Mohammed shami Test Retirement: ಟೆಸ್ಟ್ ಕ್ರಿಕೆಟ್ಗೆ ಹಠಾತ್ ವಿದಾಯ ಹೇಳಿ ಶಾಕ್ ನೀಡಿದ ಮೊಹಮ್ಮದ್ ಶಮಿ!
ಭಾರತೀಯ ಕ್ರಿಕೆಟ್ನ ಹಿರಿಯ ವೇಗಿ ಮೊಹಮ್ಮದ್ ಶಮಿ ಅವರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ನವೆಂಬರ್ 6 ರಂದು ರಾತ್ರಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಡಿಯೊ ಅಪ್ಲೋಡ್ ಮಾಡುವ ಮೂಲಕ ಬಲಗೈ ವೇಗದ ಬೌಲರ್ ನಿವೃತ್ತಿ ನಿರ್ಧಾರವನ್ನು ಘೋಷಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಮೊಹಮ್ಮದ್ ಶಮಿ. -
ನವದೆಹಲಿ: ಭಾರತೀಯ ಕ್ರಿಕೆಟ್ನ ಹಿರಿಯ ವೇಗಿ ಮೊಹಮ್ಮದ್ ಶಮಿ (Mohammed Shami) ಅವರು ಟೆಸ್ಟ್ ಕ್ರಿಕೆಟ್ಗೆ ಹಠಾತ್ ವಿದಾಯ ಹೇಳಿದ್ದಾರೆ. ನವೆಂಬರ್ 6 ರಂದು ರಾತ್ರಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಅಪ್ಲೋಡ್ ಮಾಡಿದ ವಿಡಿಯೊದಲ್ಲಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಆ ಮೂಲಕ 13 ವರ್ಷಗಳ ರೆಡ್ ಬಾಲ್ ಕ್ರಿಕೆಟ್ಗೆ ಬಲಗೈ ವೇಗಿ ಪೂರ್ಣ ವಿರಾಮವನ್ನು ಇಟ್ಟಿದ್ದಾರೆ. ಇದರೊಂದಿಗೆ ಸಹ ಆಟಗಾರರು ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವ ಕುರಿತು ಶಮಿ ತಮ್ಮ ಸಂದೇಶದಲ್ಲಿ, "ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದಕ್ಕೆ ಸಂಬಂಧಿಸಿದ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ. ಮೊದಲ ಬಾರಿ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ದೇಶಕ್ಕಾಗಿ ಏನಾದರೂ ಸಾಧಿಸಬೇಕೆಂಬ ಕನಸಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಹೋರಾಟ, ಗಾಯ ಮತ್ತು ಪುನರಾಗಮನ ನನಗೆ ಒಂದೊಂದು ಪಾಠ ಕಲಿಸಿದೆ," ಎಂದು ಬರೆದುಕೊಂಡಿದ್ದಾರೆ.
IND vs NZ 2nd ODI: ತಂಡಗಳ ಸಂಭಾವ್ಯ ಪ್ಲೇಯಿಂಗ್ XI, ಪಿಚ್ ರಿಪೋರ್ಟ್, ಮುಖಾಮುಖಿ ದಾಖಲೆ ವಿವರ!
"ಟೆಸ್ಟ್ ಕ್ರಿಕೆಟ್ ನನಗೆ ಕೇವಲ ಒಂದು ಮಾದರಿಯ ಆಟವಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯದಿಂದ ಹಾಗೂ ಅನೇಕ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಈ ಪಯಣದಲ್ಲಿ ಬೆಂಬಲ ನೀಡಿದ ಸಹ ಆಟಗಾರರು, ತರಬೇತುದಾರರು, ಕುಟುಂಬದವರು ಹಾಗೂ ಕೋಟ್ಯಂತರ ಭಾರತೀಯ ಅಭಿಮಾನಿಗಳಿಗೆ ಧನ್ಯವಾದಗಳು," ಎಂದು ಅವರು ತಿಳಿಸಿದ್ದಾರೆ.
ಅಲ್ಲದೆ, ತಮ್ಮ ಪ್ರತಿಭೆಯನ್ನು ನಂಬಿ ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
Safed jersey se vida le raha hoon, lekin usse judi yaadon se kabhi nahi… 🇮🇳❤️ Jab pehli baar Bharat ki Test jersey pehni thi, tab sirf ek sapna tha — apne desh ke liye kuch kar dikhane ka.. Uske baad har wicket, har sangharsh, har chot aur har comeback ne mujhe kuch na kuch sikhaya. Test cricket mere liye sirf ek format nahi, meri zindagi ka ek behad khaas hissa raha hai. Aaj bhaari dil aur anginat khoobsurat yaadon ke saath main Test cricket se retirement lene ka faisla kar raha hoon. Is safar mein mera saath dene wale har teammate, coach, family aur un karodon Bharatiyon ka dil se shukriya, jinhone achhe aur mushkil dono waqt mein mujh par bharosa banaye rakha.. BCCI aur Cricket Association of Bengal (CAB) ka bhi dil se shukriya, jinhone mere talent par bharosa kiya, mujhe aage badhne ke mauke diye aur mere cricket ke safar mein ek aham bhoomika nibhayi. Aapka saath aur vishwas mere liye hamesha khaas rahega. Maidan par meri aakhri Test ball bhale hi fenki ja chuki ho, lekin Bharat ke liye khelne ka garv hamesha mere dil mein zinda rahega. Shukriya, Test Cricket. ❤️ Aapka Shami 🇮🇳 #Mdshami11 #Mdshami #TestCricket #Retirement
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) November 6, 2026
ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ ದಾಖಲೆ
ಮೊಹಮ್ಮದ್ ಶಮಿ 2013ರ ನವೆಂಬರ್ನಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಚೊಚ್ಚಲ ಪಂದ್ಯದಲ್ಲೇ ಒಂಬತ್ತು ವಿಕೆಟ್ಗಳನ್ನು ಪಡೆದು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಒಟ್ಟು 64 ಪಂದ್ಯಗಳನ್ನಾಡಿರುವ ಶಮಿ 229 ವಿಕೆಟ್ಗಳನ್ನು ಕಬಳಿಸಿದ್ದಾರೆ. 27.71ರ ಬೌಲಿಂಗ್ ಸರಾಸರಿ ಹೊಂದಿರುವ ಅವರು ಆರು ಬಾರಿ ಇನಿಂಗ್ಸ್ನಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. 56 ರನ್ ನೀಡಿ ಆರು ವಿಕೆಟ್ ಪಡೆದಿರುವುದು ಅವರ ಅತ್ಯುತ್ತಮ ಬೌಲಿಂಗ್ ಸ್ಪೆಲ್ ಆಗಿದೆ.
2023ರಲ್ಲೇ ಕೊನೆಯ ಟೆಸ್ಟ್ ಪಂದ್ಯ
ಶಮಿ ಕೊನೆಯ ಬಾರಿ 2023ರ ಜೂನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಲಂಡನ್ನ ಓವಲ್ ಮೈದಾನದಲ್ಲಿ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆ ಬಳಿಕ ಅವರು ಯಾವುದೇ ಟೆಸ್ಟ್ ಪಂದ್ಯವನ್ನಾಡಿರಲಿಲ್ಲ.
ಇತ್ತೀಚಿನ ವರ್ಷಗಳಲ್ಲಿ ಗಾಯದ ಸಮಸ್ಯೆಗಳು ಮತ್ತು ತಂಡದ ಆಯ್ಕೆಯಿಂದಾಗಿ ಅವರಿಗೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ನ್ಯೂಜಿಲೆಂಡ್ ಪ್ರವಾಸದ ಟೆಸ್ಟ್ ತಂಡದಲ್ಲೂ ಶಮಿಗೆ ಸ್ಥಾನ ನೀಡಲಾಗಿರಲಿಲ್ಲ. ಆದರೂ ದೇಶಿ ಕ್ರಿಕೆಟ್ನಲ್ಲಿ ಬಂಗಾಳ ಪರ ರಣಜಿ ಟ್ರೋಫಿ ಸೇರಿದಂತೆ ಹಲವು ಪಂದ್ಯಗಳಲ್ಲಿ ಆಡುತ್ತಿದ್ದರು.