Sunday, 15th December 2024

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ

ಮೇಲ್ಬರ್ನ್: ಸೆಪ್ಟೆಂಬರ್ 11 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ತಂಡಗಳನ್ನು ಘೋಷಿಸಲಾಗಿದೆ. ಹೊಸಮುಖ ಗಳಾಗಿ ಜೋರ್ಡಾನ್ ಕಾಕ್ಸ್, ಜಾಕೋಬ್ ಬೆಥೆಲ್ ಡಾನ್ ಮೌಸ್ಲಿ ಜೋಶ್ ಹಲ್ ಮತ್ತು ಜಾನ್ ಟರ್ನರ್ ಕಾಣಿಸಿಕೊಂಡಿದ್ದಾರೆ.

ಇದೇ ವೇಳೆ ನಾಲ್ವರು ಆಟಗಾರರು ಇಂಗ್ಲೆಂಡ್ ತಂಡದಿಂದ ಹೊರಬಿದ್ದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಸರಣಿಗಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಿಂದ ಖಾಯಂ ಸದಸ್ಯರಾಗಿದ್ದ ನಾಲ್ವರು ಆಟಗಾರರಿಗೆ ಮುಂಬರುವ ಸರಣಿಯಿಂದ ಗೇಟ್ ಪಾಸ್ ನೀಡಲಾಗಿದೆ.

ಏಕದಿನ ವಿಶ್ವಕಪ್ 2023ರ ವೇಳೆ ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಂಡಿದ್ದ ಜೋ ರೂಟ್ ಅವರನ್ನು ಮುಂಬರುವ ಸರಣಿಯಿಂದ ಕೈ ಬಿಡಲಾಗಿದೆ.

ಸ್ಟಾರ್ ಆಲ್​ರೌಂಡರ್ ಮೊಯೀನ್ ಅಲಿ ಕೂಡ ಏಕದಿನ ಮತ್ತು ಟಿ20 ತಂಡಗಳಿಂದ ಹೊರಬಿದ್ದಿದ್ದಾರೆ.  ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಕೂಡ ಇಂಗ್ಲೆಂಡ್ ತಂಡದಿಂದ ಹೊರಬಿದ್ದಿದ್ದಾರೆ.

ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ ಅವರನ್ನು ಸಹ ಆಸ್ಟ್ರೇಲಿಯಾ ಸರಣಿಯಿಂದ ಹೊರಗಿಡಲಾಗಿದೆ.

***

ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೋಶ್ ಹಲ್, ವಿಲ್ ಜಾಕ್ಸ್, ಮ್ಯಾಥ್ಯೂ ಪಾಟ್ಸ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೇಮಿ ಸ್ಮಿತ್, ರೀಸ್ ಟೋಪ್ಲಿ, ಜಾನ್ ಟರ್ನರ್.

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋರ್ಡನ್ ಕಾಕ್ಸ್, ಸ್ಯಾಮ್ ಕರನ್, ಜೋಶ್ ಹಲ್, ವಿಲ್ ಜಾಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಸಾಕಿಬ್ ಮಹಮೂದ್, ಡಾನ್ ಮೌಸ್ಲಿ, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಜಾನ್ ಟರ್ನರ್.