ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mukesh Kumar Fined: ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮುಖೇಶ್ ಕುಮಾರ್‌ಗೆ ದಂಡ ವಿಧಿಸಿದ ಬಿಸಿಸಿಐ

ಮುಖೇಶ್, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ಅನ್ನು ಉಲ್ಲಂಘಿಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. 'ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿರುವುದಾಗಿ ಮುಖೇಶ್ ಕುಮಾರ್ ಒಪ್ಪಿಕೊಂಡಿದ್ದಾರೆ ಮತ್ತು ಮ್ಯಾಚ್ ರೆಫ್ರಿಯ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ' ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮುಖೇಶ್ ಕುಮಾರ್‌ಗೆ ದಂಡ ವಿಧಿಸಿದ ಬಿಸಿಸಿಐ

Profile Abhilash BC May 22, 2025 3:43 PM

ಮುಂಬಯಿ: ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು(IPL Code of Conduct) ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮುಖೇಶ್ ಕುಮಾರ್(Mukesh Kumar Fined) ಅವರಿಗೆ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಅಂಕ ನೀಡಲಾಗಿದೆ.

ಮುಖೇಶ್, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ಅನ್ನು ಉಲ್ಲಂಘಿಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. 'ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಮಾಡಿರುವುದಾಗಿ ಮುಖೇಶ್ ಕುಮಾರ್ ಒಪ್ಪಿಕೊಂಡಿದ್ದಾರೆ ಮತ್ತು ಮ್ಯಾಚ್ ರೆಫ್ರಿಯ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ' ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಪಂದ್ಯದಲ್ಲಿ ಮೊದಲ ಮೂರು ಓವರ್‌ಗಳನ್ನು ಉತ್ತಮ ರೀತಿಯಲ್ಲಿ ಮಾಡಿದ್ದ ಮುಖೇಶ್‌, ವಿಲ್ ಜಾಕ್ಸ್ ಮತ್ತು ತಿಲಕ್ ವರ್ಮಾ ಅವರ ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ ತಮ್ಮ ಕೊನೆಯ ಓವರ್‌ನಲ್ಲಿ 27 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ದುಬಾರಿಯಾದರು.



ಪಂದ್ಯದ ಬಗ್ಗೆ ಹೇಳುವುದಾದರೆ, ಮೊದಲು ಬ್ಯಾಟಿಂಗ್‌ ನಡೆಸಿದ ಮುಂಬೈ ತಂಡ ಸೂರ್ಯಕುಮಾರ್‌ ಯಾದವ್‌ ಅವರ ಬಿರುಸಿನ ಆಟದಿಂದಾಗಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟಿಗೆ 180 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿ ಆರಂಭದಲ್ಲೇ ಸತತ ವಿಕೆಟ್‌ ಕಳೆದುಕೊಂಡು 18.2 ಓವರ್‌ಗಳಲ್ಲಿ 121 ರನ್‌ಗೆ ಸರ್ವಪತನ ಕಂಡಿತು. ಡೆಲ್ಲಿ ಸಮೀರ್‌ ರಿಜ್ವಿ ಗರಿಷ್ಠ 39 ರನ್‌ ಹೊಡೆದರು. ಉಳಿದವರು ಅಗ್ಗಕ್ಕೆ ವಿಕೆಟ್‌ ಕೈಚೆಲ್ಲಿ ತಂಡದ ಸೋಲಿಗೆ ಕಾರಣರಾದರು. ಮುಂಬೈ ಪರ ಘಾತಕ ಬೌಲಿಂಗ್‌ ದಾಳಿ ನಡೆಸಿದ ಜಸ್‌ಪ್ರೀತ್‌ ಬುಮ್ರಾ ಮತ್ತು ಮಿಚೆಲ್‌ ಸ್ಯಾಂಟ್ನರ್‌ ತಲಾ 3 ವಿಕೆಟ್‌ ಕಿತ್ತು ಮಿಂಚಿದರು.