ಲಂಡನ್, ಜು.2: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ಎರಡನೇ ಪಂದ್ಯ ಯಾವಾಗ ನಡೆಯಲಿದೆ, ಎಷ್ಟು ಸಮಯಕ್ಕೆ ಪಂದ್ಯ ಆರಂಭವಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ.
ಎರಡನೇ ಟಿ20 ಪಂದ್ಯ ಜುಲೈ 04ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೊರ್ಡ್ ಮೈದಾನದಲ್ಲಿ ನಡೆಯಲಿದೆ. ಮೊದಲ ಟಿ20 ಮ್ಯಾಚ್ ಭಾರತೀಯ ಕಾಲಮಾನ ರಾತ್ರಿ 10 ಗಂಟೆಯಿಂದ ಆರಂಭವಾಗಿತ್ತು. ಆದರೆ ಎರಡನೇ ಟಿ20 ಪಂದ್ಯವು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಇನ್ನು ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ 6.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಪಂದ್ಯಗಳ ಭಾರತದ ಟಿವಿ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಪಡೆದುಕೊಂಡಿದೆ. ಹೀಗಾಗಿ ಸೋನಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಈ ಪಂದ್ಯಗಳನ್ನು ವೀಕ್ಷಿಸಬಹುದು.
ಮಾಜಿ ವೇಗಿ ಶ್ರೀಶಾಂತ್ ಮೇಲಿನ 3 ವರ್ಷಗಳ ನಿಷೇಧ ಹಿಂಪಡೆದ ಕೇರಳ ಕ್ರಿಕೆಟ್ ಸಂಸ್ಥೆ
ಮೊದಲ ಪಂದ್ಯ ರದ್ದಾಗಿರುವುದರಿಂದ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತವಿದೆ. ಉಭಯ ತಂಡಗಳು ಎರಡನೇ ಪಂದ್ಯದಲ್ಲಿ ಗೆದ್ದು, ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ತುದಿಗಾಲಿನಲ್ಲಿ ನಿಂತಿವೆ. ಮ್ಯಾಂಚೆಸ್ಟರ್‌ನಲ್ಲಿಯೂ ಮಳೆ ಪಂದ್ಯಕ್ಕೆ ಅಡ್ಡಿ ಮಾಡಲಿದೆಯೇ ಎಂದು ಕಾದು ನೋಡಬೇಕಿದೆ.
ಚೆಸ್ಟರ್ ಲಿ ಸ್ಟ್ರೀಟ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರ ಅರ್ಧಶತಕಗಳ ಬಲದಿಂದ ಪ್ರವಾಸಿ ಭಾರತ ತಂಡವು ಇಂಗ್ಲೆಂಡ್ ಎದುರಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗೆ 189 ರನ್‌ಗಳ ಸವಾಲಿನ ಮೊತ್ತ ಗಳಿಸಿತು. ಆದರೆ ಇಂಗ್ಲೆಂಡ್ ಬ್ಯಾಟಿಂಗ್ ಆರಂಭಕ್ಕೂ ಮುನ್ನ ಭಾರೀ ಮಳೆ ಸುರಿದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು.
ಸಂಜು ಸ್ಯಾಮ್ಸನ್ (1) ಮತ್ತೆ ವಿಫಲರಾದರು. ಇಶಾನ್ ಕಿಶನ್ (0) ರನೌಟ್ ಆದರು. ಅಭಿಷೇಕ್ 24 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಿತ 59 ರನ್ ಗಳಿಸಿ ಔಟಾದರು. ಶ್ರೇಯಸ್ (68; 47ಎ, 4x6, 6x1) ಅಭಿಷೇಕ್ ಜೊತೆಗೆ 38 ಎಸೆತಗಳಲ್ಲಿ 82 ರನ್ ಸೇರಿಸಿದರು. ಕೊನೆಯಲ್ಲಿ ಶಿವಂ ದುಬೆ (42; 21ಎ, 4x2, 6x3) ಅಬ್ಬರದ ಬ್ಯಾಟಿಂಗ್ ಮೂಲಕ ತಂಡವನ್ನು 180 ಗಡಿ ದಾಟಿಸಿದರು. ಪಂದ್ಯ ರದ್ದಾದ ಕಾರಣ ಇವರ ಬ್ಯಾಟಿಂಗ್ ವ್ಯರ್ಥವಾಯಿತು.