ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಇಂದಿನಿಂದ ಆರಂಭವಾಗಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಈ ಪಂದ್ಯದಲ್ಲಿ ಇಂಗ್ಲೆಂಡ್ ಎರಡು ಬದಲಾವಣೆ ಮಾಡಿಕೊಂಡಿದೆ. ಜೋಸ್ ಬಟ್ಲರ್ ಬದಲಿಗೆ ಓಲಿ ಪೋಪ್ ಮತ್ತು ಸ್ಯಾಮ್ ಕರ್ರನ್ ಬದಲಿಗೆ ಕ್ರಿಸ್ ವೋಕ್ಸ್ ತಂಡಕ್ಕೆ ಆಗಮಿಸಿದ್ದಾರೆ. ಲಂಡನ್ ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಸರಣಿ ಮುನ್ನಡೆಗೆ ಉಭಯ ತಂಡಗಳು ಸೆಣಸಾಡುತ್ತಿದೆ.
ಭಾರತ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ. ವೇಗಿಗಳಾದ ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿ ಬದಲಿಗೆ ಉಮೇಶ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಂಡಕ್ಕೆ ಪ್ರವೇಶ ಪಡೆದಿದ್ದಾರೆ.
ತಂಡಗಳು:
ಭಾರತ: ಕೆ.ಎಲ್.ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾ), ಜಾನಿ ಬೈರ್‌ಸ್ಟೊ (ವಿ.ಕೀ), ಒಲ್ಲಿ ಪೋಪ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಒಲ್ಲಿ ರಾಬಿನ್ಸನ್, , ಜೇಮ್ಸ್ ಆಂಡರ್ಸನ್, ಕ್ರೆಗ್ ಓವರ್ಟನ್