Sunday, 15th December 2024

ದೇವದತ್ ಪಡಿಕ್ಕಲ್ ಗೆ ಕರೋನಾ ಪಾಸಿಟಿವ್

ಚೆನ್ನೈ: ರಾಯಲ್ ಚ್ಯಾಲೆಂಜರ‍್ಸ್ ಬೆಂಗಳೂರು ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಗೆ ಕೋವಿಡ್-19 ಪಾಸಿಟಿವ್ ದೃಢ ಪಟ್ಟಿದ್ದು, ಆಟಗಾರನನ್ನು ಉಳಿದ ಆಟಗಾರರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪಡಿಕ್ಕಲ್ ಕಳೆದ ಆವೃತ್ತಿಯಲ್ಲಿ ಆರ್ ಸಿಬಿಯ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದರು. ಟಾಪ್ ಆರ್ಡರ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆರ್ ಸಿಬಿ ಪ್ಲೇ ಆಫ್ ತಲುಪುವಂತೆ ಮಾಡುವಲ್ಲಿ ಪಡಿಕ್ಕಲ್ ಅವರ ಪಾತ್ರ ದೊಡ್ಡದಿದೆ. ಅವರ ಅಲಭ್ಯ ಆರ್ ಸಿಬಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.

ಪಡಿಕ್ಕಲ್ ಕ್ವಾರಂಟೈನ್ ನಲ್ಲಿರುವುದರಿಂದ ಏ.9 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ನಡುವಣದ ಉದ್ಘಾಟನಾ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಪಡಿಕ್ಕಲ್ ಗೂ ಮುನ್ನ ಕೊಲ್ಕತ್ತಾ ನೈಟ್ ರೈಡರ್ಸ್ ಆಟಗಾರ ನಿತಿತ್ ರಾಣಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನ ಅಕ್ಷರ್ ಪಟೇಲ್ ಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily