Sunday, 15th December 2024

ಪಾಂಡ್ಯ ಸಹೋದರರ ತಂದೆ ಹಿಮಾಂಶು ಪಾಂಡ್ಯ ನಿಧನ

ಮುಂಬೈ: ಟೀಮ್ ಇಂಡಿಯಾದ ಆಲ್‌ ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ನಿಧನರಾಗಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಆಡುತ್ತಿದ್ದ ಕೃನಾಲ್ ಬಯೋಬಬಲ್ ಅನ್ನು ತೊರೆದಿದ್ದಾರೆ.

ತಂದೆ ಕೊನೆಯುಸಿರೆಳೆದಿರುವುದರಿಂದಾಗಿ ಬರೋಡಾ ತಂಡದ ನಾಯಕ ಹಾರ್ದಿಕ್ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಬಯೋಬಬಲ್ ತೊರೆದು ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಟ್ರೋಫಿ ಇನ್ನುಳಿದ ಪಂದ್ಯಗಳಲ್ಲಿ ಕೃನಾಲ್ ಆಡುತ್ತಿಲ್ಲ.

ಹಾರ್ದಿಕ್ ಮತ್ತು ಕೃನಾಲ್ ನಷ್ಟಕ್ಕೆ ಬರೋಡಾ ಕ್ರಿಕೆಟ್ ಅಸೋಸಿಯೇಶನ್ (ಬಿಸಿಎ) ಮರುಗುತ್ತದೆ,’ ಎಂದು ಬರೋಡಾ ಕ್ರಿಕೆಟ್ ಅಸೋಸಿಯೇಶನ್‌ನ ಸಿಇಒ ಶಿಶಿರ್ ಹತ್ತಾಂಗಡಿ ಹೇಳಿದ್ದಾರೆ.