Thursday, 12th December 2024

Duleep Trophy: ನಾಳೆಯಿಂದ ದುಲೀಪ್ ಟ್ರೋಫಿ; ಕೆ.ಎಲ್‌. ರಾಹುಲ್‌ಗೆ ಅಗ್ನಿ ಪರೀಕ್ಷೆ

Duleep Trophy

ಬೆಂಗಳೂರು: ದುಲೀಪ್ ಟ್ರೋಫಿ(Duleep Trophy) ಪ್ರಥಮ ದರ್ಜೆ ಟೂರ್ನಿ ನಾಳೆಯಿಂದ(ಗುರುವಾರ) ಆರಂಭಗೊಳ್ಳಲಿದೆ. ಭಾರತ ತಂಡದ ಪ್ರಮುಖ ಆಟಗಾರರಾದ ಕೆ.ಎಲ್‌. ರಾಹುಲ್‌, ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯ‌ರ್ ಸೇರಿ ಹಲವು ತಾರಾ ಆಟಗಾರರು ಈ ಬಾರಿ ಟೂರ್ನಿಯಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಪಂದ್ಯಾವಳಿ ರೋಚಕವಾಗಿ ಸಾಗುವ ನಿರೀಕ್ಷೆ ಇದೆ. ನಾಳೆ 2 ಪಂದ್ಯಗಳು ನಡೆಯಲಿವೆ. ಭಾರತ ‘ಎ’ ಹಾಗೂ ‘ಬಿ’ ತಂಡಗಳ ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ‘ಸಿ’ ಹಾಗೂ ‘ಡಿ’ ತಂಡಗಳ ನಡುವಿನ ಪಂದ್ಯ ಅನಂತಪುರದಲ್ಲಿ ನಡೆಯಲಿದೆ. ಈ ಪಂದ್ಯಗಳಲ್ಲಿನ ಪ್ರದರ್ಶನ ಗಮನಿಸಿ ಸೆಪ್ಟೆಂಬರ್‌ 19ರಿಂದ ಆರಂಭಗೊಳ್ಳಲಿರುವ ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿ ಭಾರತ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಯುವ ಆಟಗಾರರು ಸಿಕ್ಕ ಅವಕಾಶವನ್ನು 2 ಕೈಗಳಿಂದ ಬಾಚಿದರೆ ಭಾರತ ತಂಡಕ್ಕೂ ಆಯ್ಕೆಯಾಗಬಹುದು.

ಕರ್ನಾಟಕದ ಒಟ್ಟು 6 ಆಟಗಾರರು ಸ್ಥಾನ ಪಡೆದಿದ್ದು, ‘ಎ’ ಗುಂಪಿನಲ್ಲಿ ಶುಭಮನ್‌ ನಾಯಕತ್ವದಲ್ಲಿ ಕೆ.ಎಲ್.ರಾಹುಲ್ ಆಡಲಿದ್ದಾರೆ. ಭಾರತ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬೇಕಿದ್ದರೆ ರಾಹುಲ್ ಉತ್ತಮ ಪ್ರದರ್ಶನ ತೋರಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈಗಾಗಲೇ ಟಿ20 ತಂಡದಿಂದ ಹೊರಗುಳಿದಿರುವ ರಾಹುಲ್‌ ಲಂಕ ವಿರುದ್ಧದ ಏಕದಿನ ಸರಣಿಯಲ್ಲಿಯೂ ಕಳಪೆ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದರು. ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಬೇಕಿದ್ದರೆ ಅವರಿಗೆ ಇದು ಮಹತ್ವದ ಕೂಟವಾಗಿದೆ. ಒಂದೊಮ್ಮೆ ಇಲ್ಲಿಯೂ ವಿಫಲರಾದರೆ ಅವರಿಗೆ ಭಾರತ ತಂಡದಲ್ಲಿ ಬಹುತೇಕ ಬಾಗಿಲು ಬಂದ್‌ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ Mariyappan Thangavelu: ಕಂಚು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ತಂಗವೇಲು

ಭಾರತ ‘ಎ’ ತಂಡ

ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ

ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಭಾರತ ‘ಸಿ’ ತಂಡ

ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.