಇನ್ನೂ ರಾಷ್ಟ್ರೀಯ ತಂಡಕ್ಕೆ ಏಕದಿನ ವಿಶ್ವಕಪ್‌ ಗೆದ್ದುಕೊಡುವ ಉದ್ದೇಶವನ್ನು ಹೊಂದಿದ್ದಾರೆ," ಎಂದು ಹೇಳಿದ್ದಾರೆ.

ವಿರಾಟ್‌ ಕೊಹ್ಲಿಯನ್ನು ಕೈ ಬಿಟ್ಟು ಟಾಪ್‌ 5 ಕ್ರಿಕೆಟಿಗರನ್ನು ಆರಿಸಿದ ಎಬಿ ಡಿ ವಿಲಿಯರ್ಸ್‌!

"ಒಬ್ಬ ಆಟಗಾರ ಸಂಪೂರ್ಣವಾಗಿ ಫಿಟ್‌ ಇದ್ದರೆ, ಅವರಿಗೆ ವಯಸ್ಸು ಮುಖ್ಯವಾಗುವುದಿಲ್ಲ. ನಿಜವಾದ ಸವಾಲು ಎಂದರೆ, 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೂ ಮುನ್ನ ಸಾಕಾಗುವಷ್ಟು ಗೇಮ್‌ ಟೈಮ್‌ ಸಿಗುವುದಾಗಿದೆ. ಏಕದಿನ ವಿಶ್ವಕಪ್‌ ಟೂರ್ನಿಗೆ ದೊಡ್ಡ ಅಂತರವಿದೆ. 2025ರ ವರ್ಷ ನಡೆಯುತ್ತಿದೆ, ಇನ್ನೂ 2026 ವರ್ಷವಿದೆ, ಇದಾದ ಬಳಿಕ 2027 ವರ್ಷ. ಭಾರತ ತಂಡಕ್ಕೆ ಆಡುವುದು ಪ್ರೇರಣೆ ಅಲ್ಲವೇ ಅಲ್ಲ, ಅದರಲ್ಲಿಯೂ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಹಾಗೂ ಮೊಹಮ್ಮದ್‌ ಶಮಿಗೆ. ಇವರಿಗೆ ಯಾವಾಗಲೂ ಇದ್ದೇ ಇರುತ್ತದೆ. ಟಿ20ಐ ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಅವರಿಗೆ ಎಷ್ಟರ ಪ್ರಮಾಣದಲ್ಲಿ ಗೇಮ್‌ ಟೈಮ್‌ ಸಿಗಲಿದೆ ಎಂಬುದು ಇಲ್ಲಿನ ಪ್ರಶ್ನೆಯಾಗಿದೆ. ಅವರಿಗೆ ಅಗತ್ಯ ಗೇಮ್‌ ಟೈಮ್‌ ಸಿಕ್ಕಿ, ಅಲ್ಲಿಯ ತನಕ ಸಂಪೂರ್ಣ ಫಿಟ್‌ ಇದ್ದರೆ, 2027 ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಅವರು ಆಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ," ಎಂದು ಇರ್ಫಾನ್‌ ಪಠಾಣ್‌ ತಿಳಿಸಿದ್ದಾರೆ.