Thursday, 19th September 2024

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ನವದೆಹಲಿ : ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

‘ವರ್ಷಗಳಿಂದ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾನು ನನ್ನ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ’ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

1999ರಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ, ತಮ್ಮ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.