Sunday, 15th December 2024

ಡೆಲ್ಲಿ ಕ್ಯಾಪಿಟಲ್ಸ್- ಪಂಜಾಬ್ ಕಿಂಗ್ಸ್ ಪಂದ್ಯ ಸ್ಥಳಾಂತರ

ನವದೆಹಲಿ: ಕರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರದ ಇಂಡಿಯನ್ ಪ್ರೀಮಿಯರ್ ಲೀಗ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನ ಮುಂಬೈಗೆ ಸ್ಥಳಾಂತರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.

ವೇಳಾಪಟ್ಟಿಯ ಪ್ರಕಾರ, ಪಂದ್ಯವು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ ದಲ್ಲಿ ನಡೆಯಬೇಕಿತ್ತು. ಆದರೆ, ಪ್ರಸ್ತುತ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

ಫ್ರಾಂಚೈಸಿಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ, ಮುಂಬೈನಲ್ಲಿ ಪಂದ್ಯವನ್ನು ಆಯೋಜಿಸುವುದು ಉತ್ತಮ ಎಂದು ನಿರ್ಧರಿಸ ಲಾಗಿದೆ ಎಂದು ಬಿಸಿಸಿಐ ಅಧಿಕಾರಿಗಳು ಖಚಿತಪಡಿಸಿದ್ದಾರೆ.