Saturday, 14th December 2024

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೂ ಡೇವಿಡ್ ವಾರ್ನರ್ ಅಲಭ್ಯ

ಮೆಲ್ಬೋರ್ನ್: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಡಿ.26ರಂದು ಪ್ರವಾಸಿ ಭಾರತ ವಿರುದ್ಧ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಿಂದಲೂ ಆಸ್ಟ್ರೇಲಿಯಾದ ಎಡಗೈ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೊರಗುಳಿಯ ಲಿದ್ದಾರೆ. ಇದು ಆತಿಥೇಯರಿಗೆ ಆಘಾತ ನೀಡಿದೆ.

ಭಾರತ ವಿರುದ್ಧ ನಡೆದ ಏಕದಿನ ಸರಣಿ ವೇಳೆಯಲ್ಲಿ ಡೇವಿಡ್ ವಾರ್ನರ್ ತೊಡೆ ಸಂದು ಗಾಯಕ್ಕೊಳಗಾಗಿದ್ದರು. ಇದರಿಂದಾಗಿ, ಅಡಿಲೇಡ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲೂ ಆಡಿರಲಿಲ್ಲ.

ದ್ವಿತೀಯ ಟೆಸ್ಟ್ ಪಂದ್ಯಕ್ಕೂ ವಾರ್ನರ್ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಕಂಡುಬರುವ ಸಾಧ್ಯತೆಯಿಲ್ಲ. ಜೋ ಬರ್ನ್ಸ್ ಹಾಗೂ ಮ್ಯಾಥ್ಯೂ ವೇಡ್ ಆರಂಭಿಕರಾಗಿ ಮುಂದುವರಿ ಯಲಿದ್ದಾರೆ.