Thursday, 19th September 2024

ರಾಷ್ಟ್ರೀಯ ತಂಡಕ್ಕೆ ಮರಳಲಿದ್ದಾರೆ ಫಾಫ್ ಡು ಪ್ಲೆಸಿಸ್

ಅಬುಧಾಬಿ: ಟಿ10 ಮಾದರಿಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ಆಟಗಾರ ಫಾಫ್ ಡು ಪ್ಲೆಸಿಸ್ ಅವರು ರಾಷ್ಟ್ರೀಯ ತಂಡಕ್ಕೆ ಮರಳುವ ಬಗ್ಗೆ ಮಾತನಾಡಿದ್ದಾರೆ.

ಅದರಲ್ಲೂ ಟಿ20 ವಿಶ್ವಕಪ್​ ವೇಳೆಗೆ ತಂಡದಲ್ಲಿ ಸ್ಥಾನ ಸಿಕ್ಕರೆ ಆಡುವುದಾಗಿ ಕೋಚ್‌ಗೆ​ ಹೇಳಿರುವುದಾಗಿ ಮಾಧ್ಯಮಗಳ ಜೊತೆ ಮಾಹಿತಿ ಹಂಚಿ ಕೊಂಡಿದ್ದಾರೆ.

ಟಿ20 ವಿಶ್ವಕಪ್​ ಹಿನ್ನೆಲೆಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ತಂಡಕ್ಕೆ ಹಿರಿಯ ಆಟಗಾರರು ವಿಶ್ವಕಪ್​ ಉದ್ದೇಶದಿಂದ ಮರಳುತ್ತಾರೆ.  ಈ ವದಂತಿಗೆ ಪುಷ್ಠಿ ನೀಡುವಂತೆ ಫಾಫ್​ ಮಾತನಾಡಿದ್ದಾರೆ. 2024ರ ಜೂನ್​ನಲ್ಲಿ ಟಿ20 ವಿಶ್ವಕಪ್​ ಪಂದ್ಯ ವೆಸ್ಟ್​ ಇಂಡೀಸ್​ ಮತ್ತು ಯುಎಸ್‌ಎನಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *