Thursday, 19th September 2024

ಡಿ.18ರಂದು ಭಾರತ ಬಾಕ್ಸಿಂಗ್ ಫೆಡರೇಷನ್‌ ಪದಾಧಿಕಾರಿಗಳ ಆಯ್ಕೆ ಚುನಾವಣೆ

ನವದೆಹಲಿ: ಭಾರತ ಬಾಕ್ಸಿಂಗ್ ಫೆಡರೇಷನ್‌ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಡಿ.18ರಂದು ನಡೆಯಲಿದೆ. ಕೋವಿಡ್‌-19 ಪಿಡುಗಿನ ಹಿನ್ನೆಲೆಯಲ್ಲಿ ಚುನಾವಣೆ ವಿಳಂಬವಾಗಿತ್ತು.

ಗುರುಗ್ರಾಮದಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಮತದಾನದ ಕುರಿತು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ಬಿಎಫ್‌ಐ ಪ್ರಧಾನ ಕಾರ್ಯದರ್ಶಿ ಜಾಯ್‌ ಕೊವ್ಲಿ ಹೇಳಿದ್ದಾರೆ. ಡಿ. 2ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

‘ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕೋವಿಡ್‌ ಕಾರಣದಿಂದಾಗಿ ಮುಂದೂಡಲಾಗಿತ್ತು’ ಎಂದು ಕೊವ್ಲಿ ತಿಳಿಸಿ ದ್ದಾರೆ.

ಸ್ಪೈಸ್‌ಜೆಟ್‌ ಕಂಪನಿಯ ಮಾಲೀಕ ಅಜಯ್ ಸಿಂಗ್‌ ಅವರು ಬಿಎಫ್‌ಐ ಅಧ್ಯಕ್ಷರಾಗಿದ್ದಾರೆ. 2016ರಲ್ಲಿ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆದು ಅಜಯ್‌ ಅಧಿಕಾರ ವಹಿಸಿಕೊಂಡಿದ್ದರು.

ಚುನಾವಣೆಯಲ್ಲಿ ಬಿಜೆಪಿಯ ಮಹಾರಾಷ್ಟ್ರ ಮುಖಂಡ ಆಶಿಶ್ ಶೆಲಾರ್ ಸವಾಲು ಎದುರಾಗಬಹುದೆಂದು ಹೇಳಲಾಗುತ್ತಿದೆ. 48 ವರ್ಷದ ಶೆಲಾರ್ ಮುಂಬೈ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿದ್ದಾರೆ.

Leave a Reply

Your email address will not be published. Required fields are marked *