ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

District volleyball champions: ವಾಲಿಬಾಲ್‌ನಲ್ಲಿ ಜಿಲ್ಲಾ ಚಾಂಪಿಯನ್; ನಾಲ್ವರು ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಡಾಲ್ಫಿನ್ಸ್ ಕಾಲೇಜಿನ ತಂಡ ಎದುರಾಳಿ ತಂಡ ಗಳ ವಿರುದ್ಧ ಉತ್ತಮ ಪೈಪೋಟಿ ನೀಡಿ ಜಿಲ್ಲಾ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಈ ಸಾಧನೆ ಯೊಂದಿಗೆ ತಂಡ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ರತಿನಿಧಿ ಸುವ ಅವಕಾಶ ಪಡೆದಿದೆ.

ಶಿಡ್ಲಘಟ್ಟ: ಪಠ್ಯದ ಜತೆಗೆ ಕ್ರೀಡಾ ಕ್ಷೇತ್ರದಲ್ಲೂ ಗಮನಾರ್ಹ ಸಾಧನೆ ಮಾಡುತ್ತಿರುವ ಶಿಡ್ಲಘಟ್ಟದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2026–27ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಕ್ರೀಡಾಕೂಟ(District-level sports meet)ದಲ್ಲಿ ಉತ್ತಮ ಪ್ರದರ್ಶನ ನೀಡಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಜಿಲ್ಲಾ ಮಟ್ಟದ ವಾಲಿಬಾಲ್(Volleyball) ಪಂದ್ಯಾವಳಿಯಲ್ಲಿ ಡಾಲ್ಫಿನ್ಸ್ ಕಾಲೇಜಿನ ತಂಡ ಎದುರಾಳಿ ತಂಡ ಗಳ ವಿರುದ್ಧ ಉತ್ತಮ ಪೈಪೋಟಿ ನೀಡಿ ಜಿಲ್ಲಾ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಈ ಸಾಧನೆಯೊಂದಿಗೆ ತಂಡ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ರತಿನಿಧಿಸುವ ಅವಕಾಶ ಪಡೆದಿದೆ.

ವಾಲಿಬಾಲ್ ತಂಡದ ಗೆಲುವಿನೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆ ಮತ್ತಷ್ಟು ಅನಾವರಣಗೊಂಡಿದೆ. ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿಯೂ ಇದೇ ಉತ್ಸಾಹ ಮತ್ತು ಪರಿಶ್ರಮದೊಂದಿಗೆ ಸ್ಪರ್ಧಿಸಿ ಉತ್ತಮ ಫಲಿತಾಂಶ ಸಾಧಿಸುವ ವಿಶ್ವಾಸವಿದೆ ಎಂದು ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:Volleyball: ಮೇಲೂರಿನಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸಂಭ್ರಮ: ಸರ್ಜಾಪುರ ಜೈಭೀಮ್ ತಂಡಕ್ಕೆ ಚಾಂಪಿಯನ್ ಪಟ್ಟ

ಕ್ರೀಡೆಯಲ್ಲಿ ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಂಡು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಬೇಕು. ಗೆಲುವಿನಷ್ಟೇ ಸೋಲನ್ನೂ ಕ್ರೀಡಾ ಮನೋಭಾವದಿಂದ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು. ನಿರಂತರ ಅಭ್ಯಾಸ, ಶಿಸ್ತು ಹಾಗೂ ಸಂಯಮದೊಂದಿಗೆ ಸ್ಪರ್ಧೆ ಎದುರಿಸುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ಅಶೋಕ್ ಕ್ರೀಡಾಪಟುಗಳಿಗೆ ಸಲಹೆ ನೀಡಿದ್ದಾರೆ.

ನಾಲ್ವರಿಗೆ ರಾಜ್ಯಮಟ್ಟದ ಅವಕಾಶ

ವಾಲಿಬಾಲ್ ಜತೆಗೆ ಕರಾಟೆ ಹಾಗೂ ಭಾರ ಎತ್ತುವ ಸ್ಪರ್ಧೆಗಳಲ್ಲಿಯೂ ಡಾಲ್ಫಿನ್ಸ್ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಎರಡು ವಿಭಾಗಗಳಿಂದ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕ್ರೀಡಾ ಶಿಕ್ಷಣ ನಿರ್ದೇಶಕ ಪ್ರೊ. ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನಿರಂತರ ತರಬೇತಿ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶು ಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.