ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ನಾಯಕತ್ವ ವಹಿಸಿದ್ದಾರೆ. ಇದಕ್ಕೂ ಮುನ್ನ ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಜೋಹಾನ್ಸ್‌ಬರ್ಗ್‌ನಲ್ಲಿ ಗೆಲುವು ದಾಖಲಿಸಿದರೆ, ಅಜೇಯ 2-0 ಮುನ್ನಡೆ ಮೂಲಕ ಸರಣಿಯನ್ನೂ ತಮ್ಮದಾಗಿಸಿಕೊಳ್ಳಲಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮೊದಲ ವಿಕೆಟಿಗೆ ೩೬ ರನ್ ಜತೆಯಾಟ ನೀಡಿ, ಮಯಾಂಕ್ ಅಗರ್ವಾಲ್ ಔಟಾದರು. ಬೆನ್ನಲ್ಲೇ ಚೇತೇಶ್ವರ ಪೂಜಾರ ಮೂರು ರನ್ ಹಾಗೂ ಮಾಜಿ ಉಪನಾಯಕ ಅಜಿಂಕ್ಯ ರಹಾನೆ ರನ್ ಗಳಿಸೆ ತಂಡವನ್ನು ಸಂಕಷ್ಟಕ್ಕೆ ದೂಡಿದರು. ಮಾಜಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಸ್ಥಾನ ಪಡೆದಿರುವ ಹನುಮ ವಿಹಾರಿ ನಾಯಕ ಕೆ.ಎಲ್.ರಾಹುಲ್‌ಗೆ ಸಾಥ್ ನೀಡುತ್ತಿದ್ದಾರೆ.
ಇತ್ತೀಚಿನ ವರದಿ ಪ್ರಕಾರ, ಟೀಂ ಇಂಡಿಯಾ ಮೂರು ವಿಕೆಟ್ ನಷ್ಟಕ್ಕೆ ೮೬ ರನ್ ಗಳಿಸಿದೆ. ಆಫ್ರಿಕನ್ ಪರ ಓಲಿವಿರ್ ಎರಡು ವಿಕೆಟ್ ಕಿತ್ತರು.