ಮುಂಬೈ: ಐಪಿಎಲ್ನ ಎರಡನೇ ಪಂದ್ಯದಲ್ಲಿ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಯಾನ ಆರಂಭಿಸಲಿದ್ದು, ಡೆಲ್ಲಿ ತಂಡವನ್ನು ಮೊದಲ ಬಾರಿ ವಿಕೆಟ್ ಕೀಪರ್ ರಿಷಭ್ ಪಂತ್ ನಾಯಕರಾಗಿ ಮುನ್ನಡೆಸಲಿದ್ದಾರೆ.
2008ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನಾ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ ಏಕೈಕ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ. 2021ರಲ್ಲಿ ಇನ್ನಿಬ್ಬರು ವಿಕೆಟ್ ಕೀಪರ್ಗಳು ಬೇರೆ ಬೇರೆ ತಂಡಗಳ ನಾಯಕತ್ವ ವಹಿಸಿಕೊಂಡಿ ದ್ದಾರೆ. ಅವರು ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್.
ಭಾರತ ತಂಡದಲ್ಲಿ ಪಂತ್ ಮಿಂಚುತ್ತಿದ್ದಾರೆ. ಶ್ರೇಯಸ್ ಅಯ್ಯರ್ ಅವರ ಅನುಪಸ್ಥಿತಿಯಲ್ಲಿ ಪಂತ್ ಡೆಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಬಾರಿ ಏನನ್ನೂ ಸಾಧಿಸಲಿಲ್ಲ. 6 ಪಂದ್ಯಗಳಲ್ಲಿ ಗೆಲುವು ದಾಖಲಿಸಿ 12 ಪಾಯಿಂಟ್ಸ್ ಗಳೊಂದಿಗೆ 7ನೇ ಸ್ಥಾನ ಗಳಿಸಿತ್ತು. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಮತ್ತೊಮ್ಮೆ ಸವಾಲು ಎದುರಾಗಿದೆ. ಯುಎಇಯಲ್ಲಿ ತಂಡದಿಂದ ದೂರವಿದ್ದ ಸುರೇಶ್ ರೈನಾ ಮರಳಿದ್ದಾರೆ. ರಾಬಿನ್ ಉತ್ತಪ್ಪ ಸೇರ್ಪಡೆ ಚೆನ್ನೈ ತಂಡದ ಬ್ಯಾಟಿಂಗ್ ವಿಭಾಗವನ್ನು ಬಲಿಷ್ಠಗೊಳಿಸಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ