ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL 2026: ಅಭ್ಯಾಸದ ವೇಳೆ ಮುಖಕ್ಕೆ ಚೆಂಡು ಬಡಿದು ಗಂಭೀರ ಗಾಯಗೊಂಡ ಡೆಲ್ಲಿ ಕ್ಯಾಪಿಟಲ್ಸ್‌ ನೆಟ್‌ ಬೌಲರ್‌

Delhi Capitals' net bowler suffers facial blow: ಐಪಿಎಲ್ ಪಾಯಿಂಟ್ ಪಟ್ಟಿಯಲ್ಲಿ ಪ್ರಸ್ತುತ ಆರನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ , ಇಂದಿನ ಹಗಲು ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಪಂಜಾಬ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಅಜೇಯವಾಗಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Delhi Capitals nets bowler injured

ನವದೆಹಲಿ, ಎ.26: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು(ಶನಿವಾರ) ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್‌ ಕಿಂಗ್ಸ್‌ ವಿರುದ್ಧ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕೆ ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ತಂಡದ ನೆಟ್ ಬೌಲರ್ ಮುಖಕ್ಕೆ ಚೆಂಡು ಬಡಿದು ಭೀಕರವಾಗಿ ಗಾಯಗೊಂಡರು. ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಮೈದಾನಕ್ಕೆ ಆಂಬ್ಯುಲೆನ್ಸ್‌ ಕರೆಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಗಾಯಗೊಂಡಿರುವ ನೆಟ್ ಬೌಲರ್‌ ಯಾರೆಂಬ ಮಾಹಿತಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದುವರೆಗೂ ತಿಳಿಸಿಲ್ಲ.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ನೆಟ್ ಬೌಲರ್‌ ತಲೆಗೆ ಚೆಂಡು ಬಲವಾಗಿ ಬಡಿದು ರಕ್ತಸ್ರಾವ ಆಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹತ್ತಿಯಿಂದ ರಕ್ತವನ್ನು ಒರೆಸುತ್ತಿರುವುದನ್ನು ಕಾಣಬಹುದು. ವೈದ್ಯಕೀಯ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದಿರುವ ಕಾರಣ, ಆಂಬ್ಯುಲೆನ್ಸ್ ಅನ್ನು ನೇರವಾಗಿ ಕ್ರೀಡಾಂಗಣಕ್ಕೆ ಕರೆಸಿಕೊಂಡು ಆಟಗಾರನನ್ನು ಸ್ಟೆಚ‌ರ್ ಮೇಲೆ ಇರಿಸಿ, ಆಸ್ಪತ್ರೆಗೆ ರವಾನಿಸಲಾಗಿದೆ.



ಐಪಿಎಲ್ ಪಾಯಿಂಟ್ ಪಟ್ಟಿಯಲ್ಲಿ ಪ್ರಸ್ತುತ ಆರನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ , ಇಂದಿನ ಹಗಲು ಪಂದ್ಯದಲ್ಲಿ ಬಲಿಷ್ಠ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಪಂಜಾಬ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಅಜೇಯವಾಗಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಪಂದ್ಯಾವಳಿ ಕೊನೆಯ ಹಂತಕ್ಕೆ ತಲುಪುತ್ತಿರುವುದರಿಂದ ತಂಡಕ್ಕೆ ಸ್ವಲ್ಪ ಹೆಚ್ಚು ಅಗತ್ಯವಿರುವ ಸ್ಥಿರತೆಯ ಅಗತ್ಯವಿದೆ. ಋತುವಿನ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಓಪನರ್ ಪಾತುಮ್ ನಿಸ್ಸಂಕಾ ಮತ್ತು ಮಧ್ಯಮ ಕ್ರಮಾಂಕ ಕೂಡ ಅಸ್ಥಿರ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಾದ ಘಾತಕ ವೇಗಿ ಮಿಚೆಲ್‌ ಸ್ಟಾರ್ಕ್‌ ತಂಡ ಸೇರಿದರೂ ಒಂದೆರಡು ಪಂದ್ಯದ ಬಳಿಕವೇ ಕಣಕ್ಕಿಳಿಯಲಿದ್ದಾರೆ.

DC vs PBKS: ಅಜೇಯ ಪಂಜಾಬ್‌ ಕಿಂಗ್ಸ್‌ ಗೆಲುವಿನ ಓಟಕ್ಕೆ ಬ್ರೇಕ್ ಹಾಕೀತೇ ಡೆಲ್ಲಿ ಕ್ಯಾಪಿಟಲ್ಸ್‌?

ಸಂಭಾವ್ಯ ತಂಡಗಳು

ದೆಹಲಿ ಕ್ಯಾಪಿಟಲ್ಸ್: ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್ (ವಿ.ಕೀ.), ನಿತೀಶ್ ರಾಣಾ, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಲುಂಗಿ ಎನ್‌ಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್.

ಇಂಪ್ಯಾಕ್ಟ್ ಪ್ಲೇಯರ್: ಅಶುತೋಷ್ ಶರ್ಮಾ.

ಪಂಜಾಬ್ ಕಿಂಗ್ಸ್: ಪ್ರಭ್‌ಸಿಮ್ರಾನ್ ಸಿಂಗ್ (ವಿ.ಕೀ.), ಪ್ರಿಯಾಂಶ್ ಆರ್ಯ, ಮಿಚೆಲ್ ಓವನ್, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವಿಜಯ್ಕುಮಾರ್ ವೈಶಾಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

ಇಂಪ್ಯಾಕ್ಟ್‌ ಆಟಗಾರ: ನೆಹಾಲ್ ವಧೇರಾ.