ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ 17ನೇ ಆವೃತ್ತಿಯ ಪ್ರಾರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, 2023ರ ವರ್ಷಾಂತ್ಯದಲ್ಲಿ ನಡೆದ ಐಪಿಎಲ್ ಹರಾಜು ಪ್ರಕ್ರಿಯೆ ವೇಳೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದ ಶ್ರೀಲಂಕಾದ ಎಡಗೈ ವೇಗಿ ದಿಲ್ಶನ್ ಮಧುಶಂಕ ಗಾಯಕ್ಕೆ ತುತ್ತಾಗಿದ್ದು, ಅವರು ಮುಂಬೈ ತಂಡ ಕೂಡಿಕೊಳ್ಳುವ ಬದಲು ತವರಿಗೆ ವಾಪಸ್ ಆಗಿದ್ದಾರೆ.
ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದು ಸಂಪೂರ್ಣ ಗುಣಮುಖರಾದರೆ ಮಾತ್ರ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಹೊಸ ಸೀಸನ್ ಆರಂಭಿಸುವ ಇರಾದೆಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಟಗಾರರ ಗಾಯದ ಚಿಂತೆಯೇ ಹೊಸ ತಲೆನೋವಾಗಿ ಪರಿಣಮಿಸಿದೆ.