Saturday, 23rd November 2024

ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ

ಲಾರ್ಡ್ಸ್: ಪ್ರವಾಸಿ ಭಾರತ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮಳೆಯಿಂದಾಗಿ ಟಾಸ್ ಅಲ್ಪ ವಿಳಂಬಗೊಂಡಿತ್ತು. ಇತ್ತೀಚಿನ ವರದಿ ಪ್ರಕಾರ, ಭಾರತ ವಿಕೆಟ್ ನಷ್ಟವಿಲ್ಲದೆ 44 ರನ್‌ ಗಳಿಸಿದೆ. ಆರಂಭಿಕ ರೋಹಿತ್‌ ಶರ್ಮಾ ೩೫ (ಆರು ಬೌಂಡರಿ) ಗಳಿಸಿ ಬ್ಯಾಟಿಂಗ್‌ ಮುಂದುವರಿಸಿದ್ದಾರೆ.

ಭಾರತ ತಂಡದಲ್ಲಿ ಪ್ರಮುಖವಾಗಿ ಒಂದು ಬದಲಾವಣೆ ಮಾಡಲಾಗಿದ್ದು, ಬಲಗೈ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ತಂಡವನ್ನು ಸೇರ್ಪಡೆಯಾಗಿ, ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ತಮ್ಮ ಸ್ಥಾನ ಬಿಟ್ಟು ಕೊಟ್ಟಿದ್ದಾರೆ. ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.

ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ ತರಲಾಗಿದ್ದು, ಕ್ರಾವ್ಲಿ ಬದಲು ಹಸೀಬ್ ಹಮೀದ್, ಸ್ಟುವರ್ಟ್ ಬ್ರಾಡ್ ಬದಲು ಮಾರ್ಕ್ ವುಡ್ ಮತ್ತು ಲಾರೆನ್ಸ್ ಬದಲಿಗೆ ಮೊಯಿನ್ ಅಲಿಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಟೆಸ್ಟ್ ಪಂದ್ಯಗಳ ಸರಣಿಯ ಪೈಕಿ ಮಳೆ ಬಾಧಿತ ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿತ್ತು.