Saturday, 14th December 2024

ಮೂರನೇ ಟೆಸ್ಟ್: ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಅಹ್ಮದಾಬಾದ್:  ಮೂರನೇ ಟೆಸ್ಟ್ ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಗುಜರಾತ್ ಅಹ್ಮದಾಬಾದ್ ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿದೆ. ಇಂದು ಆರಂಭವಾಗಿರುವ ಪಂದ್ಯದಲ್ಲಿ ಗೆಲುವ ಸಾಧಿಸುವ ಮೂಲಕ ಸರಣಿಯಲ್ಲಿ ಮೇಲುಗೈ ಸಾಧಿಸಲು ಉಭಯ ತಂಡಗಳು ಸಜ್ಜಾಗಿ ನಿಂತಿವೆ.

ಈ ಪಂದ್ಯಕ್ಕಾಗಿ ಭಾರತ ತಂಡ ಎರಡು ಬದಲಾವಣೆ ಮಾಡಿಕೊಂಡಿತು. ಮೊಹಮ್ಮದ್‌ ಸಿರಾಜ್ ಮತ್ತು ಕುಲದೀಪ್ ಯಾದವ್ ಈ ಪಂದ್ಯದಿಂದ ಹೊರಗುಳಿದರು. ಇವರ ಬದಲಿಗೆ ಜಸ್ಪ್ರೀತ್ ಬುಮ್ರಾ ಮತ್ತು ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದರು. ಅಂತೆಯೇ ಇಂಗ್ಲೆಂಡ್ ತಂಡ ಇಂದು ಬರೋಬ್ಬರಿ ನಾಲ್ಕು ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು, ರೋರಿ ಬರ್ನ್ಸ್, ಲಾರೆನ್ಸ್, ಒಲಿ ಸ್ಟೋನ್ ಮತ್ತು ಮೊಯಿನ್ ಅಲಿ ಬದಲಿಗೆ ಆಯಂಡರ್ಸನ್, ಆರ್ಚರ್, ಬೆರಿಸ್ಟೋ ಮ್ತತು ಜ್ಯಾಕ್ ಕ್ರಾಲಿ ತಂಡಕ್ಕೆ ಮರಳಿದ್ದಾರೆ.

ತಂಡಗಳು ಇಂತಿವೆ
ಭಾರತ

ರೋಹಿತ್ ಶರ್ಮಾ, ಶುಭ್ ಮನ್ ಗಿಲ್, ಚೇತೇಶ್ವರ ಪೂಜಾರಾ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ

ಇಂಗ್ಲೆಂಡ್
ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾಲೆ, ಜಾನಿ ಬೈರ್‌ ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪಪ್), ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್