Saturday, 14th December 2024

ಮೊದಲ ಟೆಸ್ಟ್: ಟಾಸ್ ಗೆದ್ದ ಜೋ ರೂಟ್ ಪಡೆ ಬ್ಯಾಟಿಂಗ್‌ ಆಯ್ಕೆ

ಚೆನ್ನೈ: ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಭಾರತ ತಂಡದ ಪರ ಎಡಗೈ ಸ್ಪಿನ್ನರ್ ಶಹಬಾಜ್ ನದೀಂ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಶಹಬಾಜ್ ಪಾಲಿಗಿದು ಎರಡನೇ ಪಂದ್ಯ. 2019ರಲ್ಲಿ ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಪದಾರ್ಪಣಾ ಟೆಸ್ಟ್ ಪಂದ್ಯದಲ್ಲಿ ಒಟ್ಟು ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಪ್ರಭಾವಿ ಎನಿಸಿದ್ದರು.

ಭಾರತ ತಂಡದ ಪರ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದರಿಂದಾಗಿ ಕರ್ನಾಟಕದ ಮಯಂಕ್ ಅಗರವಾಲ್ ಅವಕಾಶ ವಂಚಿತವಾಗಿದ್ದಾರೆ. ತವರಿನ ಟೆಸ್ಟ್ ಪಂದ್ಯದಲ್ಲೂ ರಿಷಭ್ ಪಂತ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.