Monday, 16th September 2024

ಮಾಜಿ ಕ್ರಿಕೆಟಿಗ ಯಶ್’ಪಾಲ್ ಶರ್ಮಾ ಇನ್ನಿಲ್ಲ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಯಶ್ ಪಾಲ್ ಶರ್ಮಾ(66) ಅವರು, ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು.

1983ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಈ ಸಂದರ್ಭದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಯಲ್ಲಿ ಭಾರತ ಗೆಲುವನ್ನು ಸಾಧಿಸಿತ್ತು. 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್‌ ಪಂದ್ಯ ಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. 42 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 883 ರನ್‌ ಕಲೆಹಾಕಿದ್ದಾರೆ.

1979ರ ವಿಶ್ವಕಪ್ ತಂಡದಲ್ಲಿದ್ದರೂ ಆ ವಿಶ್ವಕಪ್ ನಲ್ಲಿ ಯಶಪಾಲ್ ಶರ್ಮಾಗೆ ಆಡುವ ಅವಕಾಶ ದೊರೆತಿರಲಿಲ್ಲ. ಆದರೆ ನಂತರ ನಡೆದ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದ ಯಶಪಾಲ್ ಶರ್ಮಾ, ಆ ಸರಣಿಯಲ್ಲಿ 58.93ರ ಸರಾಸರಿಯಲ್ಲಿ 884 ರನ್ ಗಳಿಸಿದ್ದರು.

1983ರ ವಿಶ್ವಕಪ್ ನಲ್ಲಿ ಯಶಪಾಲ್ ಭಾರತ ತಂಡದ ಪ್ರಮುಖ ಆಟಗಾರನಾಗಿದ್ದರು. ಕೂಟದಲ್ಲಿ 34.28ರ ಸರಾಸರಿಯಲ್ಲಿ 240 ರನ್ ಗಳಿಸಿದ್ದ ಯಶಪಾಲ್ ಭಾರತದ ಪರ ಅತೀ ಹೆಚ್ಚು ರನ್ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದದ್ದರು.

1983ರ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಯಶಪಾಲ್ 89 ರನ್ ಗಳಿಸಿ ಭಾರತದ ವಿಜಯಕ್ಕೆ ನೆರವಾಗಿದ್ದರು. ಸೆಮಿಫೈನಲ್ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ 61 ರನ್ ಗಳಿಸಿದ್ದರು.

Leave a Reply

Your email address will not be published. Required fields are marked *