ನವದೆಹಲಿ: ಟಿ20 ವಿಶ್ವಕಪ್ನಿಂದ ಹೊರಬಿದ್ದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಸ್ಪೋಟಕ ಬ್ಯಾಟ್ಸ್ಮನ್ ಡೇವಿಡ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಜೂ.25ರಂದು ಭಾರತದ ವಿರುದ್ಧ ನಡೆದ ಸೂಪರ್ ಹಣಾಹಣಿಯಲ್ಲಿ ಆಸ್ಟ್ರೇಲಿಯಾ 24 ರನ್ಗಳ ಸೋಲನ್ನು ಅನುಭವಿಸಿತ್ತು. ಈ ಸೋಲಿನೊಂದಿಗೆ ಡೇವಿಡ್ ವಾರ್ನರ್ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.
9ನೇ ಆವೃತ್ತಿಯ ಟಿ20 ವಿಶ್ವಕಪ್ ಆರಂಭವಾಗುವುದಕ್ಕೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಬಗ್ಗೆ ಮಾತನಾಡಿದ್ದರು. ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳಿದ್ದಾರೆ.
ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ ಒಂದು ಶತಕ, 28 ಅರ್ಧಶತಕ ಒಳಗೊಂಡಂತೆ 3277 ರನ್ ಸಿಡಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ 161 ಪಂದ್ಯಗಳನ್ನು ಆಡಿರುವ ವಾರ್ನರ್ 33 ಅರ್ಧಶತಕ, 22 ಶತಕ ಒಳಗೊಂಡಂತೆ 6932 ರನ್ ಕಲೆಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ಪರ 112 ಪಂದ್ಯಗಳನ್ನು ಆಡಿರುವ ವಾರ್ನರ್ 26 ಶತಕ, 37 ಅರ್ಧಶತಕ ಒಳಗೊಂಡಂತೆ 8786 ರನ್ ಕಲೆಹಾಕಿದ್ದಾರೆ.