Thursday, 12th December 2024

ಫಿಫಾ ಫುಟ್ಬಾಲ್: ವಿವಾಹೇತರ ಲೈಂಗಿಕ ಸಂಪರ್ಕಕ್ಕೆ ತಡೆ…!

ದೋಹಾ: ಫಿಫಾ ಫುಟ್ಬಾಲ್ ವಿಶ್ವಕಪ್ ವೇಳೆ ಆಟಗಾರು ಮತ್ತು ಅಭಿಮಾನಿಗಳ ನಡುವೆ ಲೈಂಗಿಕ ಸಂಪರ್ಕ ಕ್ರಿಯೆಗಳು ವ್ಯಾಪಕವಾಗಿ ನಡೆಯುತ್ತಿದೆ. ಇದೀಗ ಇದನ್ನು ನಿಷೇಧಿಸಲಾಗಿದೆ.

ಮುಂಬರುವ ನಬೆಂಬರ್‌ ಮತ್ತು ಡಿಸೆಂಬರ್‌ ನಲ್ಲಿ ಕತಾರ್‌ನಲ್ಲಿ ನಡೆಯ ಲಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ವೇಳೆ ವಿವಾಹೇತರ ಲೈಂಗಿಕ ಸಂಪರ್ಕಕ್ಕೆ ನಿಷೇಧ ಹೇರಲಾಗಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಆಯೋಜಕರು ಈಗಾಗಲೇ ಕಠಿಣ ನಿಯಮಗಳನ್ನು ಜಾರಿ ಮಾಡಿದ್ದು, ಯಾವುದೇ ಆಟಗಾರ ಅಥವಾ ಅಭಿಮಾನಿಗಳು ವಿವಾಹೇತರ ಲೈಂಗಿಕ ಸಂಪರ್ಕ ಹೊಂದುವುದನ್ನು ನಿಷೇಧಿಸಲಾಗಿದೆ.ದಂಪತಿ ಮಾತ್ರ ಲೈಂಗಿಕ ಕ್ರಿಯೆಯಲ್ಲಿ ತೊಡಗಬಹುದು ಎಂದು ತಿಳಿಸಿದೆ. ಅಷ್ಟೇ ಅಲ್ಲದೇ ಸಲಿಂಗಕಾಮವನ್ನು ಕೂಡಾ ನಿಷೇಧಿಸಿದೆ. ಫಿಫಾ ವೇಳೆ ಸೆಕ್ಸ್ ಕ್ರಿಯೆಗಳು ವ್ಯಾಪಕವಾಗಿ ನಡೆಯುತ್ತಿದ್ದು, ಇದೇ ಮೊದಲ ಬಾರಿ ಸೆಕ್ಸ್‌ಗೆ ನಿಷೇಧ ಹೇರಲಾಗಿದೆ ಎಂದು ವರದಿಯಾಗಿದೆ.